ಚಂಡಮಾರುತದ ಪ್ರಭಾವ : ಇಂದಿನಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ಪಶ್ಚಿಮ ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್‌ ನೀಡಿದೆ. ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿನಾಲ್ಕು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮೇ 10ರಿಂದ 12 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಮೇ 10 ರಂದು ಮಧ್ಯಾಹ್ನ ಅಥವಾ ಸಂಜೆ ನಂತರ ಮಳೆ ಆರಂಭವಾಗಬಹುದು ಎಂದು ತಿಳಿಸಲಾಗಿದೆ.
ಬಂಗಾಳ ಕೊಲ್ಲಿಯಲ್ಲಿಉಂಟಾಗಿರುವ ‘ಮೋಚಾ’ ಚಂಡಮಾರುತ ಒಡಿಶಾ ಅಥವಾ ಪಶ್ಚಿಮ ಬಂಗಾಳ ತೀರ ಪ್ರವೇಶಿಸುವ ಸಾಧ್ಯತೆಯಿಲ್ಲ. ಚಂಡಮಾರುತ ತೀವ್ರಗೊಂಡರೂ ಅದು ಮ್ಯಾನ್ಮಾರ್‌ ಮತ್ತು ಬಾಂಗ್ಲಾದೇಶದ ದಿಕ್ಕಿನಲ್ಲಿಸಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಆದ್ದರಿಂದ ಬುಧವಾರ ಅಥವಾ ಗುರುವಾರ ಒಡಿಶಾ ಅಥವಾ ಪಶ್ಚಿಮ ಬಂಗಾಳಕ್ಕೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ತಪ್ಪಿದೆ.
ಈ ಮಧ್ಯೆ, ಕರ್ನಾಟಕದಲ್ಲಿ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಬೀಳುತ್ತಿರುವ ಮುಂಗಾರು ಪೂರ್ವ ಮಳೆ ಇನ್ನೆರಡು ದಿನಗಳ ಕಾಲ ಮುಂದುವರೆಯಲಿದೆ ಎಂದೂ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ರಾಮನಗರ, ಮೈಸೂರು, ಹಾಸನ, ಚಾಮರಾಜನಗರ, ಕೋಲಾರ, ಬಳ್ಳಾರಿ, ಕೊಡಗು, ಧಾರವಾಡ ಸೇರಿದಂತೆ ರಾಜ್ಯದ ಒಳನಾಡಿನ ಹಲವೆಡೆ ಮಳೆಯಾಗಿದೆ. ಹಲವೆಡೆ ಉತ್ತಮ ಮಳೆಯಾಗಿದ್ದರೆ, ಕೆಲವೆಡೆ ಸಾಧಾರಣ ಮಳೆಯಾಗಿದೆ

ಪ್ರಮುಖ ಸುದ್ದಿ :-   ಸಂಸದ ಪ್ರಜ್ವಲ್ ರೇವಣ್ಣಗೆ ಎಸ್‍ಐಟಿ ಲುಕೌಟ್ ನೋಟಿಸ್ ಜಾರಿ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement