ಸೇತುವೆಯಿಂದ ಬಸ್ ಬಿದ್ದು 22 ಮಂದಿ ಸಾವು, ಹಲವರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದ ಖಾರ್ಗೋನೆಯಲ್ಲಿ ಇಂದು, ಮಂಗಳವಾರ ಬಸ್ ಸೇತುವೆಯಿಂದ ಕೆಳಗೆ ಬಿದ್ದು ಕನಿಷ್ಠ 22 ಜನರು ಸಾವಿಗೀಡಾಗಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ರಾಜ್ಯ ಗೃಹ ಸಚಿವ ನರೋತ್ತಮ ಮಿಶ್ರಾ ಹೇಳಿದ್ದಾರೆ.
50 ಜನರಿದ್ದ ಬಸ್ ಇಂದೋರ್‌ಗೆ ತೆರಳುತ್ತಿದ್ದಾಗ ಖಾರ್ಗೋನ್‌ನ ದಸಂಗ ಗ್ರಾಮದಲ್ಲಿ ಸೇತುವೆಯಿಂದ ಕೆಳಗೆ ಬಿದ್ದಿದೆ. ಸ್ಥಳೀಯ ಗ್ರಾಮಸ್ಥರ ಸಹಾಯದಿಂದ ತುರ್ತು ಸೇವೆಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಮಿಶ್ರಾ ಹೇಳಿದರು.
ಮೃತರಲ್ಲಿ ಮೂವರು ಮಕ್ಕಳು ಮತ್ತು 10 ಮಹಿಳೆಯರು ಸೇರಿದ್ದಾರೆ. ಸುಮಾರು 20 ಜನರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.
ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ₹ 4 ಲಕ್ಷ, ಗಂಭೀರವಾಗಿ ಗಾಯಗೊಂಡವರಿಗೆ ₹ 50,000 ಹಾಗೂ ಸಣ್ಣಪುಟ್ಟ ಗಾಯಗೊಂಡವರಿಗೆ ₹ 25,000 ಪರಿಹಾರ ನೀಡುವುದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಘೋಷಿಸಿದ್ದಾರೆ. ಮುಖ್ಯಮಂತ್ರಿ ಚೌಹಾಣ್ ಅವರ ಸರ್ಕಾರವು ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸಹ ಭರಿಸಲಿದೆ.
ಮೃತರ ಕುಟುಂಬಗಳಿಗೆ ತಲಾ ₹ 2 ಲಕ್ಷ ಪರಿಹಾರ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಕಚೇರಿ ಪ್ರಕಟಿಸಿದೆ.”ಮಧ್ಯಪ್ರದೇಶದ ಖಾರ್ಗೋನ್‌ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟ ಪ್ರತಿಯೊಬ್ಬರ ಮುಂದಿನ ಸಂಬಂಧಿಕರಿಗೆ ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ₹ 2 ಲಕ್ಷ ಪರಿಹಾರವನ್ನು ನೀಡಲಾಗುವುದು. ಗಾಯಾಳುಗಳಿಗೆ ₹ 50,000 ನೀಡಲಾಗುವುದು” ಎಂದು ಪಿಎಂಒ ಕಚೇರಿ ಟ್ವೀಟ್ ಮಾಡಿದೆ

ಪ್ರಮುಖ ಸುದ್ದಿ :-   ವೀಡಿಯೊ..| ಭಾರತದ ಆಪರೇಶನ್‌ ಸಿಂಧೂರ ದಾಳಿ ನಂತ್ರ 2019ರ ʼಪುಲ್ವಾಮಾ ಭಯೋತ್ಪಾದಕ ದಾಳಿʼಯಲ್ಲಿ ತನ್ನ ಪಾತ್ರವಿದೆ ಎಂದು ಒಪ್ಪಿಕೊಂಡ ಪಾಕಿಸ್ತಾನ..!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement