ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಮಲ ಮುದುಡಿದೆ. ಕೈ ಗೆಲುವು ಸಾಧಿಸಿದೆ. ಬಿಜೆಪಿ 9 ಜಿಲ್ಲೆಗಳಲ್ಲಿ ಶೂನ್ಯ ಸಂಪಾದನೆ ಮಾಡಿದರೆ 8 ಜಿಲ್ಲೆಯಲ್ಲಿ ತಲಾ ಒಂದು ಸ್ಥಾನದಲ್ಲಿ ಮಾತ್ರ ಗೆಲುವು ಸಾಧಿಸಿದೆ.
ಕೋಲಾರ, ರಾಮನಗರ, ಮಂಡ್ಯ, ಕೊಡಗು, ಬಳ್ಳಾರಿ, ಚಿಕ್ಕಮಗಳೂರು, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಯಲ್ಲಿ ಶೂನ್ಯ ಸಂಪಾದನೆ ಮಾಡಿದೆ. ರಾಜ್ಯದ 7 ಜಿಲ್ಲೆಗಳಲ್ಲಿ ತಲಾ 2 ಸ್ಥಾನವನ್ನು ಬಿಜೆಪಿ ಗಳಿಸಿದೆ. ಹಳೆ ಮೈಸೂರು ಭಾಗದ 61 ಕ್ಷೇತ್ರಗಳಲ್ಲಿ ಬಿಜೆಪಿ ಕೇವಲ 6 ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ.
ಚುನಾವಣೆಯಲ್ಲಿ ಬಿಜೆಪಿ ಗುಜರಾತ್ ಮಾಡಲ್ ರೀತಿ 75 ಮಂದಿ ಹೊಸಬರಿಗೆ ಟಿಕೆಟ್ ನೀಡಲಾಗಿತ್ತು. ಇವರಲ್ಲಿ 19 ಜನರು ಮಾತ್ರ ಆಯ್ಕೆಯಾಗಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷ 42 ಹೊಸಬರಿಗೆ ಟಿಕೆಟ್ ನೀಡಿದ್ದು, ಅದರಲ್ಲಿ 35 ಮಂದಿ ಗೆಲುವು ಸಾಧಿಸಿದ್ದಾರೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ 12 ಕ್ಯಾಬಿನೆಟ್ ಮಂತ್ರಿಗಳು ಗೆಲುವು ಸಾಧಿಸಿದರೆ, 12 ಸಚಿವರು ಸೋಲು ಕಂಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ