ʼಸಿಎಂʼ ಅಭ್ಯರ್ಥಿ ಆಯ್ಕೆ ವಿಚಾರ : ದಿಢೀರ್‌ ದೆಹಲಿಗೆ ಹೊರಟ ಖರ್ಗೆ

posted in: ರಾಜ್ಯ | 0

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಹುಮತದ ಗೆಲುವು ಸಾಧಿಸಿರುವ ಕಾಂಗ್ರೆಸ್‌ನಲ್ಲಿ ಈಗ ಮುಖ್ಯಮಂತ್ರಿ ಆಯ್ಕೆ ಮಾಡುವ ಕುರಿತು ಕಸರತ್ತು ಶುರುವಾಗಿದ್ದು, ಇಂದು, ಭಾನುವಾರ ಮಧ್ಯಾಹ್ನವೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಅವರು ದೆಹಲಿಗೆ ತೆರಳಲಿದ್ದಾರೆ.
ರಾಜ್ಯ ಕಾಂಗ್ರೆಸ್ಸಿನಲ್ಲಿ ಮುಖ್ಯಮಂತ್ರಿ ಆಯ್ಕೆ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ನಡುವೆ ಪೈಪೋಟಿ ಶುರುವಾಗಿದ್ದು, ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಜೊತೆಗೆ ಚರ್ಚಿಸಲು ಮಲ್ಲಿಕಾರ್ಜುನ ಖರ್ಗೆ ಇಂದೇ ದೆಹಲಿಗೆ ತೆರಳಲಿದ್ದಾರೆ ಎಂದು ಹೇಳಲಾಗಿದೆ.
ಈ ನಡುವೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಶಾಸಕರ ಜೊತೆಗೆ ರಹಸ್ಯ ಸಭೆ ನಡೆಸಿದ್ದಾರೆ ಎನ್ನಲಾಗಿದ್ದು, ಬಳಿಕ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಭೇಟಿ ನೀಡಿ ತನಗಿರುವ ಬೆಂಬಲ ಬಗ್ಗೆ ಹೇಳಿದ್ದಾರೆ ಎನ್ನಲಾಗಿದೆ.
ಮಲ್ಲಿಕಾರ್ಜುನ ಖರ್ಗೆ ಅವರು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಚರ್ಚೆ ನಡೆಸಿ ರಾಜ್ಯಕ್ಕೆ ವಾಪಸಾದ ನಂತರ ಮತ್ತೊಂದು ಸುತ್ತಿನ ಸಭೆ ನಡೆಸಿದ ನಂತರ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ ಎಂದು ಹೇಳಲಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಕ್ರೆಡಾಯ್ ರಾಜ್ಯಾಧ್ಯಕ್ಷರಾಗಿ ಹುಬ್ಬಳ್ಳಿ ಉದ್ಯಮಿ ಪ್ರದೀಪ ರಾಯ್ಕರ ಆಯ್ಕೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement