ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ತನಿಖೆಗೆ ಎಸ್‌ಐಟಿ ರಚನೆ

ನವದೆಹಲಿ : ದೇಶದ ಖ್ಯಾತ ಮಹಿಳಾ ಕುಸ್ತಿಪಟುಗಳಿಗೆ ಲೈಗಿಂಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಸಿಂಗ್‌ ವಿರುದ್ಧ ತನಿಖೆ ನಡೆಸಲು ಎಸ್‌ಐಟಿ ತಂಡ ರಚಿಸಲಾಗಿದೆ.
ದೆಹಲಿಯಲ್ಲಿ ಕುಸ್ತಿಪಟುಗಳ ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲೇ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪಗಳ ತನಿಖೆಗಾಗಿ ಎಸ್‌ಐಟಿ ರಚಿಸಲಾಗಿದೆ ಎಂದು ದೆಹಲಿ ಪೊಲೀಸರು ಶುಕ್ರವಾರ ವಿಶೇಷ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸಾಕ್ಷಿ ಮಲಿಕ್ ಬುಧವಾರ ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಏಳು ಕುಸ್ತಿಪಟುಗಳು ಹೊರಿಸಿದ ಲೈಂಗಿಕ ಕಿರುಕುಳ ಆರೋಪದಲ್ಲಿ ಅವರಿಗೆ ನಿರಪರಾಧಿ ಎಂಬ ವಿಶ್ವಾಸವಿದ್ದರೆ ಸುಳ್ಳು ಪತ್ತೆ (ಲೈ ಡಿಟೆಕ್ಟಿವ್‌) ನಾರ್ಕೋ ಪರೀಕ್ಷೆಗೆ ಒಳಗಾಗುವಂತೆ ಸವಾಲು ಹಾಕಿದ್ದಾರೆ.
“ನಾನು ಡಬ್ಲ್ಯುಎಫ್‌ಐ (WFI) ಅಧ್ಯಕ್ಷರಿಗೆ ನಾರ್ಕೋ ಪರೀಕ್ಷೆ ಮಾಡಿಸುವಂತೆ ಸವಾಲು ಹಾಕುತ್ತೇನೆ. ನಾವೂ ಪರೀಕ್ಷೆಗೆ ಒಳಗಾಗಲು ಸಿದ್ಧರಿದ್ದೇವೆ. ಸತ್ಯ ಬಹಿರಂಗವಾಗಲಿ ಎಂದು ಮಲಿಕ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಎಲ್ಲಾ ಸ್ಪರ್ಧೆಗಳು ಐಒಎಯ ತಾತ್ಕಾಲಿಕ ಪ್ಯಾನೆಲ್ ಅಡಿಯಲ್ಲಿ ನಡೆಯಬೇಕೆಂದು ನಾವು ಬಯಸುತ್ತೇವೆ. ಡಬ್ಲ್ಯುಎಫ್‌ಐ ಮುಖ್ಯಸ್ಥರು ಯಾವುದೇ ರೀತಿಯಲ್ಲಿ ಭಾಗಿಯಾಗಿದ್ದರೆ, ನಾವು ಅದನ್ನು ವಿರೋಧಿಸುತ್ತೇವೆ ಎಂದು ಇನ್ನೊಬ್ಬ ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಹೇಳಿದ್ದಾರೆ. ಸಿಂಗ್ ವಿರುದ್ಧದ ತನಿಖೆಯ ನಿಧಾನಗತಿಯಲ್ಲಿ ಸಾಗುತ್ತಿರುವುದಕ್ಕೆ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ದೆಹಲಿ ಪೊಲೀಸರು ಏಪ್ರಿಲ್ 28 ರಂದು ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ಇಂದಿನ ಪ್ರಮುಖ ಸುದ್ದಿ :-   ಪ್ರಧಾನಿ ಮೋದಿ ಭೇಟಿ ಮಾಡಿದ ಚಾಟ್‌ಜಿಪಿಟಿ ಸೃಷ್ಟಿಕರ್ತ ಸ್ಯಾಮ್ ಆಲ್ಟ್‌ಮನ್ : ಭಾರತದಲ್ಲಿ ಕೃತಕಬುದ್ಧಿಮತ್ತೆ (AI) ಬಳಕೆಯ ಸಾಧಕ-ಬಾಧಕಗಳ ಬಗ್ಗೆ ಚರ್ಚೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement