ಮತ ಚಲಾಯಿಸಲು ಮದುವೆ ಉಡುಪಿನಲ್ಲಿ ಮತಗಟ್ಟೆಗೆ ಆಗಮಿಸಿದ ಮದುಮಗಳು…

ಚಿಕ್ಕಮಗಳೂರು: ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಮಾಕೋನಹಳ್ಳಿ ಗ್ರಾಮದಲ್ಲಿ ಮದುಮಗಳೊಬ್ಬಳು ಬುಧವಾರ ಬೆಳಿಗ್ಗೆ ತನ್ನ ಮದುವೆಯ ಉಡುಪಿನಲ್ಲಿಯೇ ಬಂದು ಮತ ಚಲಾಯಿಸಿದ್ದಾರೆ.
ಇಂದು ನಡೆಯಲಿರುವ ಮದುವೆಗೂ ಮುನ್ನ ಚಿಕ್ಕಮಗಳೂರು ಜಿಲ್ಲೆಯ ಮತಗಟ್ಟೆ ಸಂಖ್ಯೆ 165ರಲ್ಲಿ ಕುಟುಂಬ ಸಮೇತರಾಗಿ ಬಂದ ಮದುಮಗಳು ಮತ ಚಲಾಯಿಸಿ ಮತದಾನವನ್ನು ಸಂಭ್ರಮಿಸಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣಗೆ ಮತದಾನ ಇಂದು ಬುಧವಾರ ಬೆಳಗ್ಗೆ 7ರಿಂದ ಮತದಾನ ಆರಂಭವಾಗಿದ್ದು, ಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ರಾಜ್ಯದ 224 ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿದ್ದು, 2615 ಮಂದಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕಾರು ಅಡ್ಡ ಹಾಕಿ ನಟಿ ಹರ್ಷಿಕಾ ಪೂಣಚ್ಚ ದಂಪತಿಗೆ ಕಿರುಕುಳ : "ನಾವು ಪಾಕಿಸ್ತಾನ ಅಥವಾ ಅಫ್ಘಾನಿಸ್ತಾನದಲ್ಲಿದ್ದೇವೆಯೇ ಎಂದು ನಟಿ ಪ್ರಶ್ನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement