ಉತ್ತರ ಕನ್ನಡ ಜಿಲ್ಲೆ: ಕಾಂಗ್ರೆಸ್‌-4 ಬಿಜೆಪಿ-2, ಸೋಲೆ ಕಾಣದ ಕಾಗೇರಿಗೆ ಸೋಲುಣಿಸಿದ ಭೀಮಣ್ಣ, ಹಾವು ಏಣಿ ಆಟದಲ್ಲಿ ಕೊನೆ ಸುತ್ತಿನಲ್ಲಿ ಅಲ್ಪಮತದಲ್ಲಿ ಗೆದ್ದ ದಿನಕರ ಶೆಟ್ಟಿ

posted in: ರಾಜ್ಯ | 0

ಕಾರವಾರ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು ಆರು ಕ್ಷೇತ್ರಗಳಲ್ಲಿ ನಾಲ್ಕರಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದ್ದರೆ ಎರಡುರಲ್ಲಿ ಬಿಜೆಪಿ ಗೆದ್ದಿದೆ.
ಶಿರಸಿಯಲ್ಲಿ ಸೋಲಿಲ್ಲದ ಸರದಾರ ಎಂದೇ ಖ್ಯಾತಿ ಪಡೆದಿದ್ದ ಸತತ ಆರು ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸೋಲುಂಡಿದ್ದಾರೆ. ಇದೇವೇಳೆ ಸತತ ಸೋಲು ಅನುಭವಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಹೆಲುವಿನ ನಗೆ ಬೀರಿದ್ದಾರೆ.
ವಿಧಾನಸಭಾ ಅಧ್ಯಕ್ಷರಾಗಿದ್ದ ಕಾಗೇರಿಯವರು ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ವಿಶ್ವೇಶ್ವರ ಹೆಗಡೆ ಕಾಗೇರಿ ಈ ಬಾರಿ 66639 ಮತಗಳನ್ನ ಪಡೆದಿದ್ದು, ಭೀಮಣ್ಣ ನಾಯ್ಕ (75656) ಮತಗಳನ್ನು ಪಡೆದು 9017 ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ.
ಹಳಿಯಾಳ- ಜೊಯಿಡಾ- ದಾಂಡೇಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆರ್.ವಿ.ದೇಶಪಾಂಡೆ 9ನೇ ಬಾರಿಗೆ ಗೆಲುವು ಸಾಧಿಸಿದ್ದಾರೆ. ಆದರೆ ಈ ಸಲ ಅವರು ಗೆಲುವು ಪ್ಯಾಸದ ಗೆಲುವು ಎಂದು ಹೇಳಬಹುದು. ಅನೇಕ ಸುತ್ತುಗಳಲ್ಲಿ ಹಿಂದುಳಿದಿದ್ದ ಅವರು ಹಾವು ಏಣಿಯಾಟದಲ್ಲಿ ಕೊನೆಯ ಕೆಲವು ಸುತ್ತುಗಳಲ್ಲಿ ಮುನ್ನಡೆ ಸಾಧಿಸಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 56912 ಮತಗಳನ್ನು ಪಡೆದು ದೇಶಪಾಂಡೆಯವರು 3584 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಯಿಂದ ಸ್ಪರ್ಧಿಸಿದ್ದ ಸುನೀಲ್ ಹೆಗಡೆ 53328 ಮತಗಳನ್ನ ಪಡೆದರು. ದೇಶಪಾಂಡೆಯವರು ಕೇವಲ ಒಂದು ಸಲ ಮಾತ್ರ ಸೋಲು ಕಂಡಿದ್ದಾರೆ. ಅದು ಸಹ ಸುನಿಲ ಹೆಗಡೆ ಅವರ ವಿರುದ್ಧವೇ ಒಮ್ಮೆ ಸೋತಿದ್ದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಕುಮಟಾ-ಹೊನ್ನಾವರ ಕ್ಷೇತ್ರದಲ್ಲಿ ಹಾವು-ಏಣಿ ಆಟದಲ್ಲಿ ಅಂತೂ ಇಂತೂ ಬಿಜೆಪಿಯ ದಿನಕರ ಶೆಟ್ಟಿ ಅವರು ಜೆಡಿಎಸ್‌ನ ಸೂರಜ ನಾಯ್ಕ ಸೋನಿ ವಿರುದ್ಧ ಪ್ರಯಾಸದ ಗೆಲುವು ಕಂಡಿದ್ದಾರೆ. ಬಿಜೆಪಿಯ ದಿನಕ ಶೆಟ್ಟಿ 59966 ಮತಗಳನ್ನು ಪಡೆದು ಕೇವಲ 663 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ನ ಸೂರಜ ನಾಯ್ಕ ಸೋನಿ ಅವರು 59293 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ. ಕೊನೆಯ ಸುತ್ತಿನ ವರೆಗಗೂ ಮುನ್ನಡೆಯಲ್ಲಿದ್ದ ಸೋನಿ ಅವರು ಕೊನೆಯ ಸುತ್ತಿನಲ್ಲಿ ಹಿನ್ನಡೆ ಅನುಭವಿಸಿದರು. ಕಾಂಗ್ರೆಸ್ ಅಭ್ಯರ್ಥಿ ನಿವೇದಿತಾ ಆಳ್ವ ಅವರು 19272 ಮತಗಳನ್ನು ಪಡೆದು ನಿರಾಶಾದಾಯಕ ಪ್ರದರ್ಶನ ನೀಡಿದರು.
ಕಾರವಾರ ಕ್ಷೇತ್ರದಲ್ಲಿ ಶಾಸಕಿಯಾಗಿದ್ದ ಬಿಜೆಪಿ ಅಭ್ಯರ್ಥಿ ರೂಪಾಲಿ ನಾಯ್ಕ ಕಾಂಗ್ರೆಸ್‌ ಅಭ್ಯರ್ಥಿ ಸತೀಶ ಸೈಲ್‌ ವಿರುದ್ಧ ಪರಾಭವಗೊಂಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಸತೀಶ ಸೈಲ್‌ ಅವರು 76305 ಮತಗಳನ್ನು ಪಡೆದರೆ ಬಿಜೆಪಿಯ ರೂಪಾಲಿ ನಾಯ್ಕ ಅವರು 73890 ಮತಗಳನ್ನು ಪಡೆದು 2415 ಮತಗಳಿಂದ ಪರಾಭಗೊಂಡರು. ಜೆಡಿಎಸ್ ಅಭ್ಯರ್ಥಿ 2864 ಮತಗಳನ್ನು ಪಡೆದರು.
ಭಟ್ಕಳ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮಂಕಾಳ ವೈದ್ಯ ಅವರು ಬಿಜೆಪಿ ಶಾಸಕರಾಗಿದ್ದ ಸುನೀಲ ನಾಯ್ಕ ಅವರ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮಂಕಾಳ ವೈದ್ಯ ಅವರು 99603 ಮತಗಳನ್ನು ಪಡೆದು 32657 ಮತಗಳಿಂದ ಭರ್ಜರಿ ಗೆಲವು ಸಾಧಿಸಿದ್ದಾರೆ.
ಬಿಜೆಪಿಯ ಅಭ್ಯರ್ಥಿ ಸುನೀಲ ನಾಯ್ಕ 66946 ಮತಗಳನ್ನು ಪಡೆದರು.
ಯಲ್ಲಾಪುರ ಕ್ಷೇತ್ರದಲ್ಲಿ ಸಚಿವರಾಗಿದ್ದ ಬಿಜೆಪಿ ಅಭ್ಯರ್ಥಿ ಶಿವರಾಮ ಹೆಬ್ಬಾರ ಕಾಂಗ್ರೆಸ್‌ ಅಭ್ಯರ್ಥಿ ವಿ.ಎಸ್‌.ಪಾಟೀಲ ವಿರುದ್ಧ 3759 ಮತಗಳಿಂದ ಜಯಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಶಿವರಂ ಹೆಬ್ಬಾರ 73952 ಮತಗಳನ್ನು ಪಡೆದರೆ ಕಾಂಗ್ರೆಸ್ ಅಭ್ಯರ್ಥಿ 70193 ಮತಗಳನ್ನು ಪಡೆದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement