ಆಂಬುಲೆನ್ಸಿಗೆ ಹೆಚ್ಚು ಹಣ ಪಾವತಿಸಲು ಸಾಧ್ಯವಾಗದ ಕಾರಣ ಮಗನ ಶವದೊಂದಿಗೆ ಬಸ್‌ನಲ್ಲಿ 200 ಕಿಮೀ ಪ್ರಯಾಣಿಸಿದ ವ್ಯಕ್ತಿ…!

ಆಂಬ್ಯುಲೆನ್ಸ್ ಚಾಲಕನ ಕೇಳಿದ 8,000 ರೂಪಾಯಿ ತನ್ನ ಬಳಿ ಇಲ್ಲದ ಕಾರಣ 200 ಕಿಲೋಮೀಟರ್ ದೂರದವರೆಗೆ ತನ್ನ ಐದು ತಿಂಗಳ ಮಗುವಿನ ಶವವನ್ನು ಚೀಲದಲ್ಲಿಟ್ಟುಕೊಂಡು ಸಾರ್ವಜನಿಕ ಬಸ್‌ನಲ್ಲಿ ಪ್ರಯಾಣಿಸಿರುವುದಾಗಿ ಪಶ್ಚಿಮ ಬಂಗಾಳದ ವ್ಯಕ್ತಿಯೊಬ್ಬರು ಭಾನುವಾರ ಹೇಳಿದ್ದಾರೆ. ಸಿಲಿಗುರಿಯಿಂದ ಕಲಿಯಾಗಂಜ್‌ನಲ್ಲಿರುವ ಮನೆಗೆ ಕರೆದುಕೊಂಡು ಹೋಗಿದ್ದಾಗಿ ಹೇಳಿದ್ದಾರೆ.
ಆರು ದಿನಗಳ ಕಾಲ ಸಿಲಿಗುರಿಯ ಉತ್ತರ ಬಂಗಾಳ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ನನ್ನ ಐದು ತಿಂಗಳ ಮಗ ಕಳೆದ ರಾತ್ರಿ ಮೃತಪಟ್ಟಿದ್ದ, ಈ ಸಮಯದಲ್ಲಿ ನಾನು 16,000 ರೂ. ಚಿಕಿತ್ಸೆಗೆ ವ್ಯಯಿಸಿದ್ದೆ. ನನ್ನ ಮಗುವನ್ನು ಕಲಿಯಗಂಜ್‌ಗೆ ಸಾಗಿಸಲು ಅಲ್ಲಿನ ಆಂಬ್ಯುಲೆನ್ಸ್ ಚಾಲಕನಿಗೆ ಕೇಳಿದ ನಂತರ 8,000 ರೂ. ಪಾವತಿಸಲು ನನ್ನ ಬಳಿ ಹಣವಿರಲಿಲ್ಲ” ಎಂದು ಅಸೀಮ್‌ ದೇಬ್‌ಶರ್ಮಾ ಸುದ್ದಿಗಾರರಿಗೆ ತಿಳಿಸಿದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೃತದೇಹವನ್ನು ಬ್ಯಾಗ್‌ನಲ್ಲಿ ಹಾಕಿಕೊಂಡು ಡಾರ್ಜಿಲಿಂಗ್ ಜಿಲ್ಲೆಯ ಸಿಲಿಗುರಿಯಿಂದ ಸುಮಾರು 200 ಕಿಮೀ ದೂರದಲ್ಲಿರುವ ಉತ್ತರ ದಿನಾಜ್‌ಪುರ ಜಿಲ್ಲೆಯ ಕಲಿಯಗಂಜ್‌ಗೆ ಯಾರಿಗೂ ತಿಳಿಸದೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದೆ. ಸಿಬ್ಬಂದಿ ಸಹ ಪ್ರಯಾಣಿಕರಿಗೆ ತಿಳಿದರೆ ತನ್ನನ್ನು ಕೆಳಗಿಳಿಸಬಹುದು ಎಂಬ ಭಯದಿಂದ ವಿಷಯವನ್ನು ಯಾರಿಗೂ ಹೇಳಲಿಲ್ಲ ಎಂದು ಅವರು ಹೇಳಿದ್ದಾರೆ.
102 ಆರೋಗ್ಯ ಯೋಜನೆಯಡಿ ಆಂಬ್ಯುಲೆನ್ಸ್ ಸೌಲಭ್ಯ ರೋಗಿಗಳಿಗೆ ಉಚಿತವಾಗಿದೆ, ಆದರೆ ಶವಗಳನ್ನು ಸಾಗಿಸಲು ಅಲ್ಲ ಎಂದು ಅವರು ಹೇಳಿದರು. ಈ ವರ್ಷದ ಜನವರಿಯಲ್ಲಿ ರಾಜ್ಯದ ಉತ್ತರ ಭಾಗದಲ್ಲಿರುವ ಜಲ್ಪೈಗುರಿ ಜಿಲ್ಲೆಯಲ್ಲಿ ಇದೇ ರೀತಿಯ ಘಟನೆ ಸಂಭವಿಸಿತ್ತು.

ಇಂದಿನ ಪ್ರಮುಖ ಸುದ್ದಿ :-   ಪ್ರಧಾನಿ ಮೋದಿ ಭೇಟಿ ಮಾಡಿದ ಚಾಟ್‌ಜಿಪಿಟಿ ಸೃಷ್ಟಿಕರ್ತ ಸ್ಯಾಮ್ ಆಲ್ಟ್‌ಮನ್ : ಭಾರತದಲ್ಲಿ ಕೃತಕಬುದ್ಧಿಮತ್ತೆ (AI) ಬಳಕೆಯ ಸಾಧಕ-ಬಾಧಕಗಳ ಬಗ್ಗೆ ಚರ್ಚೆ

ಆಂಬ್ಯುಲೆನ್ಸ್ ನಿರ್ವಾಹಕರು ಕೇಳಿದ ಹೆಚ್ಚಿನ ಮೊತ್ತವನ್ನು ಪಾವತಿಸಲು ಸಾಧ್ಯವಾಗದೆ, ಒಬ್ಬ ವ್ಯಕ್ತಿ, ತನ್ನ ತಾಯಿಯ ಶವವನ್ನು ತನ್ನ ಭುಜದ ಮೇಲೆ ಹೊತ್ತುಕೊಂಡು, ಸರ್ಕಾರಿ ಆಸ್ಪತ್ರೆಯಿಂದ ಸುಮಾರು 40 ಕಿಲೋಮೀಟರ್ ದೂರದಲ್ಲಿರುವ ಮನೆಯ ಕಡೆಗೆ ನಡೆಯಲು ಪ್ರಾರಂಭಿಸಿದ್ದ. ಆದರೆ, ಸ್ವಲ್ಪ ಸಮಯದ ನಂತರ ಸಮಾಜ ಸೇವಾ ಸಂಸ್ಥೆಯೊಂದು ಅವರಿಗೆ ವಾಹನವನ್ನು ಉಚಿತವಾಗಿ ಮನೆಗೆ ತಲುಪಿಸಿತು.
ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಬಿಜೆಪಿಯ ಸುವೇಂದು ಅಧಿಕಾರಿ ತೃಣಮೂಲ ಕಾಂಗ್ರೆಸ್ ಸರ್ಕಾರದ ‘ಸ್ವಾಸ್ಥ್ಯ ಸತಿ’ ಆರೋಗ್ಯ ವಿಮಾ ಯೋಜನೆಯ ಬಗ್ಗೆ ಪ್ರಶ್ನಿಸಿದರೆ, ಮಗುವಿನ ದುರದೃಷ್ಟಕರ ಸಾವಿನ ಬಗ್ಗೆ ಬಿಜೆಪಿ ರಾಜಕೀಯದಲ್ಲಿ ತೊಡಗಿದೆ ಎಂದು ತೃಣಮೂಲ ಕಾಂಗ್ರೆಸ್‌ ಆರೋಪಿಸಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement