ಎಸ್ ಎಸ್ ಎಲ್‌ ಸಿ ಪೂರಕ ಪರೀಕ್ಷೆ ನೋಂದಣಿಗೆ ಕೊನೆಯ ದಿನಾಂಕ ವಿಸ್ತರಣೆ

ಬೆಂಗಳೂರು: ಜೂನ್‌ನಲ್ಲಿ ನಡೆಯಲಿರುವ ಎಸ್ಎಸ್ಎಲ್‌ಸಿ ಪೂರಕ ಪರೀಕ್ಷೆಗೆ ನೋಂದಾಯಿಸಲು ಹಾಗೂ ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆಯಲು ಕೊನೆಯ ದಿನಾಂಕವನ್ನು ಮೇ 18ರ ವರೆಗೆ ವಿಸ್ತರಿಸಲಾಗಿದೆ.
2023ನೇ ಜೂನ್ ನಲ್ಲಿ ನಡೆಯುವ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಗೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನರಹಿತ ಶಾಲೆಗಳಿಂದ ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳು, ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳ ಮಾಹಿತಿಯನ್ನು ನೋಂದಾಯಿಸಲು ಮೇ 15ರವರೆಗೆ ಅವಕಾಶ ನೀಡಲಾಗಿತ್ತು. ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆಯಲು ಮೇ 14ರ ವರೆಗೆ ಸಮಯ ನಿಗದಿಗೊಳಿಸಲಾಗಿತ್ತು. ಈ ಅವಧಿಯನ್ನು ಈಗ ವಿಸ್ತರಿಸಲಾಗಿದೆ.
ಮಂಡಳಿಯ ಜಾಲತಾಣದ ಶಾಲಾ ಲಾಗಿನ್ ಮೂಲಕ ವಿದ್ಯಾರ್ಥಿಗಳ ಮಾಹಿತಿಯನ್ನು ಅಪ್ ಲೋಡ್ ಮಾಡಲು ನಿಗದಿಪಡಿಸಿದ ಅಂತಿಮ ದಿನಾಂಕವನ್ನು ಮೇ 18ರ ವರೆಗೆ ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕದ ಚಲನ್ ಮುದ್ರಿಸಿಕೊಳ್ಳಲು ಮೇ 19ರ ವರೆಗೆ ವಿಸ್ತರಿಸಲಾಗಿದೆ.
ಚಲನ್ ಮುದ್ರಿಸಿಕೊಂಡು ಬ್ಯಾಂಕ್ ಗೆ ಜಮೆ ಮಾಡಲು ನಿಗದಿಪಡಿಸಿದ ದಿನಾಂಕವನ್ನು ಮೇ 20ರ ವರೆಗೆ ಹಾಗೂ ದಾಖಲೆಗಳನ್ನು ಮಂಡಳಿಗೆ ಸಲ್ಲಿಸಲು ಮೇ 25ರ ವರೆಗೆ ದಿನಾಂಕ ವಿಸ್ತರಿಸಲಾಗಿದೆ. ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಯನ್ನು ಪಡೆಯಲು ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ಮೇ 18 ಆಗಿದೆ.

ಪ್ರಮುಖ ಸುದ್ದಿ :-   ಜುಲೈ 15ರಿಂದ ಮುಂಬೈ- ಹುಬ್ಬಳ್ಳಿ- ಮುಂಬೈ ಇಂಡಿಗೋ ವಿಮಾನ ಸೇವೆ ಪುನಾರಂಭ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement