ಜಮ್ಮು-ಕಾಶ್ಮೀರದ ನಂತರ ಈಗ ರಾಜಸ್ಥಾನದಲ್ಲಿ ಅತಿ ದೊಡ್ಡ ಲೀಥಿಯಂ ನಿಕ್ಷೇಪ ಪತ್ತೆ : ಭಾರತದ ಬೇಡಿಕೆಯ 80% ಪೂರೈಸುವ ನಿರೀಕ್ಷೆ..!

ನವದೆಹಲಿ : ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚಗೆ ದೇಶದ ಮೊದಲ ಬೃಹತ್ ಲೀಥಿಯಂ ನಿಕ್ಷೇಪಗಳು ಪತ್ತೆಯಾದ ಬೆನ್ನಲ್ಲೇ ಈಗ ರಾಜಸ್ಥಾನದ ನಾಗೌರ್ ಜಿಲ್ಲೆಯಲ್ಲಿ ಕೂಡ ಲೀಥಿಯಂ ನಿಕ್ಷೇಪಗಳು ಕಂಡುಬಂದಿವೆ. ಇವು ಜಮ್ಮು ಕಾಶ್ಮೀರದಲ್ಲಿ ದೊರೆತ ನಿಕ್ಷೇಪಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಇದೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮೂರು ತಿಂಗಳ ಹಿಂದೆ ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಸುಮಾರು 59 ಲಕ್ಷ ಟನ್‌ ಲಿಥಿಯಂ ನಿಕ್ಷೇಪ ಪತ್ತೆಯಾಗಿತ್ತು. ಈಗ ರಾಜಸ್ಥಾನದಲ್ಲಿ ಇದಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಲೀಥಿಯಂ ನಿಕ್ಷೇಪ ಪತ್ತೆಯಾಗಿದ್ದು, ಇದು ದೇಶದ 80%ರಷ್ಟು ಬೇಡಿಕೆಯನ್ನು ಪೂರೈಸಬಹುದು ಎಂದು ‘ಜಿಯೋಲಾಜಿಕಲ್‌ ಸರ್ವೆ ಆಫ್‌ ಇಂಡಿಯಾ’ ಮತ್ತು ಗಣಿ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರಾಜಸ್ಥಾನದ ನಾಗೌರ್ ಜಿಲ್ಲೆಯ ದೇಗಾನಾ ಪ್ರದೇಶದಲ್ಲಿ ಈ ಲೀಥಿಯಂ ಪತ್ತೆಯಾಗಿದೆ. ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ (GSI) ರಾಜಸ್ಥಾನದ ನಾಗೌರ್ ಜಿಲ್ಲೆಯಲ್ಲಿ ಲೀಥಿಯಂ ನಿಕ್ಷೇಪವನ್ನು ಪತ್ತೆ ಮಾಡಿದೆ. ಲೀಥಿಯಂ ನಿಕ್ಷೇಪಗಳ ಸಾಮರ್ಥ್ಯವು ಜಮ್ಮು ಮತ್ತು ಕಾಶ್ಮೀರದ ಪತ್ತೆಯಾಗಿರುವ ನಿಕ್ಷೇಪಗಳಿಗಿಂತ ಹೆಚ್ಚು ಎನ್ನಲಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಭಾರತವು ಲೀಥಿಯಂಗಾಗಿ ದುಬಾರಿ ವಿದೇಶಿ ಪೂರೈಕೆಗಳ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿದೆ. ಈ ಪ್ರಮುಖ ಆವಿಷ್ಕಾರವು ಚೀನಾದ ಮೇಲೆ ಭಾರತದ ಅವಲಂಬನೆಯನ್ನು ಕಡಿಮೆ ಮಾಡಲಿದೆ. ದೇಶದಲ್ಲಿ ಲೀಥಿಯಂ ನಿಕ್ಷೇಪಗಳಿಂದ ಲೀಥಿಯಂ ಉತ್ಪಾದನೆಯಿಂದ ಎಲೆಕ್ಟ್ರಿಕ್ ವಾಹನಗಳ ವೆಚ್ಚ ಬಹಳ ಕಡಿಮೆ ಆಗಬಹುದು ಎಂದು ನಿರೀಕ್ಷಿಸಲಾಗಿದೆ. ಇದು ಮುಂಬರುವ ದಿನಗಳಲ್ಲಿ ಎಲೆಕ್ಟ್ರಿಕ್‌ ವಾಹನ (EV)ಗಳ ಮಾರುಕಟ್ಟೆ ಮತ್ತು ಅದರ ಗ್ರಾಹಕರಿಗೆ ನೇರವಾಗಿ ಪ್ರಯೋಜನ ನೀಡಲಿದೆ. ರಾಜಸ್ಥಾನದ ಜೊತೆಗೆ ಜಮ್ಮು-ಕಾಶ್ಮೀರ, ಮೇಘಾಲಯ, ಆಂಧ್ರಪ್ರದೇಶ ಮತ್ತು ಛತ್ತೀಸ್‌ಗಢದಲ್ಲೂ ಲಿಥಿಯಂ ಹುಡುಕಾಟ ನಡೆಯುತ್ತಿದೆ.
ಸದ್ಯ ಭಾರತ ಲೀಥಿಯಂಗಾಗಿ ಚೀನಾವನ್ನು ಅವಲಂಬಿಸಿದೆ. ಆದರೆ, ರಾಜಸ್ಥಾನದಲ್ಲಿ ಈ ನಿಕ್ಷೇಪ ಪತ್ತೆಯಾಗುವುದರೊಂದಿಗೆ ಚೀನಾದ ಏಕಸ್ವಾಮ್ಯ ಕೊನೆಗೊಳ್ಳಲಿದೆ ಎಂದು ನಿರೀಕ್ಷಿಸಲಾಗಿದೆ. ಲೀಥಿಯಂ ಒಂದು ನಾನ್-ಫೆರಸ್ ಲೋಹವಾಗಿದೆ, ಇದನ್ನು ಮೊಬೈಲ್-ಲ್ಯಾಪ್‌ಟಾಪ್, ಎಲೆಕ್ಟ್ರಿಕ್ ವಾಹನ ಮತ್ತು ಇತರ ಸಾಧನೆಗಳಿಗೆ ಚಾರ್ಜ್ ಮಾಡಬಹುದಾದ ಬ್ಯಾಟರಿಗಳನ್ನು ತಯಾರಿಸಲು ಬಳಸಲಾಗುತ್ತದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement