ಉಡುಪಿ ಜಿಲ್ಲೆಯಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಬಿಜೆಪಿಗೆ ಜಯ

ಉಡುಪಿ: ‌ಜಿಲ್ಲೆಯ ಹಾಲಿ ಐವರು ಬಿಜೆಪಿ ಶಾಸಕರ ಪೈಕಿ ನಾಲ್ವರು ಶಾಸಕರಿಗೆ ಟಿಕೆಟ್ ನಿರಾಕರಣೆ ಮಾಡಿ ಹೊಸ ಮುಖಗಳಿಗೆ ಮಣೆ ಹಾಕಿದರೂ ಜಿಲ್ಲೆಯ ಮತದಾರರು ಬಿಜೆಪಿಯ ಕೈ ಹಿಡಿದಿದ್ದಾರೆ. ಎಲ್ಲಾ ಐದು ಬಿಜೆಪಿ ಅಭ್ಯರ್ಥಿಗಳು ಗೆದ್ದು ಬೀಗಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ಕಾರ್ಕಳದಲ್ಲಿ ಸುನೀಲಕುಮಾರ ಅವರನ್ನು ಹೊರತು ಪಡಿಸಿ ಉಡುಪಿ, ಕಾಪು, ಕುಂದಾಪುರ ಮತ್ತು ಬೈಂದೂರು ಕ್ಷೇತ್ರದಲ್ಲಿ ಹೊಸಮುಖಗಳಿಗೆ ಬಿಜೆಪಿ ಮಣೆ ಹಾಕಿತ್ತು. ಅದಕ್ಕೆ ಮತದಾರರು ಜೈ ಅಂದಿದ್ದಾರೆ.
ಕಾಪು ಕ್ಷೇತ್ರದಲ್ಲಿ ಮಾಜಿ ಸಚಿವ ವಿನಯಕುಮಾಯ ಸೊರಕೆ ಅವರಿಗೆ ಮತ್ತೊಮ್ಮೆ ಸೋಲಾಗಿದೆ. ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಮೊದಲ ಪ್ರಯತ್ನದಲ್ಲೇ ಗೆಲುವು ಸಾಧಿಸಿದ್ದಾರೆ. ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಬಿಟ್ಟುಕೊಟ್ಟಿದ್ದ ಕುಂದಾಪುರ ಕ್ಷೇತ್ರದಲ್ಲಿ ಅವರ ಶಿಷ್ಯ ಕಿರಣಕುಮಾರ ಕೊಡ್ಗಿ ಅವರು ಗೆಲುವು ಸಾಧಿಸಿದ್ದಾರೆ. ಕಾಂಗ್ರಸ್ ನ ದಿನೇಶ್ ಹೆಗ್ಡೆ ಮೊಳಹಳ್ಳಿ ಅವರಿಗೆ ಸೋಲಾಗಿದೆ.
ಕಾರ್ಕಳದಲ್ಲಿ ಸಚಿವ, ಹಾಲಿ ಶಾಸಕ ಸುನೀಲಕುಮಾರ ಕಾಂಗ್ರೆಸ್ ನ ಮುನಿಯಾಲು ಉದಯ ಶೆಟ್ಟಿ ವಿರುದ್ಧ ಪ್ರಯಾಸದ ಗೆಲುವು ಕಂಡಿದ್ದಾರೆ. ಉಡುಪಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಪ್ರಸಾದ್ ರಾಜ್ ಕಾಂಚನ್ ವಿರುದ್ಧ ಯಶಪಾಲ ಸುವರ್ಣ ಗೆದ್ದಿದ್ದಾರೆ.
ಬೈಂದೂರು ಕ್ಷೇತ್ರದಲ್ಲಿಯೂ ಬಿಜೆಪಿ ಗೆಲುವಿನ ನಗೆ ಬೀರಿದೆ. ಹಾಲಿ ಶಾಸಕ ಸುಕುಮಾರ್ ಶೆಟ್ಟಿ ಅಸಮಾಧಾನದ ನಡುವೆಯೂ ಬಿಜೆಪಿಯ ಹೊಸ ಮುಖ ಗುರುರಾಜ ಶೆಟ್ಟಿ ಗಂಟಿಹೊಳಿ ಅವರು ಗೆಲುವು ಕಂಡಿದ್ದಾರೆ. ಕಾಂಗ್ರೆಸ್ಸಿನ ಗೋಪಾಲ ಪೂಜಾರಿಯವರ ಮತ್ತೊಂದು ಪ್ರಯತ್ನಕ್ಕೆ ಸೋಲಾಗಿದೆ.

ಪ್ರಮುಖ ಸುದ್ದಿ :-   ಸಂಸದ ಪ್ರಜ್ವಲ್ ರೇವಣ್ಣಗೆ ಎಸ್‍ಐಟಿ ಲುಕೌಟ್ ನೋಟಿಸ್ ಜಾರಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement