ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆ ಸಲ್ಲಿಕೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವು ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಲು ಸಿದ್ಧತೆ ನಡೆಸಿದೆ. ಬಿಜೆಪಿಯ ಸೋಲಿನ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆ ಸಲ್ಲಿಸಿದ್ದಾರೆ.
ಹಾವೇರಿಯ ಶಿಗ್ಗಾವಿಯಿಂದ ಬೆಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನೇರವಾಗಿ ರಾಜಭವನಕ್ಕೆ ತೆರಳಿ, ರಾಜ್ಯಪಾಲ ಥಾವರ್‌ ಚಂದ ಗೆಹ್ಲೋತ್‌ ಅವರಿಗೆ ರಾಜೀನಾಮೆ ಸಲ್ಲಿಸಿದರು. ಈ ವೇಳೆ ಭೈರತಿ ಬಸವರಾಜ ಹಾಗೂ ಸುರೇಶಕುಮಾರ ಇದ್ದರು.
ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ನಡೆದ ಚುನಾಣೆಯಲ್ಲಿ 223 ಕ್ಷೇತ್ರಗಳ ಫಲಿತಾಂಶ ಹೊರ ಬಿದ್ದಿದಿದೆ. ಕಾಂಗ್ರೆಸ್‌ 135 ಕ್ಷೇತ್ರಗಳಲ್ಲಿ ಜಯಗಳಿಸಿದೆ. ಬಿಜೆಪಿ 65 ಕ್ಷೇತ್ರಗಳಲ್ಲಿ ಜೆಡಿಎಸ್ 19 ಕ್ಷೇತ್ರಗಳಲ್ಲಿ ಪಕ್ಷೇತರರು ಎರಡು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಒಬ್ಬರು, ಸರ್ವೋದಯ ಪಕ್ಷದಿಂದ ಒಬ್ಬರು ಗೆಲುವು ಸಾಧಿಸಿದ್ದಾರೆ.
ನಾಳೆ ಸಂಜೆ 5.30ಕ್ಕೆ ಮಹತ್ವದ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ಯಾರು ಆಯ್ಕೆಯಾಗಲಿದ್ದಾರೆ ಎಂಬುದು ಗೊತ್ತಾಗಲಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement