ನನಗೆ ಎಕ್ಸಿಟ್ ಪೋಲ್ ಮೇಲೆ ನಂಬಿಕೆ ಇಲ್ಲ; ನನ್ನ ಪ್ರಕಾರ ಕಾಂಗ್ರೆಸ್ 141 ಸ್ಥಾನ ಗೆಲ್ಲುತ್ತದೆ: ಡಿ.ಕೆ ಶಿವಕುಮಾರ ವಿಶ್ವಾಸ

ಬೆಂಗಳೂರು: ನನಗೆ ಎಕ್ಸಿಟ್ ಪೋಲ್ (ಚುನಾವಣೋತ್ತರ ಸಮೀಕ್ಷೆ) ಬಗ್ಗೆ ನಂಬಿಕೆ ಇಲ್ಲ. ನನ್ನ ಪ್ರಕಾರ ಕಾಂಗ್ರೆಸ್‌ 141 ಸ್ಥಾನ ಗೆಲ್ಲುತ್ತದೆ. ನಮ್ಮ ಸಮೀಕ್ಷೆಯಲ್ಲಿ ಎಕ್ಸಿಟ್ ಪೋಲ್ ಸಮೀಕ್ಷೆಗಿಂತ ಹೆಚ್ಚು ಮಾದರಿಗಳನ್ನು ಸಂಗ್ರಹ ಮಾಡಲಾಗಿದ್ದು, ಅದರ ಆಧಾರದ ಮೇಲೆ ನಮಗೆ ಕಾಂಗ್ರೆಸ್‌ 141 ಸ್ಥಾನ ಗೆಲ್ಲುವ ವಿಶ್ವಾಸವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಹೇಳಿದ್ದಾರೆ.
ಇಂದು, ಶುಕ್ರವಾರ ನಗರದ ತಮ್ಮ ನಿವಾಸದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಚುನಾಔನೋತ್ತರ ಸಮಿಕ್ಷೆಗಿಂತ ಕಾಂಗ್ರೆಸ್ ಹೆಚ್ಚಿನ ಸ್ಥಾನ ಪಡೆಯಲಿದೆ. ಎಕ್ಸಿಟ್ ಪೋಲ್ ನಲ್ಲಿ ನಮ್ಮ ಪರ ವಿಶ್ವಾಸ ತೋರಿದ್ದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಆದರೆ ಕಾಂಗ್ರೆಸ್ ಪಕ್ಷಕ್ಕೆ ನಿಚ್ಚಳ ಬಹುಮತ ಬರಲಿದೆ ಎಂಬುದು ನಮ್ಮ ನಂಬಿಕೆ. ನಾನು ಸ್ಥಳೀಯವಾಗಿ ಓಡಾಟ ಮಾಡಿದ್ದೇನೆ ಎಂದು ಹೇಳಿದರು.

ಬಿಜೆಪಿಯಲ್ಲಿ ಎಷ್ಟೇ ದೊಡ್ಡ ನಾಯಕರು ಬಂದು ಪ್ರಚಾರ ಮಾಡಿರಬಹುದು. ಆವರೆ ಮತ ಎಂಬುದು ಬುಲೆಟ್ ಗಿಂತ ಶಕ್ತಿಶಾಲಿಯಾಗಿದೆ. ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡಲು ಹೇಗೆ ಜನ ಬ್ರಿಟೀಷರ ಗುಂಡಿಗೆ ಹೆದರಲಿಲ್ಲವೋ, ಅದೇ ರೀತಿ ಜನ ಡಬಲ್ ಇಂಜಿನ್ ಸರ್ಕಾರದ ದುರಾಡಳಿತದ ವಿರುದ್ಧ ಮತಚಲಾಯಿಸಿದ್ದಾರೆ. ಜನ ತಮ್ಮ ನಿರ್ಧಾರ ಬದಲಿಸುವುದಿಲ್ಲ. ನಾಳೆ ಮಧ್ಯಾಹ್ನ 1 ಗಂಟೆ ವೇಳೆಗೆ ಎಲ್ಲವೂ ಸ್ಪಷ್ಟವಾಗಲಿದೆ ಎಂದು ತಿಳಿಸಿದರು.
ಅತಂತ್ರ ವಿಧಾನಸಭೆ ನಿರ್ಮಾಣಾ ಆಗಬಹುದು ಎಂಬ ಕಾರಣಕ್ಕೆ ತೆರೆಮರೆಯಲ್ಲಿ ಪ್ರಯತ್ನ ನಡೆಯುತ್ತಿದೆ. ಈ ಕಾರಣಕ್ಕೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಸಿಂಗಾಪುರಕ್ಕೆ ಹೋಗುವ ಮುನ್ನ ನಾನು ಮೈತ್ರಿಗೆ ಸಿದ್ಧ ಎಂಬ ಹೇಳಿಕೆ ನೀಡಿದ್ದರ ಬಗ್ಗೆ ಕೇಳಿದಾಗ, ‘ಯಾವ ತೆರೆಮರೆ ಪ್ರಯತ್ನವೂ ಇಲ್ಲ. ಕಾಂಗ್ರೆಸ್‌ಗೆ ಸ್ಪಷ್ಟಬಹುಮತ ಸಿಗಲಿದೆ. ಜೆಡಿಎಸ್‌ನವರು ಇಷ್ಟು ದಿನ ತಮಗೇ ಬಹುಮತ ಸಿಗಲಿದೆ ಎಂದು ಹೇಳುತ್ತಿದ್ದರು. ಹಾಗೆ ಹೇಳಿದವರು ಈಗ ಯಾರ ಜತೆ ಮೈತ್ರಿ ಮಾಡಿಕೊಳ್ಳಲು ಸಿದ್ಧವಾಗಿದ್ದಾರೋ ಗೊತ್ತಿಲ್ಲ’ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ರಾಜ್ಯದ ವಿಧಾನ ಪರಿಷತ್ತಿನ 6 ಸ್ಥಾನಗಳಿಗೆ ಚುನಾವಣೆ ಘೋಷಣೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement