ನನಗೆ ಎಕ್ಸಿಟ್ ಪೋಲ್ ಮೇಲೆ ನಂಬಿಕೆ ಇಲ್ಲ; ನನ್ನ ಪ್ರಕಾರ ಕಾಂಗ್ರೆಸ್ 141 ಸ್ಥಾನ ಗೆಲ್ಲುತ್ತದೆ: ಡಿ.ಕೆ ಶಿವಕುಮಾರ ವಿಶ್ವಾಸ

ಬೆಂಗಳೂರು: ನನಗೆ ಎಕ್ಸಿಟ್ ಪೋಲ್ (ಚುನಾವಣೋತ್ತರ ಸಮೀಕ್ಷೆ) ಬಗ್ಗೆ ನಂಬಿಕೆ ಇಲ್ಲ. ನನ್ನ ಪ್ರಕಾರ ಕಾಂಗ್ರೆಸ್‌ 141 ಸ್ಥಾನ ಗೆಲ್ಲುತ್ತದೆ. ನಮ್ಮ ಸಮೀಕ್ಷೆಯಲ್ಲಿ ಎಕ್ಸಿಟ್ ಪೋಲ್ ಸಮೀಕ್ಷೆಗಿಂತ ಹೆಚ್ಚು ಮಾದರಿಗಳನ್ನು ಸಂಗ್ರಹ ಮಾಡಲಾಗಿದ್ದು, ಅದರ ಆಧಾರದ ಮೇಲೆ ನಮಗೆ ಕಾಂಗ್ರೆಸ್‌ 141 ಸ್ಥಾನ ಗೆಲ್ಲುವ ವಿಶ್ವಾಸವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಹೇಳಿದ್ದಾರೆ. ಇಂದು, … Continued

ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ತನಿಖೆಗೆ ಎಸ್‌ಐಟಿ ರಚನೆ

ನವದೆಹಲಿ : ದೇಶದ ಖ್ಯಾತ ಮಹಿಳಾ ಕುಸ್ತಿಪಟುಗಳಿಗೆ ಲೈಗಿಂಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಸಿಂಗ್‌ ವಿರುದ್ಧ ತನಿಖೆ ನಡೆಸಲು ಎಸ್‌ಐಟಿ ತಂಡ ರಚಿಸಲಾಗಿದೆ. ದೆಹಲಿಯಲ್ಲಿ ಕುಸ್ತಿಪಟುಗಳ ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲೇ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ … Continued

ಬಿಡುಗಡೆಗೆ ಮುನ್ನವೇ ‘ಆದಿಪುರುಷ’ ಸಿನೆಮಾ ವಿವಾದ : ಸಿಬಿಎಫ್‌ಸಿ ಮಂಡಳಿಯಲ್ಲಿ ದೂರು ದಾಖಲು

ಮುಂಬೈ: ಪ್ರಭಾಸ ಮತ್ತು ಕೃತಿ ಸನೂನ್‌ ಅಭಿನಯದ ಬಹುನಿರೀಕ್ಷಿತ ಚಿತ್ರ ʼಆದಿಪುರುಷʼ ಚಿತ್ರ ಜೂನ್‌ 16 ರಂದು ತೆರೆಕಾಣುತ್ತಿದೆ. ಆದರೆ ಚಿತ್ರ ಬಿಡುಗಡೆಗೆ ಮುನ್ನವೇ ಸಿನೆಮಾಕ್ಕೆ ಸಂಕಷ್ಟ ಎದುರಾಗಿದೆ. ಕೆಲದಿನಗಳ ಹಿಂದೆ ಆದಿಪುರುಷ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿತ್ತು. ಇದರ ಬೆನ್ನಲ್ಲೇ ಸಂಜಯ ದೀನಾನಾಥ ತಿವಾರಿ ಎಂಬುವವರು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (CBFC) ಮಂಡಳಿಯಲ್ಲಿ … Continued

ಚುನಾವಣೋತ್ತರ ಸಮೀಕ್ಷೆಗಳಿಂದ ಸಂಭವನೀಯ ಅತಂತ್ರ ವಿಧಾನಸಭೆ ಭವಿಷ್ಯ: ಬಿಜೆಪಿ ಅಥವಾ ಕಾಂಗ್ರೆಸ್‌ ಜೊತೆ ಮೈತ್ರಿಗೆ ಸಿದ್ಧ ಎಂದ ಕುಮಾರಸ್ವಾಮಿ, ಆದರೆ…

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್‌ ನಾಯಕ ಎಚ್‌.ಡಿ. ಕುಮಾರಸ್ವಾಮಿ ತಮ್ಮ ಪಕ್ಷವು ಕಾಂಗ್ರೆಸ್ ಅಥವಾ ಆಡಳಿತಾರೂಢ ಭಾರತೀಯ ಜನತಾ ಪಕ್ಷದೊಂದಿಗೆ ಚುನಾವಣೋತ್ತರ ಮೈತ್ರಿಗೆ ಮುಕ್ತವಾಗಿದೆ ಎಂದು ಹೇಳಿದ್ದಾರೆ. ಶನಿವಾರದ ಮತಗಳ ಎಣಿಕೆಗೆ ಮುಂಚಿತವಾಗಿ ಅವರ ಈ ಹೇಳಿಕೆ ಬಂದಿದೆ. ಹೆಚ್ಚಿನ ಚುನಾವಣೋತ್ತರ ಅತಂತ್ರ ವಿಧಾನಸಭೆ ಹೆಚ್ಚು ಸಂಭವನೀಯ ಫಲಿತಾಂಶವೆಂದು ಸೂಚಿಸಿವೆ; ಇದರ ಬೆನ್ನಲ್ಲೇ ಕುಮಾರಸ್ವಾಮಿಯರ … Continued

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ, ತಿರುವನಂತಪುರ ಫಸ್ಟ್, ಬೆಂಗಳೂರಿಗೆ 2 ನೇ ಸ್ಥಾನ

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಸಿಬಿಎಸ್‌ಇ 12ನೇ ಬೋರ್ಡ್ ಫಲಿತಾಂಶ 2023 ಅನ್ನು ಪ್ರಕಟಿಸಿದೆ. 12ನೇ ತರಗತಿ ಫಲಿತಾಂಶ ಬೆಳಗ್ಗೆ 10:45ಕ್ಕೆ ಪ್ರಕಟವಾಗಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಸಿಬಿಎಸ್‌ಇ-cbse.gov.in ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು. ಫಲಿತಾಂಶದಲ್ಲಿ ತಿರುವನಂತಪುರ 99.91% ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿ ಮೊದಲ ಸ್ಥಾನ ಪಡೆದುಕೊಂಡಿದೆ. ಬೆಂಗಳೂರು … Continued

ಟ್ವಿಟರಿಗೆ ಮಹಿಳಾ ಸಿಇಒ ಆಯ್ಕೆ ಮಾಡಿದ ಎಲೋನ್‌ ಮಸ್ಕ್‌

ನ್ಯೂಯಾರ್ಕ್‌ : ಎಲೋನ್ ಮಸ್ಕ್ ಅವರು ಗುರುವಾರ ಟ್ವಿಟರಿಗೆ ಹೊಸ ಮುಖ್ಯ ಕಾರ್ಯನಿರ್ವಾಹಕರನ್ನು ನೇಮಕ ಮಾಡುವುದಾಗಿ ಹೇಳಿದ್ದಾರೆ. ಆದರೆ ಅವರು ವ್ಯಕ್ತಿ ಯಾರೆಂದು ಹೆಸರಿಸದಿದ್ದರೂ, ವಾಲ್ ಸ್ಟ್ರೀಟ್ ಜರ್ನಲ್ ವರದಿ ಪ್ರಕಾರ ಕಾಮ್‌ಕಾಸ್ಟ್ ಎನ್‌ಬಿಸಿ ಯುನಿವರ್ಸಲ್ ಎಕ್ಸಿಕ್ಯೂಟಿವ್ ಲಿಂಡಾ ಯಾಕರಿನೊ ಅವರನ್ನು ಸಿಇಒ ಸ್ಥಾನಕ್ಕೆ ತರುವ ಕುರಿತು ಮಾತುಕತೆ ನಡೆಯುತ್ತಿದೆ. ಮಸ್ಕ್ ಟ್ವೀಟ್‌ನಲ್ಲಿ ನಾನು ಟ್ವಟರಿಗಾಗಿ … Continued

ಮೋಚಾ ಚಂಡಮಾರುತ : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

ಬೆಂಗಳೂರು : ಮುಂದಿನ ಎರಡು ದಿನ (ಮೇ 12 ಹಾಗೂ 13) ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎರಡು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ನೀಡಿದೆ. ಇಂದು ಶುಕ್ರವಾರ ಕರಾವಳಿಯ ದಕ್ಷಿಣ ಕನ್ನಡ, ಉಡುಪು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ … Continued

ಶಿವಮೊಗ್ಗ: ಚೋರಡಿಯಲ್ಲಿ ಎರಡು ಬಸ್‌ಗಳು ಮುಖಾಮುಖಿ ಡಿಕ್ಕಿ – ಇಬ್ಬರು ಸಾವು, 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಶಿವಮೊಗ್ಗ : ಶಿವಮೊಗ್ಗ ತಾಲೂಕಿನ ಚೋರಡಿಯಲ್ಲಿಎರಡು ಖಾಸಗಿ ಬಸ್‌ಗಳ ನಡುವೆ ಗುರುವಾರ ಸಂಜೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. ಶಿವಮೊಗ್ಗದಿಂದ ಶಿಕಾರಿಪುರಕ್ಕೆ ಹೋಗುತ್ತಿದ್ದ ಹಾಗೂ ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದಾರೆ. 30ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ ಎಂದು … Continued

ಭಾರತದ 30 ಹೈ ಸ್ಟ್ರೀಟ್‌ಗಳ ಪಟ್ಟಿಯಲ್ಲಿ ಬೆಂಗಳೂರಿನ ಎಂ.ಜಿ. ರಸ್ತೆಗೆ ಮೊದಲ ಸ್ಥಾನ, ಟಾಪ್ 10ರಲ್ಲಿ ಬೆಂಗಳೂರಿನ 4 ರಸ್ತೆಗಳು…!

ಬೆಂಗಳೂರು: ಸಮೀಕ್ಷೆಯೊಂದರಲ್ಲಿ ಬೆಂಗಳೂರು ಮಹಾನಗರದ ಪ್ರಮುಖ ರಸ್ತೆಗಳಲ್ಲೊಂದಾದ ಮಹಾತ್ಮಾ ಗಾಂಧಿ (ಎಂ.ಜಿ.ರಸ್ತೆ) ರಸ್ತೆಯು ದೇಶದ ಪ್ರಮುಖ ವಾಣಿಜ್ಯ ರಸ್ತೆಗಳಲ್ಲೇ ನಂಬರ್ ಒನ್ ರಸ್ತೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಪ್ರಾಪರ್ಟಿ ಕನ್ಸಲ್ಟೆಂಟ್ ನೈಟ್ ಫ್ರಾಂಕ್ ಅವರು ಬಿಡುಗಡೆ ಮಾಡಿರುವ ಭಾರತದ ಟಾಪ್ 30 ಹೈ ಸ್ಟ್ರೀಟ್‌ಗಳ ಪಟ್ಟಿಯಲ್ಲಿ ಬೆಂಗಳೂರಿನ ಐಕಾನಿಕ್ ಮಹಾತ್ಮಾ ಗಾಂಧಿ ರಸ್ತೆ (ಎಂ.ಜಿ.ರಸ್ತೆ) ಮೊದಲ … Continued