ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆ ಸಲ್ಲಿಕೆ

posted in: ರಾಜ್ಯ | 0

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವು ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಲು ಸಿದ್ಧತೆ ನಡೆಸಿದೆ. ಬಿಜೆಪಿಯ ಸೋಲಿನ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆ ಸಲ್ಲಿಸಿದ್ದಾರೆ. ಹಾವೇರಿಯ ಶಿಗ್ಗಾವಿಯಿಂದ ಬೆಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನೇರವಾಗಿ ರಾಜಭವನಕ್ಕೆ ತೆರಳಿ, ರಾಜ್ಯಪಾಲ ಥಾವರ್‌ ಚಂದ ಗೆಹ್ಲೋತ್‌ ಅವರಿಗೆ ರಾಜೀನಾಮೆ ಸಲ್ಲಿಸಿದರು. ಈ … Continued

ಬಿಜೆಪಿ 75 ಹೊಸ ಅಭ್ಯರ್ಥಿಗಳಲ್ಲಿ 61 ಮಂದಿಗೆ ಸೋಲು, 9 ಜಿಲ್ಲೆಗಳಲ್ಲಿ ಶೂನ್ಯ ಸಂಪಾದನೆ

posted in: ರಾಜ್ಯ | 0

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಮಲ ಮುದುಡಿದೆ. ಕೈ ಗೆಲುವು ಸಾಧಿಸಿದೆ. ಬಿಜೆಪಿ 9 ಜಿಲ್ಲೆಗಳಲ್ಲಿ ಶೂನ್ಯ ಸಂಪಾದನೆ ಮಾಡಿದರೆ 8 ಜಿಲ್ಲೆಯಲ್ಲಿ ತಲಾ ಒಂದು ಸ್ಥಾನದಲ್ಲಿ ಮಾತ್ರ ಗೆಲುವು ಸಾಧಿಸಿದೆ. ಕೋಲಾರ, ರಾಮನಗರ, ಮಂಡ್ಯ, ಕೊಡಗು, ಬಳ್ಳಾರಿ, ಚಿಕ್ಕಮಗಳೂರು, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಯಲ್ಲಿ ಶೂನ್ಯ ಸಂಪಾದನೆ ಮಾಡಿದೆ. ರಾಜ್ಯದ 7 ಜಿಲ್ಲೆಗಳಲ್ಲಿ ತಲಾ … Continued

ನಾಳೆ ಸಂಜೆ ಮಹತ್ವದ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ

posted in: ರಾಜ್ಯ | 0

ಬೆಂಗಳೂರು: ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ ಬುಮತ ಪಡೆದು ನಂತರ ಮೇ 14ರಂದು ಸಂಜೆ 5:30ಕ್ಕೆ ಕಾಂಗ್ರೆಸ್ ಪಕ್ಷದ ಮಹತ್ವದ ಶಾಸಕಾಂಗ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆಯ ಬಗ್ಗೆ ಚರ್ಚೆ ನಡೆಯಲಿದ್ದು, ಸಿಎಲ್‌ಪಿ ನಾಯಕರು ಯಾರು ಎಂಬುದಾಗಿ ಘೋಷಣೆ ಮಾಡಲಿದೆ. ಈ ಕುರಿತು ಮಾಹಿತಿ ನೀಡಿದ ಕರ್ನಾಟಕ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ … Continued

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿಗಳ ಪಟ್ಟಿ…

posted in: ರಾಜ್ಯ | 1

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಶನಿವಾರ (ಮೇ 13) ಪ್ರಕಟವಾಗಿದೆ. 2023ರ ಚುನಾವಣೆಯಲ್ಲಿ ಕಾಂಗ್ರೆಸ್‌ 136, ಬಿಜೆಪಿ 65, ಜೆಡಿಎಸ್‌ 19 ಸ್ಥಾನಗಳನ್ನು ಗಳಿಸಿವೆ. ಚುನಾವಣೆಯಲ್ಲಿ ಗೆದ್ದಿರುವ ಅಭ್ಯರ್ಥಿಗಳ ಜಿಲ್ಲಾವಾರು ಪಟ್ಟಿ ಬೆಂಗಳೂರು ನಗರ ಜಿಲ್ಲೆ…. ಆನೇಕಲ್-ಬಿ.ಶಿವಣ್ಣ (ಕಾಂಗ್ರೆಸ್), ಹೆಬ್ಬಾಳ-ಬೈರತಿ ಸುರೇಶ (ಕಾಂಗ್ರೆಸ್), ಸಿ.ವಿ. ರಾಮನ್‌ನಗರ-ಎಸ್. ರಘು (ಬಿಜೆಪಿ), ಸರ್ವಜ್ಞನಗರ-ಕೆ.ಜೆ. ಜಾರ್ಜ್ (ಕಾಂಗ್ರೆಸ್‌), … Continued

ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ : ಧಾರವಾಡ ಜಿಲ್ಲೆಯಲ್ಲಿ ಕಾಂಗ್ರೆಸ್‌-೪ ಬಿಜೆಪಿ-೩ರಲ್ಲಿ ಗೆಲುವು, ಅಭ್ಯರ್ಥಿಗಳ ಗೆಲುವಿನ ಅಂತರ..?

posted in: ರಾಜ್ಯ | 0

ಧಾರವಾಡ : ರಾಜ್ಯ ವಿಧಾನಸಭೆಯ ೨೨೪ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಸರ್ಕಾರ ರಚಿಸಲು ಬೇಕಿದ್ದಂತ ಮ್ಯಾಜಿಕ್ ನಂಬರ್ ಅನ್ನು ಕಾಂಗ್ರೆಸ್‌ ದಾಟಿದೆ. ಧಾರವಾಡ ಜಿಲ್ಲೆಯಲ್ಲಿ ಕಾಂಗ್ರೆಸ್‌ ತನ್ನ ಪ್ರಾಬಲ್ಯ ಮೆರೆದಿದೆ. ಧಾರವಾಡ ಜಿಲ್ಲೆಯಲ್ಲಿ ಕಾಂಗ್ರೆಸ್‌ ನಾಲ್ಕು ಸ್ಥಾನಗಳಲ್ಲಿ ಗೆದ್ದರೆ ಬಿಜೆಪಿ ಮೂರು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿಯಿಂದ ಟಿಕೆಟ್‌ ನಿರಾಕರಿಸಿದ್ದಕ್ಕೆ ಅಸಮಾಧಾನಗೊಂಡು ಕಾಂಗ್ರೆಸ್‌ ಸೇರಿ ಟಿಕೆಟ್‌ … Continued

ರಾಜ್ಯದಲ್ಲೇ ಅತಿ ದೊಡ್ಡ ಅಂತರದ ದಾಖಲೆಯ ಗೆಲುವು ಸಾಧಿಸಿದ ಡಿ.ಕೆ.ಶಿವಕುಮಾರ

posted in: ರಾಜ್ಯ | 0

ರಾಮನಗರ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು ತಮ್ಮ ಭದ್ರಕೋಟೆಯಾದ ಕನಕಪುರ ಕ್ಷೇತ್ರದಲ್ಲಿ ದಾಖಲೆಯ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಕಂದಾಯ ಸಚಿವರಾಗಿದ್ದ ಬಿಜೆಪಿಯ ಆರ್‌. ಅಶೋಕ್‌ ಅವರು ಬೆಂಗಲೂರಿನ ಪದ್ಮನಾಭ ನಗರದ ಜೊತೆ ಕನಕಪುರದಲ್ಲೂ ಸ್ಪರ್ಧಿಸಿದ್ದರು. ಹೀಗಾಗಿ ಕನಕಪುರ ಕ್ಷೇತ್ರ ಈ ಬಾರಿ ರಾಜ್ಯದ ಕುತೂಹಲ ಕೆರಳಿಸಿದ್ದ ಕ್ಷೇತ್ರಗಳಲ್ಲಿ ಒಂದಾಗಿತ್ತು. ಕಂದಾಯ ಸಚಿವ ಆರ್‌.ಅಶೋಕ … Continued

ಕರ್ನಾಟಕದ ವಿಧಾನಸಭೆ ಚುನಾವಣೆ : ನಿಜವಾದ ಕೋಡಿಮಠದ ಶ್ರೀಗಳ ಭವಿಷ್ಯ

posted in: ರಾಜ್ಯ | 0

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್​ಗೆ ಬಹುಮತ ಸಿಕ್ಕಿದೆ. ಚುನಾವಣಾ ಆಯೋಗದ ಇತ್ತೀಚಿನ ಮಾಹಿತಿ ಪ್ರಕಾರ, ಕಾಂಗ್ರೆಸ್ 113 ಸ್ಥಾನಗಳನ್ನು ಗೆದ್ದಿದೆ ಮತ್ತು 22 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಬಾರಿಯ ಚುನಾವಣೆ ಫಲಿತಾಂಶದ ಬಗ್ಗೆ ಕೋಡಿಮಠದ ಶ್ರೀಗಳು ಹೇಳಿದ ಭವಿಷ್ಯ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಯಾಕೆಂದರೆ ಈ ಬಾರಿ … Continued

ವಿಧಾನಸಭೆ ಚುನಾವಣೆ ಫಲಿತಾಂಶ: ಮೈಸೂರು ಜಿಲ್ಲೆಯಲ್ಲಿ ಕಾಂಗ್ರೆಸ್‌-8, ಜೆಡಿಎಸ್‌-2, ಬಿಜೆಪಿ-1ರಲ್ಲಿ ಗೆಲುವು

posted in: ರಾಜ್ಯ | 0

ಮೈಸೂರು : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ 11 ಕ್ಷೇತ್ರಗಳಲ್ಲಿ 8 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದೆ. 2 ಕ್ಷೇತ್ರಗಳಲ್ಲಿ ಜೆಡಿಎಸ್‌ ಹಾಗೂ 1 ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಜಯಭೇರಿ ಬಾರಿಸಿದೆ. ಜಿಲ್ಲೆಯ ಚಾಮರಾಜ, ಕೆ.ಆರ್ ನಗರ, ಟಿ.ನರಸೀಪುರ, ನರಸಿಂಹರಾಜ, ನಂಜನಗೂಡು, ಪಿರಿಯಾಪಟ್ಟಣ, ಎಚ್.ಡಿ‌ ಕೋಟೆ, ವರುಣ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಜಯಭೇರಿ ಬಾರಿಸಿದೆ. ಚಾಮುಂಡೇಶ್ವರಿ, … Continued

ಉತ್ತರ ಕನ್ನಡ ಜಿಲ್ಲೆ: ಕಾಂಗ್ರೆಸ್‌-4 ಬಿಜೆಪಿ-2, ಸೋಲೆ ಕಾಣದ ಕಾಗೇರಿಗೆ ಸೋಲುಣಿಸಿದ ಭೀಮಣ್ಣ, ಹಾವು ಏಣಿ ಆಟದಲ್ಲಿ ಕೊನೆ ಸುತ್ತಿನಲ್ಲಿ ಅಲ್ಪಮತದಲ್ಲಿ ಗೆದ್ದ ದಿನಕರ ಶೆಟ್ಟಿ

posted in: ರಾಜ್ಯ | 0

ಕಾರವಾರ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು ಆರು ಕ್ಷೇತ್ರಗಳಲ್ಲಿ ನಾಲ್ಕರಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದ್ದರೆ ಎರಡುರಲ್ಲಿ ಬಿಜೆಪಿ ಗೆದ್ದಿದೆ. ಶಿರಸಿಯಲ್ಲಿ ಸೋಲಿಲ್ಲದ ಸರದಾರ ಎಂದೇ ಖ್ಯಾತಿ ಪಡೆದಿದ್ದ ಸತತ ಆರು ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸೋಲುಂಡಿದ್ದಾರೆ. ಇದೇವೇಳೆ ಸತತ ಸೋಲು ಅನುಭವಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ … Continued

ಚಿತ್ರದುರ್ಗ ಜಿಲ್ಲೆಯಲ್ಲಿ ಕಾಂಗ್ರೆಸ್‌ ಜಯಭೇರಿ, ಒಂದಕ್ಕೆ ಬಿಜೆಪಿ ತೃಪ್ತಿ

posted in: ರಾಜ್ಯ | 0

ಚಿತ್ರದುರ್ಗ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು ಆರು ಕ್ಷೇತ್ರಗಳಲ್ಲಿ ಐದು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಸಾಧಿಸಿದರೆ ಒಂದು ಕ್ಷೇತ್ರದಲ್ಲಿ ಗೆದ್ದು ತೃಪ್ತಿಪಟ್ಟುಕೊಂಡಿದೆ. ಜಿಲ್ಲೆಯ ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು, ಹೊಸದುರ್ಗ, ಮೊಳಕಾಲ್ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯ ಸಾಧಿಸಿದ್ದರೆ, ಹೊಳಲ್ಕೆರೆ ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಜಯಗಳಿಸಿದೆ.. ಚಿತ್ರದುರ್ಗ ಕ್ಷೇತ್ರದಲ್ಲಿ 99,804 ಮತಗಳನ್ನು ಪಡೆದು ಕೆ.ಸಿ.ವೀರೇಂದ್ರ ಅವರು … Continued