ಡಿಕೆ ಶಿವಕುಮಾರ, ಸಿದ್ದರಾಮಯ್ಯ ನಿವಾಸದ ಮುಂದೆ ಬೆಂಬಲಿಗರಿಂದ ಮುಂದಿನ ಮುಖ್ಯಮಂತ್ರಿ ಫ್ಲೆಕ್ಸ್ ಅಳವಡಿಕೆ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆಯುತ್ತಿದ್ದಂತೆಯೇ ಮುಖ್ಯಮಂತ್ರಿ ಹುದ್ದೆಗಾಗಿ ಪೈಪೋಟಿ ಆರಂಭವಾಗಿದೆ. ಅದರಲ್ಲೂ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಹಾಗೂ ಕಾಂಗ್ರೆಸ್ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಿಗರಲ್ಲಿ ಚರ್ಚೆ ಜೋರಾಗಿ ಶುರುವಾಗಿದೆ. ಅವರವರ ಬೆಂಬಲಿಗರು ತಮ್ಮ ನಾಯಕರೇ ಮುಂದಿನ ಮುಖ್ಯಮಂತ್ರಿ ಎಂದು ಫ್ಲೆಕ್ಸ್‌ ಅಳವಡಿಸಿದ್ದಾರೆ. ಸಿದ್ದರಾಮಯ್ಯ ಅಭಿಮಾನಿಗಳು ಬೆಂಗಳೂರಿನ … Continued

ಅತ್ಯಂತ ಕಡಿಮೆ ಅಂತರದಲ್ಲಿ ಗೆದ್ದ ಅಭ್ಯರ್ಥಿಗಳು ಇವರು

ಬೆಂಗಳೂರು : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅತ್ಯಂತ ಕಡಿಮೆ ಅಂತರದಲ್ಲಿ ಸೋಲು ಕಂಡವರ ಸಂಖ್ಯೆ ಸಾಕಷ್ಟಿದೆ. ಬೆಂಗಳೂರಿನ ಜಯನಗರದಲ್ಲಿ ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಬಿಜೆಪಿ ವಿರುದ್ಧ ಕೇವಲ ೧೬ ಮತಗಳ ಅಂತರದಿಂದ ಸೋತಿದ್ದಾರೆ. ಹಲವು ಕ್ಷೇತ್ರಗಳಲ್ಲಿ ಕೊನೆಯವರೆಗೂ ನಡೆದ ಹಾವು ಏಣಿ ಆಟದಲ್ಲಿ ವಿಜಯದ ಅದೃಷ್ಟ ಲಕ್ಷ್ಮಿಯು ಅಂತಿಮವಾಗಿ ಒಬ್ಬರಿಗೆ ಒಲಿದಿದ್ದಾಳೆ. … Continued

ಜಯನಗರ ಮತ ಎಣಿಕೆ ಗೊಂದಲಕ್ಕೆ ತೆರೆ: ಕೇವಲ 16 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ರಾಮಮೂರ್ತಿ ಗೆಲುವು

ಬೆಂಗಳೂರು : ಜಯನಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಗೊಂದಲಕ್ಕೆ ಚುನಾವಣಾಧಿಕಾರಿಗಳು ಶನಿವಾರ ಮಧ್ಯರಾತ್ರಿ ತೆರೆ ಎಳೆದಿದ್ದು, ಬಿಜೆಪಿಯ ಸಿ.ಕೆ.ರಾಮಮೂರ್ತಿ ಅವರು ವಿಜಯಿ ಎಂದು ಘೋಷಣೆ ಮಾಡಿದ್ದಾರೆ. ಇದರಿಂದ ಬೇಸರಗೊಂಡ ಕಾಂಗ್ರೆಸ್‌ನ ಸೌಮ್ಯ ರೆಡ್ಡಿ ಅವರು ಕಣ್ಣೀರು ಹಾಕಿದ್ದಾರೆ. ಮತ ಎಣಿಕೆ ಗೊಂದಲದ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರು, ಮುಖಂಡರು ಎಸ್‌ಎಸ್‌ಎಂಆರ್‌ವಿ ಕಾಲೇಜಿನ ಮತ … Continued

50000 ಕ್ಕಿಂತ ಹೆಚ್ಚು ಮತಗಳ ಅಂತರದಲ್ಲಿ ಗೆದ್ದ ಅಭ್ಯರ್ಥಿಗಳು ಇವರು

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದು ಬಹುಮತ ಪಡೆದಿದೆ. ಆಡಳಿತಾರೂಢ ಬಿಜೆಪಿ 65 ಸ್ಥಾನ ಗಳಿಸಿ ಸೋಲನುಭವಿಸಿದರೆ ಜೆಡಿಎಸ್ 19 ಸ್ಥಾನಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. 50,000ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದ 10 ಸ್ಥಾನಗಳ ಪೈಕಿ 8 ಸ್ಥಾನಗಳಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಮತಗಳ ಅಂತರದಿಂದ ಗೆದ್ದಿದೆ. ಬಿಜೆಪಿ ಎರಡು ಸ್ಥಾನಗಳಲ್ಲಿ … Continued

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ಸಿಗೆ ಈಗ ಸಿಎಂ ಅಭ್ಯರ್ಥಿ ಆಯ್ಕೆ ಮಾಡುವುದೇ ಸದ್ಯದ ದೊಡ್ಡ ಸವಾಲು..

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ದಕ್ಷಿಣ ಭಾರತದ ತನ್ನ ಏಕೈಕ ಭದ್ರಕೋಟೆ ಕರ್ನಾಟಕವನ್ನು ಕಳೆದುಕೊಂಡಿದ್ದು, ರಾಜ್ಯದ 223 ಸ್ಥಾನಗಳಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದುಕೊಂಡಿದೆ. ಬಿಜೆಪಿ 65 ಮತ್ತು ಎಚ್‌ಡಿ ಕುಮಾರಸ್ವಾಮಿ ಅವರ ಜೆಡಿಎಸ್ 19 ಸ್ಥಾನಗಳನ್ನು ಗೆದ್ದಿದೆ.30 ವರ್ಷಗಳ ನಂತರ ಸ್ಥಾನಗಳು ಮತ್ತು ಮತಗಳ ಹಂಚಿಕೆಯಲ್ಲಿ ಕಾಂಗ್ರೆಸ್‌ ದಾಖಲೆ ಮಾಡಿದೆ. ಕರ್ನಾಟಕದ ಅಧಿಕಾರದ ಚುಕ್ಕಾಣಿ … Continued