ಕರ್ನಾಟಕ ಸಿಎಂ ಸ್ಥಾನಕ್ಕೆ ಪೈಪೋಟಿ ಜೋರು : ಇಂದು ಡಿಕೆ ಶಿವಕುಮಾರ, ಸಿದ್ದರಾಮಯ್ಯ ದೆಹಲಿಗೆ

posted in: ರಾಜ್ಯ | 0

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಯ ಮುಖ್ಯಸ್ಥ ಡಿ.ಕೆ. ಶಿವಕುಮಾರ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಗೆ ತೆರಳಲಿದ್ದಾರೆ ಎಂದು ವರದಿಯಾಗಿದೆ. ರಾಜ್ಯದ ವಿದಾನಸಭೆ ಚುನಾವಣೆಯಲ್ಲಿ ಗಾಂಗ್ರೆಸ್‌ ಬಹುಮತದ ಗೆಲುವು ದಾಖಲಿಸಿದ ನಂತರ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಕಾಂಗ್ರೆಸ್ ಈಗ ಕಸರತ್ತು ನಡೆಸುತ್ತಿದೆ. ಮುಖ್ಯಮಂತ್ರಿ ಆಕಾಂಕ್ಷಿಗಳಾದ ಶಿವಕುಮಾರ ಮತ್ತು ಸಿದ್ದರಾಮಯ್ಯ ಅವರು ಇಂದು ದೆಹಲಿಯಲ್ಲಿ ಪಕ್ಷದ ಹೈಕಮಾಂಡ್‌ ಭೇಟಿ ಆಗುವ ನಿರೀಕ್ಷೆ ಇರುವುದರಿಂದ ಕರ್ನಾಟಕದ ಮುಖ್ಯಮಂತ್ರಿ ಹುದ್ದೆಗಾಗಿ ನಡೆಯುತ್ತಿರುವ ಲಾಬಿ ದೆಹಲಿಗೆ ಸ್ಥಳಾಂತರಗೊಳ್ಳಲಿದೆ.
ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ, ಕೆ.ಸಿ. ವೇಣುಗೋಪಾಲ ಮತ್ತು ಮುಖ್ಯಮಂತ್ರಿ ನೇಮಕ ಪ್ರಕ್ರಿಯೆಯ ಮೇಲ್ವಿಚಾರಣೆಗೆ ಪಕ್ಷವು ನೇಮಿಸಿದ ಮೂವರು ವೀಕ್ಷಕರು ಕೂಡ ಇಂದು ದೆಹಲಿಗೆ ತೆರಳಲಿದ್ದಾರೆ. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಸುಶೀಲಕುಮಾರ ಶಿಂಧೆ, ಮಾಜಿ ಪ್ರಧಾನ ಕಾರ್ಯದರ್ಶಿ ದೀಪಕ್ ಬವಾರಿಯಾ ಮತ್ತು ಪ್ರಧಾನ ಕಾರ್ಯದರ್ಶಿ ಭನ್ವರ್ ಜಿತೇಂದ್ರ ಸಿಂಗ್ ಅವರನ್ನು ಪಕ್ಷ ಕರ್ನಾಟಕದಲ್ಲಿ ವೀಕ್ಷಕರನ್ನಾಗಿ ಮಾಡಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಕರ್ನಾಟಕದ ಮುಖ್ಯಮಂತ್ರಿ ಸ್ಥಾನದ ಪೈಪೋಟಿ ಜೋರಾಗಿದ್ದು, ಒಕ್ಕಲಿಗ ಸಮುದಾಯ ಡಿ.ಕೆ.ಶಿವಕುಮಾರ ಅವರನ್ನು ಆಯ್ಕೆ ಮಾಡಲು ಒತ್ತಾಯ ಮಾಡಿದೆ. ಲಿಂಗಾಯತ ನಂತರ ಪ್ರಭಾವಿ ಮತ್ತು ಎರಡನೇ ಅತ್ಯಂತ ಪ್ರಬಲ ಸಮುದಾಯವಾಗಿದೆ.
ಆದರೆ ರಾಜ್ಯದ ಒಟ್ಟು 5. 3 ಕೋಟಿ ಮತದಾರರ ಪೈಕಿ ಸುಮಾರು ಶೇ.17 ರಷ್ಟು ಪಾರಂಪರಿಕ ಬಿಜೆಪಿ ಬೆಂಬಲಿಗರಾಗಿದ್ದ ಲಿಂಗಾಯತ ಸಮುದಾಯದ ಬೆಂಬಲ ಹೆಚ್ಚುತ್ತಿರುವುದು ಶಹಿವಕುಮಾರಗೆ ಅಚ್ಚರಿ ಮೂಡಿಸಿದೆ.
ಭಾನುವಾರ ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸಭೆ ಸೇರಿದ ಕಾಂಗ್ರೆಸ್ ಶಾಸಕಾಂಗ ಪಕ್ಷವು (ಸಿಎಲ್‌ಪಿ) ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಎಂ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರೆಂಬುದನ್ನು ಆಯ್ಕೆ ಮಾಡಲು ಸರ್ವಾನುಮತದ ನಿರ್ಣಯವನ್ನು ಅಂಗೀಕರಿಸಿತು. .
ಡಿಕೆ ಶಿವಕುಮಾರ ಮತ್ತು ಸಿದ್ದರಾಮಯ್ಯ ಅವರ ಬೆಂಬಲಿಗರು ಸಭೆ ನಡೆದ ಬೆಂಗಳೂರಿನ ಹೋಟೆಲ್ ಹೊರಗೆ ಘೋಷಣೆಗಳನ್ನು ಕೂಗಿದರು.

ಇಂದಿನ ಪ್ರಮುಖ ಸುದ್ದಿ :-   ಇಂದಿನಿಂದ ಶಾಲೆಗಳು ಪುನರಾರಂಭ: ಮೇ 31ರಿಂದ ತರಗತಿ ಆರಂಭ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement