ಕರ್ನಾಟಕದ ಸಾರ್ವಭೌಮತ್ವದ ಬಗ್ಗೆ ಹೇಳಿಕೆ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಬಿಜೆಪಿ ದೂರು

posted in: ರಾಜ್ಯ | 0

ಬೆಂಗಳೂರು : ಕರ್ನಾಟಕದ ಪ್ರತಿಷ್ಠೆ, ಸಾರ್ವಭೌಮತೆ ಅಥವಾ ಸಮಗ್ರತೆಗೆ ಧಕ್ಕೆ ತರಲು ಯಾರಿಗೂ ಅವಕಾಶ ನೀಡುವುದಿಲ್ಲ” ಎಂಬ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿಯವರ ಹೇಳಿಕೆಯ ವಿರುದ್ಧ ಭಾರತೀಯ ಜನತಾ ಪಕ್ಷ (ಬಿಜೆಪಿ) ದೂರು ದಾಖಲಿಸಿದೆ. ಬಿಜೆಪಿ ಪರವಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ದೂರು ದಾಖಲಿಸಿದ್ದಾರೆ.
ಸೋನಿಯಾ ಗಾಂಧಿಯವರು ಕನ್ನಡಿಗರ ಬಗ್ಗೆ ಸಂಶಯ ಬರುವ ರೀತಿ ಮಾತನಾಡಿದ್ದಾರೆ. ಭಾರತದ ಸಾರ್ವಭೌಮತ್ವದ ವಿರುದ್ಧ ಸೋನಿಯಾ ಗಾಂಧಿ ಮಾತನಾಡಿದ್ದಾರೆ ಹೀಗಾಗಿ ಇದರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಸಚಿವೆ ದೂರಿನಲ್ಲಿ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.
ದೂರಿನ ಪ್ರಕಾರ ಸೋನಿಯಾ ಗಾಂಧಿಯವರ ಹೇಳಿಕೆಗಳು ‘ವಿಭಜಕ’ ಸ್ವರೂಪದ್ದಾಗಿದೆ ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ (ಇಸಿ) ದೂರು ಸಲ್ಲಿಸಿದೆ. ಇಂತಹ ಹೇಳಿಕೆ ನೀಡಿರುವ ಸೋನಿಯಾ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಬಿಜೆಪಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಈ ಹೇಳಿಕೆಯನ್ನು “ಆಘಾತಕಾರಿ ಮತ್ತು ಸ್ವೀಕಾರಾರ್ಹವಲ್ಲ” ಎಂದು ಬಣ್ಣಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ದೂರು ದಾಖಲಿಸಿದ್ದಾರೆ. ಸೋನಿಯಾ ಗಾಂಧಿ ಅವರು ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಉಲ್ಲಂಘಿಸಿದ್ದಾರೆ ಮತ್ತು “ಇಂತಹ ಹೇಳಿಕೆಯನ್ನು” ನೀಡಿದ್ದಕ್ಕಾಗಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.

ಇಂದಿನ ಪ್ರಮುಖ ಸುದ್ದಿ :-   "ನಾನು ನಿರೀಕ್ಷಿಸಿರಲಿಲ್ಲ...": ನೂತನ ಸಂಸತ್ತಿನ ಉದ್ಘಾಟನೆಗೆ ಸಾಕ್ಷಿಯಾಗಿದ್ದಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿಯ ಸಂಚಾಲಕರಾದ ಕರಂದ್ಲಾಜೆ ಅವರು ಸೋನಿಯಾ ವಿರುದ್ಧ ಎಫ್‌ಐಆರ್ ದಾಖಲಿಸಲು ಮತ್ತು ಅನುಕರಣೀಯ ದಂಡನಾತ್ಮಕ ಕ್ರಮ ಕೈಗೊಳ್ಳಲು ನಿರ್ದೇಶನ ನೀಡುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.ಸೋನಿಯಾ ಗಾಂಧಿಯವರು ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಸೇರಿದಂತೆ ಕಾಂಗ್ರೆಸ್‌ ಅಭ್ಯರ್ಥಿಗಳ ಪ್ರಚಾರ ನಡೆಸಿ ಮಾತನಾಡಿದ್ದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಇಂದಿನ ಪ್ರಮುಖ ಸುದ್ದಿ :-   ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ..?

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement