ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆ

ಕಲಬುರಗಿ : ಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ಬಿಜೆಪಿ ಕಾರ್ಯಕರ್ತನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ವರದಿಯಾಗಿದೆ.
ಮೃತರನ್ನು ಚಿಂಚೋಳಿ ತಾಲೂಕಿನ ಸಲಗರ ಬಸಂತಪುರ ಗ್ರಾಮದ ಬಿಜೆಪಿ ಕಾರ್ಯಕರ್ತ ರಾಮು ರಾಠೋಡ (45) ಎಂದು ಗುರುತಿಸಲಾಗಿದೆ. ಅವರು ಮೇ 10ರಂದು ನಡೆದ ಚುನಾವಣೆಯಲ್ಲಿ ಬೂತ್‌ ಏಜೆಂಟ್‌ ಆಗಿ ಕಾರ್ಯ ನಿರ್ವಹಿಸಿದ್ದರು. ಬುಧವಾರ ರಾತ್ರಿ ಮನೆಗೆ ಬಂದಿರಲಿಲ್ಲ ಎಂದು ಹೇಳಲಾಗಿದೆ.
ಮೇ 11ರ ಬೆಳಿಗ್ಗೆ ಗ್ರಾಮದ ಹೊರವಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಇದು ಹಲವು ಅನುಮಾನಗಳಿಗೆ ಕಾರಣವಾಗಿದೆ. ರಾಮು ಅವರನ್ನು ಯಾರೋ ಹತ್ಯೆಮಾಡಿ ನೇಣು ಬಿಗಿದಿದ್ದಾರೆ” ಎಂದು ಮೃತನ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಚಿಂಚೋಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕಿರುತೆರೆ ನಟಿ-ನಿರೂಪಕಿಗೆ ಚಾಕುವಿನಿಂದ ಇರಿದ ಗಂಡ...

ನಿಮ್ಮ ಕಾಮೆಂಟ್ ಬರೆಯಿರಿ

advertisement