ಬಿಜೆಪಿ ಬಹುಮತ ಪಡೆಯಲಿದೆ; ಈ ಮಾತಿಗೆ ನಾನು ಈಗಲೂ ಬದ್ಧ : ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಚುನಾವಣಾ ಸಮೀಕ್ಷೆಗಳು ಹೇಳಿಕೊಳ್ಳಲಿ. ಆದರೆ ನಾವೇ ಸ್ಪಷ್ಟ ಬಹುಮತ ಪಡೆಯುತ್ತೇವೆ. ಈ ಮಾತಿಗೆ ನಾನು ಈಗಲೂ ಬದ್ಧ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಇಂದು ಗುರುವಾರ, ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ಪ್ರಚಾರದಿಂದ ನಮಗೆ ಪ್ಲಸ್ ಆಗಿದೆ. ನಾವು ಬಹುಮತ ಪಡೆಯುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮತದಾನೋತ್ತರ ಸಮೀಕ್ಷೆಗಳು ಕಳೆದ ಚುನಾವಣೆಯಲ್ಲಿಯೂ ಕಾಂಗ್ರೆಸ್ 107ಕ್ಕೂ ಅಧಿಕ ಸ್ಥಾನಗಳನ್ನು ನೀಡಿದ್ದವು. ಆದರೆ ಫಲಿತಾಂಶದ ದಿನ ಅದು ಉಲ್ಟಾ ಆಯಿತು. ಈಗಲೂ ನಮಗೆ ಅದೇ ವಿಶ್ವಾಸವಿದೆ. ಬಿಜೆಪಿ ೧೫೦ ಕ್ಷೇತ್ರಗಳಲ್ಲಿ ಗೆಲ್ಲುತ್ತದೆ ಎಂದು ಎಲ್ಲಿಯೂ ಹೇಳಿಲ್ಲ. ಬಹುಮತ ಪಡೆಯುತ್ತೇವೆ, ನಾವೇ ಸರ್ಕಾರ ರಚನೆ ಮಾಡುತ್ತೇವೆ ಎಂದು ಹೇಳಿದ್ದೇನೆ. ಅದಕ್ಕೆ ನಾನು ಈಗಲೂ ಬದ್ಧನಾಗಿದ್ದೇನೆ ಎಂದರು.
ಯುವಕರು ಮತ್ತು ಮಹಿಳೆಯರು ನಮ್ಮ ಪರವಾಗಿ ಮತದಾನ ಮಾಡಿದ್ದಾರೆ ಎಂದು ನನಗೆ ವಿಶ್ವಾಸವಿದ್ದು, ನಾವು ಸಂಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಮರಳುತ್ತೇವೆ. ಅತಂತ್ರ ಫಲಿತಾಂಶದ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ತಿಳಿಸಿದರು.
ಶಿಗ್ಗಾಂವಿ ಜನತೆ ತೋರಿದ ಪ್ರೀತಿಗೆ ನಾನು ಚಿರಋಣಿ. ಹಬ್ಬದ ರೀತಿಯಲ್ಲಿ ಚುನಾವಣೆ ಆಚರಣೆ ಮಾಡಿದರು. ನಮ್ಮ ಜನ ನನ್ನ ಕೈಹಿಡಿಯುವ ವಿಶ್ವಾಸವಿದ್ದು ಶಿಗ್ಗಾಂವಿಯಲ್ಲಿ ನಾನು ದೊಡ್ಡ ಬಹುಮತದಿಂದ ಗೆಲ್ಲುತ್ತೇನೆ ಎಂದು ಹೇಳಿದರು.
ಇದೇ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ, ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದೇ ಬರುತ್ತದೆ. ನಮಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದೆ, ನಾವೇ ಗೆಲ್ಲುತ್ತೇವೆ. ಕರ್ನಾಟಕದ ಜನರ ನಾಡಿಮಿಡಿತ ನಮಗೆ ಗೊತ್ತಿದೆ. ಸರ್ಕಾರ ರಚನೆ ಮಾಡೇ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement