ಬಳ್ಪ: ಹೊಳೆಯಲ್ಲಿ ಮುಳುಗಿ ಬಾಲಕಯರಿಬ್ಬರು ಸಾವು

ಮಂಗಳೂರು: ಇಬ್ಬರು ವಿದ್ಯಾರ್ಥಿನಿಯರು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಳ್ಪ ಸಮೀಪದ ಕೇನ್ಯ ಕಣ್ಕಲ್ ಎಂಬಲ್ಲಿ ಹೊಳೆಯಲ್ಲಿ ನೀರುಪಾಲಾದ ಘಟನೆ ನಡೆದಿದೆ. ಇಬ್ಬರು ಬಾಲಕಿಯರ ಮೃತದೇಹವನ್ನು ಹೊರ ತೆಗೆಯಲಾಗಿದೆ.
ಮೃತರನ್ನು ಬೆಂಗಳೂರಿನ ಸತೀಶ ಅಮ್ಮಣ್ಣಾಯ ಅವರ ಪುತ್ರಿಯರಾದ   ಆವಂತಿಕಾ (16) ಹಾಗೂ ಅಂಕಿತಾ (13) ಎಂದು ಗುರುತಿಸಲಾಗಿದೆ. ಇಬ್ಬರ ಮೃತದೇಹಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ನೀರಿನಿಂದ ಹೊರಗೆ ತೆಗೆದಿದ್ದಾರೆ.
ಕೇನ್ಯ ಉದಯ ಅಮ್ಮಣ್ಣಾಯ ಅವರ ಸಹೋದರ ಸತೀಶ ಅಮ್ಮಣ್ಣಾಯ ಅವರು ಕೆಲ ವರ್ಷಗಳಿಂದ ಬೆಂಗಳೂರಿನಲ್ಲಿ ವಾಸ್ತವ್ಯವಿದ್ದಾರೆ. ಸತೀಶ ಅವರ ಇಬ್ಬರು ಹೆಣ್ಣು ಮಕ್ಕಳು ಶಾಲೆಗೆ ರಜೆ ಇದ್ದುದರಿಂದ ಬಳ್ಪದ ಚಿಕ್ಕಪ್ಪನ ಮನೆಗೆ ಸೋಮವಾರ ಬೆಳಿಗ್ಗೆ ಬಂದಿದ್ದರು.
ಮನೆ ಸಮೀಪವೇ ಇರುವ ಕುಮಾರಧಾರ ನದಿಗೆ ಸಂಜೆ ವೇಳೆಗೆ ಕುಟುಂಬದವರ ಜೊತೆಗೆ ತೆರಳಿದ್ದರು. ಈ ವೇಳೆ ಹೆಣ್ಣು ಮಕ್ಕಳಿಬ್ಬರು ನೀರಿಗೆ ಇಳಿದಿದ್ದು, ಮುಳುಗಿ ನಾಪತ್ತೆಯಾಗಿದ್ದರು.
ಇದು ಗಮನಕ್ಕೆ ಬರುತ್ತಿದ್ದಂತೆಯೇ ಮನೆಮಂದಿ ನೀರಿನಲ್ಲಿ ಹುಡುಕಿದ್ದರು. ಸ್ಥಳೀಯ ಈಜುಗಾರರೂ ನದಿ ನೀರಲ್ಲಿ ಮುಳುಗಿ ಹುಡುಕಾಟ ನಡೆಸಿದ್ದರು. ಸುಳ್ಯದಿಂದ ಅಗ್ನಿಶಾಮಕ ದಳವನ್ನು ಕರೆಸಿ ನೀರಿನಲ್ಲಿ ಶೋಧ ನಡೆಸಲಾಯಿತು. ರಾತ್ರಿ ವೇಳೆ ಇಬ್ಬರ ಮೃತದೇಹಗಳು ಪತ್ತೆಯಾದವು.

ಪ್ರಮುಖ ಸುದ್ದಿ :-   ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆ : ತಾಯಿ-ಮಗು ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement