ಶಿವಮೊಗ್ಗ: ಚೋರಡಿಯಲ್ಲಿ ಎರಡು ಬಸ್‌ಗಳು ಮುಖಾಮುಖಿ ಡಿಕ್ಕಿ – ಇಬ್ಬರು ಸಾವು, 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಶಿವಮೊಗ್ಗ : ಶಿವಮೊಗ್ಗ ತಾಲೂಕಿನ ಚೋರಡಿಯಲ್ಲಿಎರಡು ಖಾಸಗಿ ಬಸ್‌ಗಳ ನಡುವೆ ಗುರುವಾರ ಸಂಜೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.
ಶಿವಮೊಗ್ಗದಿಂದ ಶಿಕಾರಿಪುರಕ್ಕೆ ಹೋಗುತ್ತಿದ್ದ ಹಾಗೂ ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದಾರೆ. 30ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ ಎಂದು ಹೇಳಲಾಗಿದೆ.
ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ (Accident) ರಭಸಕ್ಕೆ ಎರಡು ಬಸ್‌ಗಳ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆಹಲವು ಪ್ರಯಾಣಿಕರು ಬಸ್‌ನಲ್ಲಿಯೇ ಸಿಲುಕಿದ್ದರಿಂದ ಜೆಸಿಬಿ ಮೂಲಕ ಬಸ್‌ಗಳನ್ನು ಸರಿಸಿದ್ದಾರೆ. ರಕ್ಷಣೆ ಕಾರ್ಯವು ಸುಮಾರು ಗಂಟೆಗಳ ಕಾಲ ನಡೆಯಿತು. ಬಸ್‌ನಲ್ಲಿದ್ದ ಪ್ರಯಾಣಿಕರಲ್ಲಿ ಕೆಲವರ ಸೊಂಟ ಭಾಗವು ಬಸ್‌ನಲ್ಲೇ ಸಿಲುಕಿದ್ದು ಅವರನ್ನು ಹೊರಗಡೆ ತೆಗೆಯುವುದೇ ದೊಡ್ಡ ಸವಾಲಾಗಿತ್ತು, ಪೊಲೀಸರು, ಸ್ಥಳೀಯರು ರಕ್ಷಣಾ ಕಾರ್ಯ ನಡೆಸಿದರು.
ಗಾಯಾಳುಗಳನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಸಂಭವಿಸಿದ ಬಳಿಕ ಮೆಗ್ಗಾನ್ ಆಸ್ಪತ್ರೆಗೆ ಸಂಸದ ಬಿವೈ ರಾಘವೇಂದ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ, ಶಾಸಕ ಅಶೋಕ ನಾಯ್ಕ್, ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ಎಸ್‌ಪಿ ಮಿಥುನಕುಮಾರ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

ಪ್ರಮುಖ ಸುದ್ದಿ :-   ಜೂನ್ 21ರಿಂದ 10 ದಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಮುನ್ಸೂಚನೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement