ಬೆಂಗಳೂರು ಹೋಟೆಲ್‌ಗಳಲ್ಲಿ ಮತದಾನದ ದಿನ ಉಚಿತ ಊಟ, ತಿಂಡಿ ವಿತರಣೆಗೆ ಬಿಬಿಎಂಪಿ ನಿಷೇಧ

ಬೆಂಗಳೂರು: ಮೇ 10ರಂದು ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಮತದಾನದ ವೇಳೆ, ಮತದಾನ ಮಾಡಲು ಉತ್ತೇಜಿಸುವ ಸಲುವಾಗಿ ಕೆಲವು ಹೋಟೆಲ್, ರೆಸ್ಟೋರೆಂಟ್ ಮಾಲೀಕರು ವಿಶೇಷ ಆಫರ್ ಗಳನ್ನು ಘೋಷಿಸಿದ್ದಾರೆ. ಈಗ ಹೋಟೆಲ್ ಮಾಲೀಕರಿಗೆ ಬಿಬಿಎಂಪಿ ಶಾಕ್‌ ನೀಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಇದಕ್ಕೆ ಅನುಮತಿ ನೀಡುವುದಿಲ್ಲ. ಇಂತಹ ಉಚಿತ​​ಗಳನ್ನು ಹೋಟೆಲ್​​ ಮಾಲೀಕರು ನೀಡಬಾರದು ಎಂದು ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮತದಾನ ಪ್ರಮಾಣ ಹೆಚ್ಚಳ ಮಾಡುವುದಕ್ಕೆ ಜಾಗೃತಿ ಮೂಡಿಸಲಾಗಿತ್ತು. ಹಲವು ರೆಸ್ಟೋರೆಂಟ್, ಹೋಟೆಲ್ ಮಾಲೀಕರು ಮತದಾನ ಮಾಡಿ ಬಂದವರಿಗೆ ಉಚಿತ ಊಟ, ತಿಂಡಿ ನೀಡಲಾಗುವುದು ಎಂದು ಘೋಷಿಸಿಕೊಂಡಿದ್ದರು. ಆದರೆ ಬಿಬಿಎಂಪಿ ಯಾವುದೇ ಹೋಟೆಲ್‌ಗಳಲ್ಲಿ ಉಚಿತ ಊಟ ಅಥವಾ ತಿಂಡಿ ನೀಡುವಂತಿಲ್ಲ ಎಂದು ಆದೇಶ ಹೊರಡಿಸಿದೆ.
ವಿಧಾನಸಭಾ ಚುನಾವಣೆ ಹಿನ್ನಲೆ ರಾಜ್ಯದಲ್ಲಿ ಮಾರ್ಚ್ 29 ರಿಂದ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಮತದಾನ ಮಾಡಿ ಬಂದವರಿಗೆ ಉಚಿತ ಅಥವಾ ರಿಯಾಯಿತಿ ದರದಲ್ಲಿ ಊಟ, ತಿಂಡಿ ನೀಡುವುದರಿಂದ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗಲಿದ್ದು, ಈ ರೀತಿಯ ಪ್ರಕಟಣೆಗಳಿಗೆ ಸಂಬಂಧಿದಂತೆ ಹೋಟೆಲ್‌ ಮಾಲೀಕರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುತ್ತದೆ. ಉಚಿತ ಊಟ, ತಿಂಡಿ ನೀಡಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಮೇ 10ರಂದು ಮತದಾನ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ಪ್ರಮುಖ ಸುದ್ದಿ :-   ನಟ, ಮಾಜಿ ಐಎಎಸ್ ಅಧಿಕಾರಿ ಕೆ ಶಿವರಾಮ ನಿಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement