ಮತ ಹಾಕಲು ಹೋಗಿದ್ದ ಗರ್ಭಿಣಿಗೆ ಮತದಾನ ಕೇಂದ್ರದಲ್ಲೇ ಹೆರಿಗೆ…!

posted in: ರಾಜ್ಯ | 0

ಬಳ್ಳಾರಿ : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ, ಬುಧವಾರ ನಡೆಯುತ್ತಿರುವ ಮತದಾನದ ವೇಳೆ ತುಂಬು ಗರ್ಭಿಣಿಯೊಬ್ಬರುಮತ ಕೇಂದ್ರದಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ವರದಿಯಾಗಿದೆ..
ಬಳ್ಳಾರಿಯ ಕೂರ್ಲಂಗುದಿ ಗ್ರಾಮದಲ್ಲಿ ಗರ್ಭಿಣಿ ಮಣಿಲಾ (23) ಎಂಬ ಗರ್ಭಿಣಿ ಮತ ಚಲಾಯಿಸಲು ಬಂದಿದ್ದರು. ಈ ವೇಳೆ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಅಗಮಿಸಿದ್ದರಿಂದ ಗರ್ಭಿಣಿ ಸರತಿ ಸಾಲಿನಲ್ಲಿ ನಿಂತಿದ್ದರು ಮತ ಚಲಾಯಿಸಿ, ಕೊಠಡಿಯಿಂದ ಹೊರ ಬರುವ ವೇಳೆ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ.
ಮತದಾನ ಕೇಂದ್ರದಲ್ಲೇ ಆಶಾ ಕಾರ್ಯಕರ್ತೆಯರು ಮತ್ತು ಚುನಾವಣೆಗೆ ನಿಯೋಜನೆಗೊಂಡಿದ್ದ ಮಹಿಳಾ ಸಿಬ್ಬಂದಿ ಅವರನ್ನು ತಕ್ಷಣವೇ ಮತ್ತೊಂದು ಕೊಠಡಿಗೆ ಕರೆದೊಯ್ದರು. ಅಲ್ಲಿ ಗರ್ಭಿಣಿಗೆ ಸಹಜ ಹೆರಿಗೆಯಾಗಲು ಸಹಕರಿಸಿದ್ದಾರೆ. ಗರ್ಭಿಣಿ ಗಂಡು ಮಗುವಿಗೆ ಜ್ನಮ ನೀಡಿದ್ದಾರೆ. ಹೆರಿಗೆಯಾದ ತಕ್ಷಣ ಮಹಿಳೆಯನ್ನು ಹತ್ತಿರದ ಪ್ರಾಥಮಿಕ ಕೇಂದ್ರಕ್ಕೆ ದಾಖಲಿಸಿದ್ದಾರೆ. ಈಗ ತಾಯಿ ಮಗು ಇಬ್ಬರು ಆರೊಗ್ಯವಾಗಿದ್ದಾರೆ ಎಂದು ಮತಗಟ್ಟೆ ಕೇಂದ್ರದ ಅಧಿಕಾರಿ ವೆಂಕಟೇಶ್ ರಾಮಚಂದ್ರಪ್ಪ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement