ಚಿತ್ರದುರ್ಗ ಜಿಲ್ಲೆಯಲ್ಲಿ ಕಾಂಗ್ರೆಸ್‌ ಜಯಭೇರಿ, ಒಂದಕ್ಕೆ ಬಿಜೆಪಿ ತೃಪ್ತಿ

ಚಿತ್ರದುರ್ಗ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು ಆರು ಕ್ಷೇತ್ರಗಳಲ್ಲಿ ಐದು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಸಾಧಿಸಿದರೆ ಒಂದು ಕ್ಷೇತ್ರದಲ್ಲಿ ಗೆದ್ದು ತೃಪ್ತಿಪಟ್ಟುಕೊಂಡಿದೆ.
ಜಿಲ್ಲೆಯ ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು, ಹೊಸದುರ್ಗ, ಮೊಳಕಾಲ್ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯ ಸಾಧಿಸಿದ್ದರೆ, ಹೊಳಲ್ಕೆರೆ ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಜಯಗಳಿಸಿದೆ..
ಚಿತ್ರದುರ್ಗ ಕ್ಷೇತ್ರದಲ್ಲಿ 99,804 ಮತಗಳನ್ನು ಪಡೆದು ಕೆ.ಸಿ.ವೀರೇಂದ್ರ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಹೊಸದುರ್ಗ ಗೋವಿಂದಪ್ಪ ಬಿ.ಜಿ .72,570 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಕೂಡ್ಲಿಗಿ ಕ್ಷೇತ್ರದಲ್ಲಿ ಬಿಜೆಪಿ ಶಾಸಕನಾಗಿದ್ದ ಎನ್‌.ವೈ.ಗೋಪಾಲಕೃಷ್ಣ ಅವರು ಪಕ್ಷಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿ, ಮೊಳಕಾಲ್ಮೂರು ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವಿನ ನಗೆ ಬೀರಿದ್ದಾರೆ. ಮೊಳಕಾಲ್ಮೂರಿನಲ್ಲಿ ಎನ್.ವೈ.ಗೋಪಾಲಕೃಷ್ಣ 1,00,860 ಮತಗಳನ್ನು ಪಡೆದು ಜಯಭೇರಿ ಬಾರಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಹಿರಿಯೂರು ಕ್ಷೇತ್ರದಲ್ಲಿ ಸೋಲನುಭವಿಸಿದ್ದ ಮಾಜಿ ಸಚಿವ ಡಿ.ಸುಧಾಕರ್ ಅವರು ಈ ಬಾರಿ ಗೆಲುವು ಕಂಡಿದ್ದಾರೆ. ಹಿರಿಯೂರು ಕ್ಷೇತ್ರದ ಡಿ.ಸುಧಾಕರ್‌ ಅವರು 61,945 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.
ಚಳ್ಳಕೆರೆ ಕ್ಷೇತ್ರದ ಪರಿಶಿಷ್ಟ ಪಂಗಡದ ಮೀಸಲು ಕ್ಷೇತ್ರದಲ್ಲಿ ಟಿ ರಘುಮೂರ್ತಿ ಅವರು ಹ್ಯಾಟ್ರಿಕ್ ಗೆಲುವು ಕಂಡಿದ್ದಾರೆ. ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಟಿ.ರಘುಮೂರ್ತಿ ಅವರು 67,952 ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿದ್ದಾರೆ. ಇನ್ನು ಹೊಳಲ್ಕೆರೆ ಒಂದು ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಅಭ್ಯರ್ಥಿ ಎಂ.ಚಂದ್ರಪ್ಪ ಅವರು 83,212 ಮತಗಳನ್ನು ಪಡೆದು ನಗೆ ಬೀರಿದ್ದಾರೆ. ಅವರು ಹೊಳಲ್ಕೆರೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮಾಜಿ ಸಚಿವ ಹೆಚ್‌.ಆಂಜನೇಯ ವಿರುದ್ಧ ಬಿಜೆಪಿ ಅಭ್ಯರ್ಥಿ ಎಂ.ಚಂದ್ರಪ್ಪ ಜಯ ಸಾಧಿಸಿದ್ದಾರೆ.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement