ಡಿಕೆ ಶಿವಕುಮಾರ, ಸಿದ್ದರಾಮಯ್ಯ ನಿವಾಸದ ಮುಂದೆ ಬೆಂಬಲಿಗರಿಂದ ಮುಂದಿನ ಮುಖ್ಯಮಂತ್ರಿ ಫ್ಲೆಕ್ಸ್ ಅಳವಡಿಕೆ

posted in: ರಾಜ್ಯ | 0

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆಯುತ್ತಿದ್ದಂತೆಯೇ ಮುಖ್ಯಮಂತ್ರಿ ಹುದ್ದೆಗಾಗಿ ಪೈಪೋಟಿ ಆರಂಭವಾಗಿದೆ. ಅದರಲ್ಲೂ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಹಾಗೂ ಕಾಂಗ್ರೆಸ್ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಿಗರಲ್ಲಿ ಚರ್ಚೆ ಜೋರಾಗಿ ಶುರುವಾಗಿದೆ. ಅವರವರ ಬೆಂಬಲಿಗರು ತಮ್ಮ ನಾಯಕರೇ ಮುಂದಿನ ಮುಖ್ಯಮಂತ್ರಿ ಎಂದು ಫ್ಲೆಕ್ಸ್‌ ಅಳವಡಿಸಿದ್ದಾರೆ.
ಸಿದ್ದರಾಮಯ್ಯ ಅಭಿಮಾನಿಗಳು ಬೆಂಗಳೂರಿನ ಅವರ ನಿವಾಸದ ಹೊರಗೆ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಬ ಪೋಸ್ಟರ್ ಹಾಕಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯೇ ನಡೆಯದೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ 2ನೇ ಬಾರಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಸಿದ್ದರಾಮಯ್ಯನವರಿಗೆ ಅಭಿನಂದನೆಗಳು ಎಂದು ಪೋಸ್ಟರ್ ಹಾಕಿದ್ದಾರೆ.
ಈ ವಿಚಾರದಲ್ಲಿ ಡಿ. ಕೆ. ಶಿವಕುಮಾರ ಅವರ ಅಭಿಮಾನಿಗಳೂ ಸಹ ಇದನ್ನೇ ಮಾಡಿದ್ದಾರೆ. ಬೆಂಗಳೂರಿನ ಡಿ. ಕೆ. ಶಿವಕುಮಾರ ನಿವಾಸದ ಎದುರಿಗೆ ಮುಂದಿನ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಎಂಬ ಪೋಸ್ಟರ್ ಹಾಕಿದ್ದಾರೆ. ಕಾಂಗ್ರೆಸ್ ಪಕ್ಷದ ಗೆಲುವಿಗೆ ಅಭಿನಂದನೆ ಸಲ್ಲಿಸಿರುವ ಕಾರ್ಯಕರ್ತರು, ಮುಂದಿನ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಎಂದು ಹೇಳುತ್ತಿದ್ದಾರೆ. ಮೇ 15 ರಂದು ಡಿ. ಕೆ. ಶಿವಕುಮಾರ ಾವರ ಜನ್ಮದಿನ, ಅದೇ ದಿನ ಡಿ. ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಅಭಿಮಾನಿಗಳು ಆಶಿಸಿದ್ದಾರೆ.
ಒಟ್ಟಿನಲ್ಲಿ ಬಹುಮತ ಗಳಿಸಿ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಮುಂದಾಗಿರುವ ಕಾಂಗ್ರೆಸ್ ಪಕ್ಷದಲ್ಲಿ ಇದೀಗ ಮುಖ್ಯಮಂತ್ರಿ ಪಟ್ಟದ ಪೈಪೋಟಿ ಜೋರಾಗಿದೆ. ಡಿ. ಕೆ. ಶಿವಕುಮಾರ, ಸಿದ್ದರಾಮಯ್ಯ ಪೈಕಿ ಯಾರು ಮುಖ್ಯಮಂತ್ರಿ ಆಗಲಿದ್ದಾರೆ..? ಅಥವಾ ಹೈಕಮಾಂಡ್‌ ಆಯ್ಕೆ ಯಾರು..? ಎಂಬಿತ್ಯಾದಿ ಚರ್ಚೆಗಳು ಆರಂಭವಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement