ಕರ್ನಾಟಕದ ಸಿಎಂ ಯಾರು..? : ಆಯ್ಕೆ ನಿರ್ಧಾರ ಖರ್ಗೆ ಹೆಗಲಿಗೆ, ಶಾಸಕಾಂಗ ಸಭೆಯಲ್ಲಿ ಒಂದು ಸಾಲಿನ ನಿರ್ಣಯ

posted in: ರಾಜ್ಯ | 0

ಬೆಂಗಳೂರು: ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಧಿಕಾರ ನೀಡುವ ಏಕ ಸಾಲಿನ ನಿರ್ಣಯವನ್ನು ಇಂದು ಭಾನುವಾರ ಸಂಜೆ ನಡೆದ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.
ಇಂದು ಭಾನುವಾರ ಸಂಜೆ ಪಕ್ಷದ ಶಾಸಕಾಂಗ ಸಭೆ ನಗರದ ಹೊಟೇಲ್‌ ಶಾಂಗ್ರಿ-ಲಾದಲ್ಲಿ ನಡೆಯಿತು. ಈ ಸಭೆಯಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬಿಡಲು ನಿರ್ಧರಿಸಲಾಯಿತು.ಈ ನಿರ್ಣಯವನ್ನು ಪಕ್ಷದ ಹೈಕಮಾಂಡಿಗೆ ಕಳುಹಿಸಲಿದ್ದು, ಅವರು ಮುಂದಿನ ಕರ್ನಾಟಕದ ಮುಖ್ಯಮಂತ್ರಿಯ ಹೆಸರನ್ನು ಘೋಷಿಸಲಿದ್ದಾರೆ. ಭಾನುವಾರ ಸಂಜೆ ನಡೆದ ಶಾಸಕಾಂಗ ಸಭೆಯಲ್ಲಿ ರಾಜ್ಯ ಎಲ್ಲಾ ಕಾಂಗ್ರೆಸ್‌ ಶಾಸಕರು ಭಾಗಿಯಾಗಿ ಈ ತೀರ್ಮಾನ ಕೈಗೊಂಡಿದ್ದಾರೆ. ಈ ಮೂಲಕ ಸಿಎಂ ಆಯ್ಕೆ ನಿರ್ಧಾರ ಇನ್ನು ಮಲ್ಲಿಕಾರ್ಜುನ ಖರ್ಗೆ ಅವರ ಹೆಗಲಿಗೆ ಬಿದ್ದಿದೆ. ಶೀಘ್ರದಲ್ಲಿಯೇ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ನಿರ್ಧಾರವನ್ನು ತಿಳಿಸಲಿದ್ದಾರೆ. ನಿರ್ಧಾರ ಸೋಮವಾರ ಅಥವಾ ಮಂಗಳವಾರ ಪ್ರಕಟವಾಗುವ ಸಾಧ್ಯತೆ ಇದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮುಖ್ಯಮಂತ್ರಿ ಹುದ್ದೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮಧ್ಯೆ ಪೈಪೋಟಿ ಇರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಆಯ್ಕೆಯನ್ನು ಎಐಸಿಸಿ (AICC) ಅಧ್ಯಕ್ಷರ ನಿರ್ಧಾರಕ್ಕೆ ಬಿಡಲು ಶಾಸಕಾಂಗ ಪಕ್ಷವು ಸರ್ವಾನುಮತದಿಂದ ನಿರ್ಧರಿಸಿದೆ. ಇಷ್ಟು ದಿನ ಒಗ್ಗಟ್ಟಿನಿಂದ ಕೆಲಸ ಮಾಡಿಕೊಂಡು ಬರಲಾಗಿದೆ. ಈಗ ಅಧಿಕಾರಕ್ಕಾಗಿ ಗೊಂದಲ ಮಾಡಿಕೊಳ್ಳುವುದು ಬೇಡ. ಶಾಸಕಾಂಗ ಪಕ್ಷದ ಸಭೆಯಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿದ ನಂತರ ಅದನ್ನು ಹೈಕಮಾಂಡಿಗೆ ಕಳುಹಿಸಿ ನಿರ್ಧಾರವನ್ನು ಹೈಕಮಾಂಡ್​ಗೆ ಬಿಡೋಣ ಎಂದು ವೀಕ್ಷಕರು ಹೇಳಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಒಂದು ಸಾಲಿನ ನಿರ್ಣಯ ಕೈಗೊಳ್ಳಲಾಯಿತು. ಇದಕ್ಕೂ ಮುನ್ನ ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ನಾಯಕ ಆಯ್ಕೆಗಾಗಿ ಎಐಸಿಸಿ ಮೂವರು ವೀಕ್ಷಕರನ್ನು ನೇಮಿಸಿ ಆದೇಶ ಹೊರಡಿಸಿತ್ತು. ವೀಕ್ಷಕರನ್ನಾಗಿ ಸುಶೀಲ​ ಕುಮಾರ ಶಿಂಧೆ, ಜಿತೇಂದ್ರ ಸಿಂಗ್​ ಹಾಗೂ ದೀಪಕ್ ಬಬಾರಿಯಾ ನೇಮಿಸಲಾಗಿತ್ತು. ಅವರು ಸಭೆಯಲ್ಲಿ ಭಾಗವಹಿಸಿದರು. ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆಗೆ ಸಂಬಂಧಿಸಿದ ಚರ್ಚೆ ನಡೆದಿದ್ದು, ಶಾಸಕರ ಅಭಿಪ್ರಾಯ ಸಂಗ್ರಹಿಸಲಾಯಿತು. ಅದನ್ನು ನಂತರ ಹೈಕಮಾಂಡಿಗೆ ಕಳುಹಿಸಿ ಮುಖ್ಯಮಂತ್ರಿ ಹುದ್ದೆ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಅಧಿಕಾರವನ್ನು ಹೈಕಮಾಂಡಿಗೆ ನೀಡಲಾಯಿತು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement