ಮೋಚಾ ಚಂಡಮಾರುತ : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

ಬೆಂಗಳೂರು : ಮುಂದಿನ ಎರಡು ದಿನ (ಮೇ 12 ಹಾಗೂ 13) ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎರಡು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ನೀಡಿದೆ.
ಇಂದು ಶುಕ್ರವಾರ ಕರಾವಳಿಯ ದಕ್ಷಿಣ ಕನ್ನಡ, ಉಡುಪು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಗುರುವಾರ ರಾಜ್ಯದ ಹಲವೆಡೆ ಮಳೆಯಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement