ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್‌-ಬಿಜೆಪಿ ಸಮಬಲದ ಹೋರಾಟದಲ್ಲಿ ಗೆದ್ದವರು ಯಾರು..? ಸೋತವರು ಯಾರು..?

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಸಮಬಲದ ಗೆಲುವು ಸಾಧಿಸಿವೆ. ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಹಾಗೂ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ತಲಾ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೆ ಜೆಡಿಎಸ್‌ ಒಂದು ಕ್ಷೇತ್ರಗಳಲ್ಲಿ ಗೆಲುವು ಕಂಡಿದೆ.
ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಬಿಜೆಪಿಯ ಚೆನ್ನಬಸಪ್ಪ 95,399 ಮತಗಳನ್ನು ಪಡೆದು ಕಾಂಗ್ರೆಸ್ ಅಭ್ಯರ್ಥಿ ಹೆಚ್ ಸಿ ಯೋಗೀಶ್ (68,071 ಮತಗಳು) ವಿರುದ್ಧ ಭರ್ಜರಿ ಜಯಗಳಿಸಿದ್ದಾರೆ.
ಶಿಕಾರಿಪುರ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಪುತ್ರ ಬಿಜೆಪಿಯ ಬಿ.ವೈ. ವಿಜಯೇಂದ್ರ ಅವರು 81,015 ಮತಗಳನ್ನು ಪಡೆದು ಸ್ವತಂತ್ರ ಅಭ್ಯರ್ಥಿ ಎಸ್ ಪಿ ನಾಗರಾಜಗೌಡ (70,371 ಮತಗಳು ) ಅವರ ವಿರುದ್ಧ ಜಯಗಳಿಸಿದ್ದಾರೆ.
ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರು ಅವರು 88,179 ಮತಗಳನ್ನು ಪಡೆದು ಬಿಜೆಪಿಯ ಹರತಾಳು ಹಾಲಪ್ಪ (72,263 ಮತಗಳು ) ವಿರುದ್ಧ ಜಯಗಳಿಸಿದ್ದಾರೆ.
ಸೊರಬ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಎಸ್‌. ಬಂಗಾರಪ್ಪ ಮಕ್ಕಳ ಸಹೋದರರ ಸವಾಲಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಅವರು 98,232 ಮತಗಳನ್ನು ಪಡೆದು ತಮ್ಮ ಹಿರಿಯ ಸಹೋದರ ಬಿಜೆಪಿಯ ಎಸ್. ಕುಮಾರ ಬಂಗಾರಪ್ಪ (54,311 ಮತಗಳು)ವಿರುದ್ಧ ಭರ್ಜರಿ ಜಯ ಸಾಧಿಸಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದದಲ್ಲಿ ಜೆಡಿಎಸ್ ಅಭ್ಯರ್ಥಿ ಶಾರದಾ ಪೂರಿಯನಾಯ್ಕ್ 85,768 ಮತಗಳನ್ನು ಗಳಿಸಿ ಬಿಜೆಪಿಯ ಕೆ.ಪಿ. ಅಶೋಕ ನಾಯ್ಕ್ (70,610 ಮತಗಳು) ವಿರುದ್ಧ ಗೆಲುವು ಸಾಧಿಸಿದ್ದಾರೆ.
ಭದ್ರಾವತಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ ಸಂಗಮೇಶ್ ಅವರು 65,329 ಮತಗಳನ್ನು ಪಡೆದು ಜೆಡಿಎಸ್ ಅಭ್ಯರ್ಥಿ ಶಾರದ ಅಪ್ಪಾಜಿ (62,743) ವಿರುದ್ಧ ಪ್ರಯಾಸದ ಗೆಲುವು ಕಂಡಿದ್ದಾರೆ.
ತೀರ್ಥಹಳ್ಳಿ ಕ್ಷೇತ್ರದಲ್ಲಿ ರಾಜ್ಯ ಗೃಹ ಸಚಿವರಾಗಿದ್ದ ಬಿಜೆಪಿಯ ಅರಗ ಜ್ಞಾನೇಂದ್ರ ಅವರು 83,879 ಮತಗಳನ್ನು ಪಡೆದು ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ಕಿಮ್ಮನೆ ರತ್ನಾಕರ (71,791 ಮತಗಳು) ಗೆಲುವು ಕಂಡಿದ್ದಾರೆ.

ಪ್ರಮುಖ ಸುದ್ದಿ :-   ಸಂಸದ ಪ್ರಜ್ವಲ್ ರೇವಣ್ಣಗೆ ಎಸ್‍ಐಟಿ ಲುಕೌಟ್ ನೋಟಿಸ್ ಜಾರಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement