ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಹುಬ್ಬಳ್ಳಿಯ ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆ ಫಲಿತಾಂಶ ನೂರಕ್ಕೆ 100

ಹುಬ್ಬಳ್ಳಿ: ನಗರದ ಘಂಟಿಕೇರಿಯ ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆಯು ಈ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನೂರಕ್ಕೆ 100 ಫಲಿತಾಂಶ ಪಡೆಯುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದೆ.
ಪರೀಕ್ಷೆಗೆ ಕುಳಿತ 86 ವಿದ್ಯಾರ್ಥಿಗಳಲ್ಲಿ 43 ವಿದ್ಯಾರ್ಥಿಗಳು ಶೇ.85ಕ್ಕಿಂತ ಹೆಚ್ಚಿನ ಅಂಕ ಪಡೆದಿದ್ದಾರೆ. ಅದರಲ್ಲಿ 23 ವಿದ್ಯಾರ್ಥಿಗಳು ಶೇ.90ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿದ್ದಾರೆ. 43 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರಣರಾಗಿದ್ದಾರೆ.
ಚಂದನಾ ಜೈನ್‌ (ಶೇ 94%) ಶಾಲೆಗೆ ಪ್ರಥಮ, ಪಲಕ್‌ ಜೈನ್‌ (ಶೇ.93%), ಅಮಿತ್‌ ಭಟ್‌ (ಶೇ.93%) ಹಾಗೂ ಸಂಚಿತಾ ನಾಗ್ಪುರ (ಶೇ.93%) ಅಂಕ ಪಡೆದು ಶಾಲೆಗೆ ದ್ವಿತೀಯ ಸ್ಥಾನ ಹಂಚಿಕೊಂಡಿದ್ದಾರೆ. ಅಲ್ಲದೆ, ಇಂಗ್ಲಿಷ್‌ನಲ್ಲಿ-02, ಕನ್ನಡ-08, ಹಿಂದಿ-08, ಗಣಿತ-02, ವಿಜ್ಞಾನ-03, ಸಮಾಜ ವಿಜ್ಞಾನ-11 ವಿದ್ಯಾರ್ಥಿಗಳು ನೂರಕ್ಕೆ 100 ಅಂಕಗಳನ್ನು ಗಳಿಸಿದ್ದಾರೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶಾಲಾ ವಿದ್ಯಾರ್ಥಿಗಳ ಈ ಅತ್ಯುತ್ತಮ ಸಾಧನೆಗೆ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಭವರಲಾಲ ಸಿ.ಜೈನ್‌, ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement