ಶಾಂತಿಯುತ ಚುನಾವಣೆಗೆ ರಾಜ್ಯಾದ್ಯಂತ 1.56 ಲಕ್ಷ ಪೊಲೀಸರ ನಿಯೋಜನೆ

posted in: ರಾಜ್ಯ | 0

ಬೆಂಗಳೂರು: ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಒಂದು ದಿನ ಬಾಕಿ ಇದ್ದು ಈ ಹಿನ್ನೆಲೆಯಲ್ಲಿ ಮತದಾನಕ್ಕೆ ಭಾರಿ ಭದ್ರತೆ ಕೈಗೊಳ್ಳಲಾಗಿದೆ. ಮತದಾನ ಪ್ರಕ್ರಿಯೆಗಾಗಿ ರಾಜ್ಯದಲ್ಲಿ ಒಟ್ಟು  1.56 ಲಕ್ಷ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
ಚುನಾವಣೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್​ ಮಾಡಲಾಗಿದೆ. ಚುನಾವಣೆ ಭದ್ರತೆಗೆ ಬೇಕಾದ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಭದ್ರತಾ ಕಾರ್ಯದಲ್ಲಿ 304 ಡಿವೈಎಸ್​ಪಿ, 991 ಪೊಲೀಸ್​ ಇನ್ಸ್​ಪೆಕ್ಟರ್​, 2,610 ಪಿಎಸ್‌​ಐ, 5,803 ಎಎಸ್‌ಐ ಸೇರಿದಂತೆ 84,000 ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. 8.5 ಸಾವಿರ ಹೋಂಗಾರ್ಡ್​​ಗಳನ್ನು, 650 ಸಿಆರ್​ಪಿಎಫ್ ತುಕಡಿ, ಕೆಎಸ್​ಆರ್​ಪಿ ತುಕಡಿಗಳ ನಿಯೋಜನೆ ಮಾಡಲಾಗಿದೆ. ಹೆಚ್ಚಿನ ಭದ್ರತೆಗಾಗಿ ಬೇರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ಗೋವಾದಿಂದಲೂ ಪೊಲೀಸ್ ಸಿಬ್ಬಂದಿ ಕರೆಸಿಕೊಳ್ಳಲಾಗಿದೆ. ಈ ಹಿಂದೆ ಯಾವತ್ತೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಸಿಬ್ಬಂದಿ ನಿಯೋಜಿಸಿರಲಿಲ್ಲ, ಚುನಾವಣಾಧಿಕಾರಿಗಳ ಕೆಲವು ಮಾನದಂಡಗಳ ಪ್ರಕಾರ ನಿಯೋಜನೆ ಮಾಡಲಾಗಿದೆ.
ರಾಜ್ಯದ ಸೂಕ್ಷ್ಮ ಮತಗಟ್ಟೆ ಹಾಗೂ ಅತಿ ಸೂಕ್ಷ್ಮ ಮತಗಟ್ಟೆಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಐಪಿಎಸ್ ಅಧಿಕಾರಿಗಳ ಮೂಲಕ 5 ದಿನಗಳಿಂದ ನಿಗಾ ಇಡಲಾಗಿದೆ ಎಂದು ಅಲೋಕಕುಮಾರ ತಿಳಿಸಿದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಪೊಲೀಸರು ಹಣೆಗೆ ಕುಂಕುಮ, ತಿಲಕ ಇಡಬಾರದೆಂದು ಹೇಳಿಲ್ಲ: ಗೃಹ ಸಚಿವ ಡಾ. ಪರಮೇಶ್ವರ ಸ್ಪಷ್ಟನೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement