ಕರ್ನಾಟಕ ವಿಧಾನಸಭೆ ಚುನಾವಣೆ: ಘಟನಾಘಟಿಗಳಿಗೆ ಸೋಲು-ಹಲವು ಪ್ರಮುಖ ನಾಯಕರಿಗೆ ಗೆಲುವು

ಬೆಂಗಳೂರು : ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಹಾಲಿ ಸಚಿವರಿಗೆ ಬಿಗ್ ಶಾಕ್ ಎದುರಾಗಿದೆ. ಸ್ಪೀಕರ್‌ ಆಗಿದ್ದ ವಿಶ್ವೇಶ್ವರ ಹಾಗೆಡೆ ಕಾಗೇರಿ ಸೇರಿದಂತೆ ಬಿಜೆಪಿಯ ಹಲವು ಘಟನಾಘಟಿ ನಾಯಕರು ಹಾಗೂ ಸಚಿವರು ಸೋತಿದ್ದಾರೆ.
ಕಾಂಗ್ರೆಸ್‌ 130 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಸಿದ್ದು, ಭರ್ಜರಿ ಜಯದತ್ತ ಸಾಗುತ್ತಿದೆ. ಕಾಂಗ್ರೆಸ್- 47 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. 83 ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ ಸಾಧಿಸಿದೆ.
ಬಿಜೆಪಿ-15 ಕ್ಷೇತ್ರಗಳಲ್ಲಿ ಗೆಲುವು ಕಂಡಿದ್ದು, 49 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಜೆಡಿಎಸ್ -3 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.18 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಸೋತ ಪ್ರಮುಖರು
ಶಿರಸಿ-ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ
ಚಿಕ್ಕಬಳ್ಳಾಪುರ-ಬಿಜೆಪಿ ಅಭ್ಯರ್ಥಿ ಹಾಗೂ ಸಚಿವರಾಗಿದ್ದ ಕೆ. ಸುಧಾಕರ
ಚಾಮರಾಜನಗರ ಬಿಜೆಪಿ ಅಭ್ಯರ್ಥಿ-ಸಚಿವ ವಿ ಸೋಮಣ್ಣ
ಬಳ್ಳಾರಿ ಗ್ರಾಮೀಣ-ಬಿಜೆಪಿ ಅಭ್ಯರ್ಥಿ ಸಚಿವ ಬಿ. ಶ್ರೀರಾಮುಲು
ವಿರಾಜಪೇಟೆ ಬಿಜೆಪಿ ಅಭ್ಯರ್ಥಿ ಕೆ.ಜೆ.ಬೋಪಯ್ಯ
ಹೊನ್ನಾಳಿ ಬಿಜೆಪಿ ಅಭ್ಯರ್ಥಿ ಎಂ. ಪಿ. ರೇಣುಕಾಚಾರ್ಯ
ಹು-ಧಾ ಸೆಂಟ್ರಲ್‌ ಕಾಂಗ್ರೆಸ್‌ ಅಭ್ಯರ್ಥಿ ಜಗದೀಶ್‌ ಶೆಟ್ಟರ್‌
ರಾಮನಗರ ಜೆಡಿಎಸ್‌ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ
ಹಿರೇಕೆರೂರು ಬಿಜೆಪಿ ಅಭ್ಯರ್ಥಿ ಬಿ. ಸಿ.ಪಾಟೀಲ
ಹಾಸನ ಬಿಜೆಪಿ ಅಭ್ಯರ್ಥಿ ಪ್ರೀತಂಗೌಡ
ಹೊಸಕೋಟೆ-ಬಿಜೆಪಿ ಅಭ್ಯರ್ಥಿಯಾಗಿದ್ದ ಸಚಿವ ಎಂಟಿಬಿ ನಾಗರಾಜ
ಬಳ್ಳಾರಿ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಸೋಮಶೇಖರ ರೆಡ್ಡಿ,
ಮುಧೋದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ
ಬೀಳಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುರುಗೇಶ ನಿರಾಣಿ
ಗೆದ್ದ ಅಭ್ಯರ್ಥಿಗಳು
ಕನಕಪುರ-ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ
ಗಾಂಧಿನಗರ-ಕಾಂಗ್ರೆಸ್‌ ಅಭ್ಯರ್ಥಿ ದಿನೇಶ್‌ ಗುಂಡೂರಾವ್‌
ಸೊರಬ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ
ಶಾಂತಿನಗರ-ಕಾಂಗ್ರೆಸ್ ಅಭ್ಯರ್ಥಿ ಎನ್‌ ಎ ಹ್ಯಾರಿಸ್‌
ಮಂಗಳೂರು ಉಳ್ಳಾಲ-ಕಾಂಗ್ರೆಸ್‌ ಅಭ್ಯರ್ಥಿ ಯು. ಟಿ ಖಾದರ್
ನಾಗಮಂಗದ-ಕಾಂಗ್ರೆಸ್‌ ಅಭ್ಯರ್ಥಿ ಚೆಲುವರಾಯಸ್ವಾಮಿ
ಸರ್ವಜ್ಞನಗರ-ಕಾಂಗ್ರೆಸ್ ಅಭ್ಯರ್ಥಿ ಕೆ. ಜೆ. ಜಾರ್ಜ್‌
ಚಾಮರಾಜಪೇಟೆ ಕಾಂಗ್ರೆಸ್‌ ಅಭ್ಯರ್ಥಿ ಜಮೀರ್‌ ಅಹ್ಮದ್‌
ಧಾರವಾಡ-ಕಾಂಗ್ರೆಸ್ ಅಭ್ಯರ್ಥಿ ವಿನಯ್‌ ಕುಲಕರ್ಣಿ
ಶಿವಾಜಿನಗರ-ಕಾಂಗ್ರೆಸ್‌ ಅಭ್ಯರ್ಥಿ ರಿಜ್ವಾನ್‌ ಅರ್ಷದ್‌
ಚಾಮರಾಜನಗರ-ಕಾಂಗ್ರೆಸ್ ಅಭ್ಯರ್ಥಿ ಪುಟ್ಟರಂಗ ಶೆಟ್ಟಿ
ಕೂಡ್ಲಿಗಿ ಕಾಂಗ್ರೆಸ್‌ ಅಭ್ಯರ್ಥಿ ಎನ್‌. ಟಿ. ಶ್ರೀನಿವಾಸ
ಚೆಳ್ಳೆಕೆರೆ ಕಾಂಗ್ರೆಸ್‌ ಅಭ್ಯರ್ಥಿ ಟಿ. ರಘುಮೂರ್ತಿ
ಶಿವಮೊಗ್ಗ ನಗರ ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ
ಬಾಗೇಪಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಎಸ್‌ ಎನ್‌ ಸುಬ್ಬಾರೆಡ್ಡಿ
ದಾವಣಗೆರೆ ಉತ್ತರ ಕಾಂಗ್ರೆಸ್‌ ಅಭ್ಯರ್ಥಿ ಎಸ್‌ ಎಸ್‌ ಮಲ್ಲಿಕಾರ್ಜುನ್‌
ರೋಣ-ಕಾಂಗ್ರೆಸ್‌ ಅಭ್ಯರ್ಥಿ ಜಿ. ಎಸ್‌. ಪಾಟೀಲ
ಹುಬ್ಬಳ್ಳಿ-ಧಾರವಾಡ ಪೂರ್ವ-ಕಾಂಗ್ರೆಸ್‌ ಅಭ್ಯರ್ಥಿ ಅಬ್ಬಯ್ಯ
ಮದ್ದೂರು-ಕಾಂಗ್ರೆಸ್‌ ಅಭ್ಯರ್ಥಿ ಉದಯ್‌
ಬಳ್ಳಾರಿ ಗ್ರಾಮೀಣ-ಕಾಂಗ್ರೆಸ್‌ ಅಭ್ಯರ್ಥಿ ಬಿ ನಾಗೇಂದ್ರ
ಬೆಂಗಳೂರು ದಕ್ಷಿಣ-ಬಿಜೆಪಿ ಅಭ್ಯರ್ಥಿ ಎಂ ಕೃಷ್ಣಪ್ಪ
ವಿರಾಜಪೇಟೆ-ಕಾಂಗ್ರೆಸ್‌ ಅಭ್ಯರ್ಥಿ ಎ. ಎಸ್‌.ಪೊನ್ನಣ್ಣ
ಅಥಣಿ-ಕಾಂಗ್ರೆಸ್‌ ಅಭ್ಯರ್ಥಿ ಲಕ್ಷ್ಮಣ ಸವದಿ
ಯಲ್ಲಾಪುರ ಕ್ಷೇತ್ರ-ಬಿಜೆಪಿ ಅಭ್ಯರ್ಥಿ ಶಿವರಾಮ ಹೆಬ್ಬಾರ

ಪ್ರಮುಖ ಸುದ್ದಿ :-   ಮಾರ್ಚ್‌ 30ರಂದು ಪ್ರಥಮ ಪಿಯುಸಿ ಫಲಿತಾಂಶ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement