ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಗಳು ಇವರು….

ಬೆಂಗಳೂರು: ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ (SSLC Exam Result 2023) ಪ್ರಕಟವಾಗಿದೆ. ಈ ಬಾರಿ 83.89% ಫಲಿತಾಂಶ ಬಂದಿದೆ. ಒಟ್ಟು 7,00,619 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಈ ಪೈಕಿ 3,41,108 ವಿದ್ಯಾರ್ಥಿಗಳು ಹಾಗೂ 3,59,511 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಈ ಬಾರಿಯೂ ಸಹ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ.
625 ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಗಳು
ಭೂಮಿಕಾ ಪೈ- ನ್ಯೂ ಮೆಕಾಲೆ ಶಾಲೆ, ಹೊಸೂರು ರಸ್ತೆ, ಬೆಂಗಳೂರು
ಯಶಸ್​​ ಗೌಡ- ಬಿಜಿಎಸ್​ ಶಾಲೆ, ಅಗಲಗುರ್ಕಿ, ಚಿಕ್ಕಬಳ್ಳಾಪುರ ಜಿಲ್ಲೆ
ಅನುಪಮಾ ಶ್ರೀಶೈಲ ಹಿರೆಹೋಳಿ- ಶ್ರೀಕುಮಾರೇಶ್ವರ ಶಾಲೆ, ಸವದತ್ತಿ
ಭೀಮನ ಗೌಡ​-ಆಕ್ಸ್​ಫರ್ಡ್​ ಆಂಗ್ಲ ಶಾಲೆ, ನಾಗರಬೆಟ್ಟ, ವಿಜಯಪುರ
ಎಸ್‌ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಗ್ರೇಡ್​ವಾರು ವಿದ್ಯಾರ್ಥಿಗಳ ಫಲಿತಾಂಶ
A+ ಗ್ರೇಡ್ ಪಡೆದ ವಿದ್ಯಾರ್ಥಿಗಳ ಸಂಖ್ಯೆ-61,003
A ಗ್ರೇಡ್ ಪಡೆದ ವಿದ್ಯಾರ್ಥಿಗಳ ಸಂಖ್ಯೆ- 1,47,634
B+ ಗ್ರೇಡ್ ಪಡೆದ ವಿದ್ಯಾರ್ಥಿಗಳ ಸಂಖ್ಯೆ- 1,75,489
B ಗ್ರೇಡ್ ಪಡೆದ ವಿದ್ಯಾರ್ಥಿಗಳ ಸಂಖ್ಯೆ- 1,70,296
C+ ಗ್ರೇಡ್ ಪಡೆದ ವಿದ್ಯಾರ್ಥಿಗಳ ಸಂಖ್ಯೆ- 1,16,819
C ಗ್ರೇಡ್ ಪಡೆದ ವಿದ್ಯಾರ್ಥಿಗಳ ಸಂಖ್ಯೆ- 19,301
ಜಿಲ್ಲಾವಾರು ಫಲಿತಾಂಶ ನೋಡುವುದಾದರೆ ಚಿತ್ರದುರ್ಗ ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ, ಮಂಡ್ಯ ಎರಡನೇ ಸ್ಥಾನ, ಇನ್ನು ಹಾಸನಕ್ಕೆ ಮೂರನೇ ಸ್ಥಾನ ಸಿಕ್ಕಿದೆ. ಯಾದಗಿರಿ ಕೊನೆ ಸ್ಥಾನದಲ್ಲಿದೆ.

ಪ್ರಮುಖ ಸುದ್ದಿ :-   ಚಿಕ್ಕಮಗಳೂರಿನಲ್ಲಿ ವಕೀಲನ ಮೇಲೆ ಹಲ್ಲೆ : ಸ್ವಯಂಪ್ರೇರಿತ ದೂರು ದಾಖಲಿಸಿ ವಿಚಾರಣೆ ನಡೆಸಿದ ಹೈಕೋರ್ಟ್‌

1 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement