ಸೇತುವೆಯಿಂದ ಬಸ್ ಬಿದ್ದು 22 ಮಂದಿ ಸಾವು, ಹಲವರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದ ಖಾರ್ಗೋನೆಯಲ್ಲಿ ಇಂದು, ಮಂಗಳವಾರ ಬಸ್ ಸೇತುವೆಯಿಂದ ಕೆಳಗೆ ಬಿದ್ದು ಕನಿಷ್ಠ 22 ಜನರು ಸಾವಿಗೀಡಾಗಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ರಾಜ್ಯ ಗೃಹ ಸಚಿವ ನರೋತ್ತಮ ಮಿಶ್ರಾ ಹೇಳಿದ್ದಾರೆ. 50 ಜನರಿದ್ದ ಬಸ್ ಇಂದೋರ್‌ಗೆ ತೆರಳುತ್ತಿದ್ದಾಗ ಖಾರ್ಗೋನ್‌ನ ದಸಂಗ ಗ್ರಾಮದಲ್ಲಿ ಸೇತುವೆಯಿಂದ ಕೆಳಗೆ ಬಿದ್ದಿದೆ. ಸ್ಥಳೀಯ ಗ್ರಾಮಸ್ಥರ ಸಹಾಯದಿಂದ ತುರ್ತು ಸೇವೆಗಳು ರಕ್ಷಣಾ … Continued

ಕರ್ನಾಟಕ ಸಿಇಟಿ-2023 ಹಾಲ್ ಟಿಕೆಟ್ ಬಿಡುಗಡೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2023ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ನೋಂದಾಯಿಸಿಕೊಂಡಿರುವ ಅಭ್ಯರ್ಥಿಗಳಿಗೆ ಪ್ರವೇಶ ಪತ್ರ (ಹಾಲ್ ಟಿಕೆಟ್) ಬಿಡುಗಡೆ ಮಾಡಿದೆ. ಎಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶುವೈದ್ಯಕೀಯ, ಬಿಎಸ್ಸಿ (ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸ್‌ಗಳಿಗೆ ಮೇ 20 ರಿಂದ 22ರವರೆಗೆ ಸಿಇಟಿ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ … Continued

ಉತ್ತರ ಪ್ರದೇಶದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾಗೆ ತೆರಿಗೆ ವಿನಾಯಿತಿ ಘೋಷಿಸಿದ ಸಿಎಂ ಯೋಗಿ ಆದಿತ್ಯನಾಥ

ನವದೆಹಲಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ವಿವಾದಿತ ಚಲನಚಿತ್ರ ‘ದಿ ಕೇರಳ ಸ್ಟೋರಿ’ ಪ್ರದರ್ಶನಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ. ಈ ಕುರಿತು ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿದ್ದಾರೆ. ಇತ್ತೀಚೆಗಷ್ಟೇ ಮಧ್ಯಪ್ರದೇಶ ಸರ್ಕಾರ ದಿ ಕೇರಳ ಸ್ಟೋರಿ ಸಿನಿಮಾಕ್ಕೆ ತೆರಿಗೆ ವಿನಾಯಿತಿ ಘೋಷಿಸಿತ್ತು. ಮತ್ತೊಂದೆಡೆ ವಿವಾದಿತ ಚಿತ್ರ ಪ್ರದರ್ಶನಕ್ಕೆ ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ನಿಷೇಧ … Continued

ಕರ್ನಾಟಕದ ವಿಧಾನಸಭೆ ಚುನಾವಣೆಗೆ ರಜೆ ಘೋಷಿಸಿದ ಗೋವಾ ಸರ್ಕಾರ

ಪಣಜಿ:ಪಣಜಿ: ಕರ್ನಾಟಕದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮತದಾನ ಮಾಡಲು ಅನುಕೂಲವಾಗುವಂತೆ ಗೋವಾದ ಬಿಜೆಪಿ ಸರ್ಕಾರವು ಖಾಸಗಿ ಸಂಸ್ಥೆಗಳು ಮತ್ತು ಕೈಗಾರಿಕಾ ಕಾರ್ಮಿಕರಿಗೆ ಮೇ 10 ರಂದು ವೇತನ ಸಹಿತ ರಜೆ ಘೋಷಿಸಿದೆ.. ಆದಾಗ್ಯೂ, ಪ್ರಮೋದ ಸಾವಂತ್ ಸರ್ಕಾರದ ನಿರ್ಧಾರಕ್ಕೆ ಗೋವಾದ ವಿರೋಧ ಪಕ್ಷಗಳು ಮತ್ತು ಉದ್ಯಮ ಸಂಸ್ಥೆಗಳಿಂದ ವಿರೋಧ ವ್ಯಕ್ತವಾಗಿದೆ. ಗೋವಾ ರಾಜ್ಯ ಕೈಗಾರಿಕೆಗಳ ಸಂಘವು … Continued

10 ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ನಗರಗಳಲ್ಲಿ ಡೀಸೆಲ್ ವಾಹಗಳನ್ನು ನಿಷೇಧಿಸಿ: ಸರ್ಕಾರಕ್ಕೆ ತೈಲ ಸಚಿವಾಲಯ ಸಮಿತಿ ಶಿಫಾರಸು

ನವದೆಹಲಿ: ಭಾರತವು 2027 ರ ವೇಳೆಗೆ 10 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ನಗರಗಳಲ್ಲಿ ಡೀಸೆಲ್ ಚಾಲಿತ ನಾಲ್ಕು ಚಕ್ರ ವಾಹನಗಳ ಬಳಕೆಯನ್ನು ನಿಷೇಧಿಸಬೇಕು ಮತ್ತು ಎಲೆಕ್ಟ್ರಿಕ್ ಮತ್ತು ಅನಿಲ ಇಂಧನ ವಾಹನಗಳಿಗೆ ಬದಲಾಯಿಸಬೇಕು ಎಂದು ತೈಲ ಸಚಿವಾಲಯವು ನಿಯೋಜಿಸಿದ ಸಮಿತಿಯ ವರದಿ ಶಿಫಾರಸು ಮಾಡಿದೆ. ಮಾಜಿ ತೈಲ ಕಾರ್ಯದರ್ಶಿ ತರುಣ್ ಕಪೂರ್ ನೇತೃತ್ವದ ಸಮಿತಿಯ … Continued

ಧಾರವಾಡ: ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಜೆಎಸ್ಎಸ್ ಶ್ರೀ ಮಂಜುನಾಥೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆ ಉತ್ತಮ ಸಾಧನೆ

ಧಾರವಾಡ: ೨೦೨೨-೨೩ ನೇ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಧಾರವಾಡದ ಜೆಎಸ್ಎಸ್ ಶ್ರೀ ಮಂಜುನಾಥೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಒಟ್ಟು ಫಲಿತಾಂಶ ೮೭.೯೬% ಆಗಿದೆ. ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದ ಶ್ರೀರಕ್ಷಾ ಬಾಗಲಕೋಟಿ ೯೪.೨೪%, ದ್ವಿತೀಯ ಸ್ಥಾನವನ್ನು ಪಡೆದ ರಾಜಶೇಖರ ಬಳಿಗೇರ ೯೩.೭೬%, ತೃತೀಯ ಸ್ಥಾನವನ್ನು ಪಡೆದ ಐಶ್ವರ್ಯ ಹೊಸಮನಿ ೯೧.೬೮% ಗಳಿಸಿದ್ದಾರೆ. ಶಾಲೆಯ ೧೨ … Continued

ಬಳ್ಪ: ಹೊಳೆಯಲ್ಲಿ ಮುಳುಗಿ ಬಾಲಕಯರಿಬ್ಬರು ಸಾವು

ಮಂಗಳೂರು: ಇಬ್ಬರು ವಿದ್ಯಾರ್ಥಿನಿಯರು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಳ್ಪ ಸಮೀಪದ ಕೇನ್ಯ ಕಣ್ಕಲ್ ಎಂಬಲ್ಲಿ ಹೊಳೆಯಲ್ಲಿ ನೀರುಪಾಲಾದ ಘಟನೆ ನಡೆದಿದೆ. ಇಬ್ಬರು ಬಾಲಕಿಯರ ಮೃತದೇಹವನ್ನು ಹೊರ ತೆಗೆಯಲಾಗಿದೆ. ಮೃತರನ್ನು ಬೆಂಗಳೂರಿನ ಸತೀಶ ಅಮ್ಮಣ್ಣಾಯ ಅವರ ಪುತ್ರಿಯರಾದ   ಆವಂತಿಕಾ (16) ಹಾಗೂ ಅಂಕಿತಾ (13) ಎಂದು ಗುರುತಿಸಲಾಗಿದೆ. ಇಬ್ಬರ ಮೃತದೇಹಗಳನ್ನು ಅಗ್ನಿಶಾಮಕ ದಳದ … Continued