ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನಗೆ ಹಿನ್ನಡೆ: ಬಂಧನ ‘ಕಾನೂನುಬದ್ಧ’ ಎಂದ ಇಸ್ಲಾಮಾಬಾದ್ ಹೈಕೋರ್ಟ್

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಮಂಗಳವಾರ ನ್ಯಾಯಾಲಯದ ಆವರಣದ ಹೊರಗಿನಿಂದ ಪಾಕಿಸ್ತಾನಿ ರೇಂಜರ್‌ಗಳು ಬಂಧಿಸಿದ ಕೆಲವೇ ಗಂಟೆಗಳ ನಂತರ ಇಸ್ಲಾಮಾಬಾದ್ ಹೈಕೋರ್ಟ್ (ಐಎಚ್‌ಸಿ) ಅವರ ಬಂಧನವನ್ನು ‘ಕಾನೂನು’ ಬದ್ಧವಾಗಿದೆ ಎಂದು ತೀರ್ಪು ನೀಡಿದೆ. ಅಲ್-ಖಾದಿರ್ ಟ್ರಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಮ್ರಾನ್ ಖಾನ್ ಅವರನ್ನು ಬಂಧಿಸಲಾಗಿತ್ತು. ಲಾಹೋರ್‌ನಿಂದ ರಾಜಧಾನಿ ಇಸ್ಲಾಮಾಬಾದ್‌ಗೆ ಪ್ರಯಾಣಿಸಿದ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ … Continued

ಪಾಕಿಸ್ತಾನ ಜೈಲಿನಲ್ಲಿರುವ 199 ಭಾರತೀಯ ಮೀನುಗಾರರ ಬಿಡುಗಡೆಗೆ ನಿರ್ಧಾರ

ಕರಾಚಿ: ಪಾಕಿಸ್ತಾನದ ಸಾಗರ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿದ್ದ 199 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಲು ಪಾಕಿಸ್ತಾನ ನಿರ್ಧರಿಸಿದೆ. ಕರಾಚಿಯ ಲಾಂಧಿ ಸೆರೆಮನೆಯಲ್ಲಿ 199 ಭಾರತೀಯ ಮೀನುಗಾರರನ್ನು ಬಂಧಿಸಿ ಇರಿಸಲಾಗಿದೆ. ಈ ಮೀನುಗಾರರನ್ನು ಬಿಡುಗಡೆ ಮಾಡಿ ಶುಕ್ರವಾರ(ಮೇ 12)ರಂದು ವಾಘಾ ಗಡಿಯ ಮೂಲಕ ಭಾರತಕ್ಕೆ ಹಸ್ತಾಂತರಿಸಲು ಪಾಕಿಸ್ತಾನ ನಿರ್ಧರಿಸಿದೆ ಎಂದು ವರದಿಯಾಗಿದೆ. … Continued

ವೀಡಿಯೊಗಳು…: ಇಮ್ರಾನ್ ಖಾನ್ ಬಂಧನದ ನಂತರ ಪಾಕಿಸ್ತಾನದಲ್ಲಿ ಭುಗಿಲೆದ್ದ ಪ್ರತಿಭಟನೆ: ಬೆಂಬಲಿಗರಿಂದ ಪಾಕಿಸ್ತಾನ ಸೇನೆ ಪ್ರಧಾನ ಕಚೇರಿ, ಲಾಹೋರ್ ಕಾರ್ಪ್ಸ್ ಕಮಾಂಡರ್ ಮನೆ ಮೇಲೆ ದಾಳಿ

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಪಾಕಿಸ್ತಾನ ರೇಂಜರ್‌ಗಳು ಬಂಧಿಸಿದ ಕೆಲವೇ ಗಂಟೆಗಳ ನಂತರ, ಅವರ ಬೆಂಬಲಿಗರು ಲಾಹೋರ್ ಕ್ಯಾಂಟ್‌ನಲ್ಲಿರುವ ಕಾರ್ಪ್ಸ್ ಕಮಾಂಡರ್ಸ್ ಹೌಸ್‌ನಲ್ಲಿರುವ ಮನೆಗೆ ನುಗ್ಗಿದ್ದಾರೆ. “ಕಹಾ ಥಾ ಇಮ್ರಾನ್ ಖಾನ್ ಕೋ ನಾ ಛೇಡನಾ (ಇಮ್ರಾನ್ ಖಾನ್‌ಗೆ ಕಿರುಕುಳ ನೀಡಬೇಡಿ ಎಚ್ಚರಿಕೆ ನೀಡಿದ್ದೆವು ) ಎಂದು ವ್ಯಕ್ತಿಯೊಬ್ಬರು ಹೇಳುತ್ತಿರುವುದು ವೀಡಿಯೊದಲ್ಲಿ ಕೇಳುತ್ತದೆ. … Continued

ಜಮ್ಮು-ಕಾಶ್ಮೀರದ ನಂತರ ಈಗ ರಾಜಸ್ಥಾನದಲ್ಲಿ ಅತಿ ದೊಡ್ಡ ಲೀಥಿಯಂ ನಿಕ್ಷೇಪ ಪತ್ತೆ : ಭಾರತದ ಬೇಡಿಕೆಯ 80% ಪೂರೈಸುವ ನಿರೀಕ್ಷೆ..!

ನವದೆಹಲಿ : ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚಗೆ ದೇಶದ ಮೊದಲ ಬೃಹತ್ ಲೀಥಿಯಂ ನಿಕ್ಷೇಪಗಳು ಪತ್ತೆಯಾದ ಬೆನ್ನಲ್ಲೇ ಈಗ ರಾಜಸ್ಥಾನದ ನಾಗೌರ್ ಜಿಲ್ಲೆಯಲ್ಲಿ ಕೂಡ ಲೀಥಿಯಂ ನಿಕ್ಷೇಪಗಳು ಕಂಡುಬಂದಿವೆ. ಇವು ಜಮ್ಮು ಕಾಶ್ಮೀರದಲ್ಲಿ ದೊರೆತ ನಿಕ್ಷೇಪಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಇದೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮೂರು ತಿಂಗಳ ಹಿಂದೆ ಜಮ್ಮು ಮತ್ತು ಕಾಶ್ಮೀರದ … Continued

ಬೆಂಗಳೂರು ಹೋಟೆಲ್‌ಗಳಲ್ಲಿ ಮತದಾನದ ದಿನ ಉಚಿತ ಊಟ, ತಿಂಡಿ ವಿತರಣೆಗೆ ಬಿಬಿಎಂಪಿ ನಿಷೇಧ

ಬೆಂಗಳೂರು: ಮೇ 10ರಂದು ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಮತದಾನದ ವೇಳೆ, ಮತದಾನ ಮಾಡಲು ಉತ್ತೇಜಿಸುವ ಸಲುವಾಗಿ ಕೆಲವು ಹೋಟೆಲ್, ರೆಸ್ಟೋರೆಂಟ್ ಮಾಲೀಕರು ವಿಶೇಷ ಆಫರ್ ಗಳನ್ನು ಘೋಷಿಸಿದ್ದಾರೆ. ಈಗ ಹೋಟೆಲ್ ಮಾಲೀಕರಿಗೆ ಬಿಬಿಎಂಪಿ ಶಾಕ್‌ ನೀಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಇದಕ್ಕೆ ಅನುಮತಿ ನೀಡುವುದಿಲ್ಲ. ಇಂತಹ ಉಚಿತ​​ಗಳನ್ನು ಹೋಟೆಲ್​​ ಮಾಲೀಕರು ನೀಡಬಾರದು ಎಂದು … Continued

ಬಹುಪತ್ನಿತ್ವ ನಿಷೇಧಕ್ಕೆ ಅಸ್ಸಾಂ ಸರ್ಕಾರ ಚಿಂತನೆ, ಪರಶೀಲನೆಗೆ ತಜ್ಞರ ಸಮಿತಿ ರಚನೆ : ಸಿಎಂ ಹಿಮಂತ ಬಿಸ್ವಾ ಶರ್ಮಾ

ಗುವಾಹತಿ : ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ತಮ್ಮ ಸರ್ಕಾರ ಬಹುಪತ್ನಿತ್ವವನ್ನು ನಿಷೇಧಿಸಲು ಬಯಸಿದೆ ಮತ್ತು ಇದನ್ನು ಪರಿಶೀಲಿಸಲು ತಜ್ಞರ ಸಮಿತಿಯನ್ನು ರಚಿಸಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ. ತಮ್ಮ ಸರ್ಕಾರವು ಏಕರೂಪ ನಾಗರಿಕ ಸಂಹಿತೆಯ (ಯುಸಿಸಿ) ಮೂಲಕ ಅಲ್ಲ, ರಾಜ್ಯ ಕಾಯಿದೆಯಡಿ ಬಹುಪತ್ನಿತ್ವವನ್ನು ನಿಷೇಧಿಸಲು ಬಯಸುತ್ತದೆ ಎಂದು ಶರ್ಮಾ ಮಂಗಳವಾರ ಹೇಳಿದ್ದಾರೆ. “ಈ … Continued

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚೀತಾ ಸಾವು : 3 ತಿಂಗಳಲ್ಲಿ 3ನೇ ಚೀತಾ ಸಾವು

ಕುನೋ : ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ದಕ್ಷಿಣ ಆಫ್ರಿಕಾದಿಂದ ತಂದಿದ್ದ ಹೆಣ್ಣು ಚೀತಾವೊಂದು ಮೃತಪಟ್ಟಿದೆ ಎಂದು ವರದಿಯಾಗಿದೆ. ದಕ್ಷಾ ಹೆಸರಿನ ಹೆಣ್ಣು ಚಿರತೆ ಉಳಿದ ಚೀತಾಗಳ ಜೊತೆ ನಡೆದ ಕಾದಾಟದಲ್ಲಿ ಮೃತಪಟ್ಟಿದೆ ಎಂದು ವರದಿಯಾಗಿದೆ. ಗಂಡು ಚೀತಾಗಳ ಜೊತೆ ನಡೆದ ಕಾದಾಟದಲ್ಲಿ ಈ ಹೆಣ್ಣು ಚೀತಾ ಸಾವಿಗೀಡಾಗಿದ್ದು, ದಕ್ಷಿಣ ಆಫ್ರಿಕಾ ಮತ್ತು ನಮೀಬಿಯಾದಿಂದ ಚೀತಾಗಳನ್ನು … Continued

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಪರಿಷ್ಕೃತ ದಿನಾಂಕ ಪ್ರಕಟಿಸಿದೆ. ಸಿಇಟಿ ಕನ್ನಡ ಭಾಷಾ ಪರೀಕ್ಷೆ ಮೇ 22ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಪರಿಷ್ಕೃತ ದಿನಾಂಕದ ವೇಳಾಪಟ್ಟಿ ಬಿಡುಗಡೆ ಮಾಡಿದೆ. … Continued

ನ್ಯಾಯಾಲಯದ ಹೊರಗೆ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಬಂಧನ: ಎಳೆದೊಯ್ದ ಅರೆಸೈನಿಕ ಸಿಬ್ಬಂದಿ

ಬಾಕಿ ಉಳಿದಿರುವ ಪ್ರಕರಣಗಳ ವಿಚಾರಣೆಗಾಗಿ ಇಸ್ಲಾಮಾಬಾದ್ ಹೈಕೋರ್ಟ್‌ ಪ್ರವೇಶಿಸುತ್ತಿದ್ದಂತೆಯೇ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಇಂದು, ಮಂಗಳವಾರ ಬಂಧಿಸಲಾಗಿದೆ. 70 ವರ್ಷ ವಯಸ್ಸಿನ ಮಾಜಿ ಕ್ರಿಕೆಟಿಗ-ರಾಜಕಾರಣಿಯನ್ನು ಅರೆಸೈನಿಕ ಪಡೆಗಳು ನ್ಯಾಯಾಲಯದ ಆವರಣದಲ್ಲಿಯೇ ಕಸ್ಟಡಿಗೆ ತೆಗೆದುಕೊಂಡರು; ಪೊಲೀಸರು ನ್ಯಾಯಾಲಯಕ್ಕೆ ಪ್ರವೇಶಿಸಿದರು, ಅವರ ಬಯೋಮೆಟ್ರಿಕ್ ಡೇಟಾ ತೆಗೆದುಕೊಳ್ಳುತ್ತಿದ್ದ ಕೊಠಡಿಯ ಕಿಟಕಿಯನ್ನು ಒಡೆದುಹಾಕಿದರು ಮತ್ತು ಅವರನ್ನು ಹೊರಗೆ … Continued

ಎಚ್ಚರ…! : ಈ ನಂಬರ್‌ಗಳಿಂದ ವಾಟ್ಸ್‌ ಆ್ಯಪ್‌ ಕರೆ, ಸಂದೇಶಗಳು ಬರುತ್ತಿವೆ, ಸ್ವೀಕರಿಸಬೇಡಿ…!!

ದೇಶದಲ್ಲಿ ಇತ್ತೀಚಿಗೆ ಕೆಲ ದೇಶಗಳ ಕೋಡ್‌ಗಳಿಂದ ಬರುವ ಸಂಖ್ಯೆಗಳಿಂದ ವಾಟ್ಸ್‌ಆ್ಯಪ್‌ ಕರೆ ಹಾಗೂ ಸಂದೇಶದ ಮೂಲಕ ವಂಚನೆ ಬಗ್ಗೆ ನೂರಾರು ದೂರುಗಳು ದಾಖಲಾಗುತ್ತಿವೆ. ಉದ್ಯೋಗಿಗಳು ಹಾಗೂ ವ್ಯಾಪಾರ-ವ್ಯವಹಾರ ಮಾಡುತ್ತಿರುವವರನ್ನೇ ಹೆಚ್ಚಾಗಿ ಗುರಿಯಾಗಿಸಿಕೊಂಡು ವಂಚನೆ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ. ವಾಟ್ಸ್‌ಆ್ಯಪ್‌ ಕರೆ ಅಥವಾ ಸಂದೇಶದ ಮೂಲಕ ಜನರನ್ನು ವಂಚಿಸುತ್ತಿರುವವರು ಇಥಿಯೋಪಿಯಾ (+ 251), ಮಲೇಷ್ಯಾ (+ 60), … Continued