ಮೇ 13ರವರೆಗೂ ಸಿಇಟಿಗೆ ಅರ್ಜಿ ಸಲ್ಲಿಸಲು ಅವಕಾಶ

posted in: ರಾಜ್ಯ | 0

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ) ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಮೇ 13ರ ಬೆಳಿಗ್ಗೆ 11ಗಂಟೆಯವರೆಗೂ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಮೇ 20 ಹಾಗೂ 21ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ. ಪೋಷಕರ ಮನವಿಯ ಆಧಾರದ ಮೇರೆಗೆ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅಂತಿಮ ಅವಕಾಶವನ್ನು ನೀಡಲಾಗಿದೆ. ಯಾವುದೇ ಕಾರಣಕ್ಕೂ ದಿನಾಂಕವನ್ನು ಮತ್ತೊಮ್ಮೆ ವಿಸ್ತರಿಸಲಾಗುವುದಿಲ್ಲ ಎಂದು ಕೆಇಎ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ಗೆ http://kea.kar ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.
ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರಿನರಿ, ಫಾರ್ಮಸಿ, ಬಿಎಸ್ಸಿ (ನರ್ಸಿಂಗ್) ಮುಂತಾದ ಕೋರ್ಸುಗಳ ಪ್ರವೇಶಕ್ಕೆ ಇಲ್ಲಿಯವರೆಗೆ ಸಿಇಟಿ-2023ಕ್ಕೆ ನೋಂದಣಿ ಮಾಡದಿರುವ ಅಥವಾ ನೋಂದಣಿ ಮಾಡಿ ಅರ್ಜಿ ಸಲ್ಲಿಸದೇ ಇರುವ ಅಭ್ಯರ್ಥಿಗಳು ಮೇ 11 ಬೆಳಿಗ್ಗೆ 8.00 ರಿಂದ ಮೇ 13 ಬೆಳಿಗ್ಗೆ 11 ಗಂಟೆ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಮೇ13ರ ಸಂಜೆ 6 ಗಂಟೆಯ ಒಳಗೆ ಶುಲ್ಕವನ್ನು ಪಾವತಿಸಬೇಕು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ತಿ.ನರಸೀಪುರ ಬಳಿ ಅಪಘಾತ : ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement