ಸಿಬಿಐ ಮುಖ್ಯಸ್ಥರ ಹುದ್ದೆಗೆ ಮೂವರ ಹೆಸರು ಶಾರ್ಟ್‌ಲಿಸ್ಟ್, ಕರ್ನಾಟಕದ ಡಿಜಿಪಿ ಮುಂಚೂಣಿಯಲ್ಲಿ : ಮೂಲಗಳು

ನವದೆಹಲಿ : ಪ್ರಧಾನ ಮಂತ್ರಿ, ಭಾರತದ ಮುಖ್ಯ ನ್ಯಾಯಮೂರ್ತಿ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಸಮಿತಿಯು ಕೇಂದ್ರೀಯ ತನಿಖಾ ದಳದ ಉನ್ನತ ಹುದ್ದೆಗೆ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಆಯ್ಕೆ ಮಾಡಿದೆ ಎಂದು ಮೂಲಗಳು ತಿಳಿಸಿವೆ. ಶನಿವಾರ ಸಂಜೆ ನಡೆದ ಉನ್ನತ ಮಟ್ಟದ ಸಮಿತಿ ಸಭೆಯ ನಂತರ ಹೆಸರುಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗಿದೆ.
ಪ್ರವೀಣ ಸೂದ್ (ಡಿಜಿಪಿ ಕರ್ನಾಟಕ), ಸುಧೀರ್ ಸಕ್ಸೇನಾ (ಡಿಜಿಪಿ ಮಧ್ಯಪ್ರದೇಶ) ಮತ್ತು ತಾಜ್ ಹಸನ್ ಈಗ ಸಿಬಿಐ ಮುಂದಿನ ನಿರ್ದೇಶಕರಾಗುವ ಲೆಕ್ಕಾಚಾರದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಿಬಿಐ ನಿರ್ದೇಶಕ ಸುಬೋದಕುಮಾರ ಜೈಸ್ವಾಲ್ ಅವರ ಎರಡು ವರ್ಷಗಳ ಅವಧಿ ಮೇ 25 ರಂದು ಕೊನೆಗೊಳ್ಳಲಿದೆ.
ಮೂಲಗಳ ಪ್ರಕಾರ, ಕರ್ನಾಟಕ ಕೇಡರ್‌ನ 1986-ಬ್ಯಾಚ್‌ನ ಐಪಿಎಸ್ ಅಧಿಕಾರಿ ಪ್ರವೀಣ ಸೂದ್ ಅವರು ಈ ಹುದ್ದೆಗೆ ಮುಂಚೂಣಿಯಲ್ಲಿದ್ದಾರೆ. ಪ್ರಧಾನ ಮಂತ್ರಿ, ಸುಪ್ರೀಂ ಕೋರ್ಟ್‌ ಮುಖ್ಯನ್ಯಾಯಮೂರ್ತಿ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಸಮಿತಿಯು ಎರಡು ವರ್ಷಗಳ ಅವಧಿಗೆ ಸಿಬಿಐ ನಿರ್ದೇಶಕರನ್ನು ಆಯ್ಕೆ ಮಾಡುತ್ತದೆ. ಅಧಿಕಾರಾವಧಿಯನ್ನು ಐದು ವರ್ಷಗಳವರೆಗೆ ವಿಸ್ತರಿಸಬಹುದು.
ಸಭೆಯಲ್ಲಿ, ಹೊಸ ಕೇಂದ್ರ ವಿಜಿಲೆನ್ಸ್ ಕಮಿಷನರ್ ಮತ್ತು ಸದಸ್ಯ ಲೋಕಪಾಲ ಆಗಿ ನೇಮಕಗೊಳ್ಳುವ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆಯೂ ಚರ್ಚಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಪ್ರಮುಖ ಸುದ್ದಿ :-   ರೈಲು ನಿಲ್ದಾಣದಲ್ಲಿ ವ್ಯಕ್ತಿಯ ಸಾವಿನ ರಹಸ್ಯ ಭೇದಿಸಿದ ರೈಲು ಪ್ರಯಾಣಿಕನ ಮೊಬೈಲ್‌ ಸೆಲ್ಫಿ...!

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement