ಕುಮಟಾ: ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಮಟ್ಟದ 8 ರ‍್ಯಾಂಕ್‌ಗಳೊಂದಿಗೆ ನೂರಕ್ಕೆ ನೂರು ಸಾಧನೆ ಮಾಡಿದ ಕೊಂಕಣ ಎಜ್ಯುಕೇಶನ್‌ ಪ್ರೌಢಶಾಲೆ

ಕುಮಟಾ: ಸೋಮವಾರ ಪ್ರಕಟವಾದ 2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದಲ್ಲಿ ಕುಮಟಾದ ಕೊಂಕಣ ಎಜ್ಯುಕೇಶನ್‌ ಟ್ರಸ್ಟ್‌ನ ಸಿವಿಎಸ್‌ಕೆ ಪ್ರೌಢಶಾಲೆಯು ನೂರಕ್ಕೆ ನೂರು ಫಲಿತಾಂಶ ಪಡೆದಿದೆ. ರಾಜ್ಯಕ್ಕೆ ಚತುರ್ಥ ಸ್ಥಾನ ಪಡೆದು, ರಾಜ್ಯ ಮಟ್ಟದಲ್ಲಿ ರ‍್ಯಾಂಕ್‌ ಗಳಿಸುವ ಪರಂಪರೆಯನ್ನು ಮುಂದುವರೆಸಿದೆ.
ಪರೀಕ್ಷೆಗೆ ಕುಳಿತ 139 ವಿದ್ಯಾರ್ಥಿಗಳೂ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು, 8 ವಿದ್ಯಾರ್ಥಿಗಳು ರಾಜ್ಯಮಟ್ಟದ ಟಾಪ್‌-10 ರ‍್ಯಾಂಕ್‌ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಅದಿತಿ ಪ್ರಕಾಶ ವೈದ್ಯ ಹಾಗೂ ಸುಮಂತ ಮಂಜುನಾಥ ಶಾಸ್ತ್ರಿ 625 ಕ್ಕೆ 622 (99.52%) ಅಂಕಗಳೊಂದಿಗೆ ರಾಜ್ಯಕ್ಕೆ ಚತುರ್ಥ ಸ್ಥಾನ, ಶ್ರೇಯಸ್‌ ಜನಾರ್ಧನ ನಾಯ್ಕ ಹಾಗೂ ಆದಿತ್ಯ ಮಂಜುನಾಥ ಹೆಗಡೆ 625 ಕ್ಕೆ 621 (99.36%) ಅಂಕಗಳೊಂದಿಗೆ ರಾಜ್ಯಕ್ಕೆ ಐದನೇ ಸ್ಥಾನ, ಆಕಾಶ ಕಿರಣ ಶೇಟಿಯಾ 625 ಕ್ಕೆ 620 (99.2%) ಅಂಕಗಳೊಂದಿಗೆ ರಾಜ್ಯಕ್ಕೆ ಆರನೇ ಸ್ಥಾನ, ಯಶಸ್‌ ಬಾಬು ನಾಯ್ಕ 625 ಕ್ಕೆ 618 (98.88%) ಅಂಕಗಳೊಂದಿಗೆ ರಾಜ್ಯಕ್ಕೆ ಎಂಟನೇ ಸ್ಥಾನ, ಆದಿತ್ಯ ಅರುಣಕುಮಾರ ಹೆಗಡೆ 625ಕ್ಕೆ 617 (98.72%) ಅಂಕಗಳೊಂದಿಗೆ ರಾಜ್ಯಕ್ಕೆ ಒಂಭತ್ತನೇ ಸ್ಥಾನ, ಮತ್ತು ಅಪೂರ್ವ ಗಜಾನನ ಭಟ್ಟ 625 ಕ್ಕೆ 616 (98.56%) ಅಂಕಗಳೊಂದಿಗೆ ರಾಜ್ಯಕ್ಕೆ ಹತ್ತನೇ ಸ್ಥಾನ ಪಡೆದು ಸಾಧನೆಗೈದಿದ್ದಾರೆ.
ಪ್ರಥಮ ಭಾಷೆಯಲ್ಲಿ 34 ಮಂದಿ ವಿದ್ಯಾರ್ಥಿಗಳು, ದ್ವಿತೀಯ ಭಾಷೆಯಲ್ಲಿ 9 ಮಂದಿ, ತೃತೀಯ ಭಾಷೆಯಲ್ಲಿ 27 ಮಂದಿ, ಗಣಿತದಲ್ಲಿ 10 ಮಂದಿ, ವಿಜ್ಞಾನದಲ್ಲಿ 5 ಮಂದಿ, ಹಾಗೂ ಸಮಾಜ ವಿಜ್ಞಾನದಲ್ಲಿ 7 ವಿದ್ಯಾರ್ಥಿಗಳು ಪೂರ್ಣಾಂಕಗಳನ್ನು ಪಡೆದು ಗಮನಾರ್ಹ ಸಾಧನೆ ಮಾಡಿರುತ್ತಾರೆ.
ಐವರು ವಿದ್ಯಾರ್ಥಿಗಳು 99% ಕ್ಕಿಂತ ಅಧಿಕ, 11 ವಿದ್ಯಾರ್ಥಿಗಳು 98% ಕ್ಕಿಂತ ಅಧಿಕ, 34 ವಿದ್ಯಾರ್ಥಿಗಳು 95% ಕ್ಕಿಂತ ಅಧಿಕ, 84 ವಿದ್ಯಾರ್ಥಿಗಳು 90% ಕ್ಕಿಂತ ಅಧಿಕ, 111 ವಿದ್ಯಾರ್ಥಿಗಳು 85% ಕ್ಕಿಂತ ಅಧಿಕ ಅಂಕ ಗಳಿಸಿದರೆ, ಉಳಿದ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ.
ಶಾಲೆಯ ಪರಿಮಾಣಾತ್ಮಕ ಫಲಿತಾಂಶ 100% ಹಾಗೂ ಗುಣಾತ್ಮಕ ಫಲಿತಾಂಶ 95.63% ದೊಂದಿಗೆ ಶಾಲೆಯು ಈ ವರ್ಷವೂ ಸಹ ಉತ್ಕೃಷ್ಟ ಫಲಿತಾಂಶವನ್ನು ದಾಖಲಿಸಿದೆ.
ಶಾಲಾ ಆಡಳಿತ ಮಂಡಳಿ, ಶೈಕ್ಷಣಿಕ ಸಲಹೆಗಾರರು, ಮುಖ್ಯಾಧ್ಯಾಪಕಿಯರು, ಶಿಕ್ಷಕ ಹಾಗೂ ಪಾಲಕ ವೃಂದ ಶಾಲೆಯ ಸಾಧನೆಗೆ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 2

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement