ಬಜರಂಗದಳ ವಿರುದ್ಧದ ಹೇಳಿಕೆಗೆ 100 ಕೋಟಿ ಮಾನನಷ್ಟ ಮೊಕದ್ದಮೆ: ಕಾಂಗ್ರೆಸ್ ಅಧ್ಯಕ್ಷ ಖರ್ಗೆಗೆ ಕೋರ್ಟ್ ಸಮನ್ಸ್

₹100 ಕೋಟಿ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜಿಲ್ಲಾ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಇತ್ತೀಚೆಗಷ್ಟೇ ನಡೆದ ಕರ್ನಾಟಕ ಚುನಾವಣೆಯ ಸಂದರ್ಭದಲ್ಲಿ ಬಜರಂಗದಳದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಖರ್ಗೆ ವಿರುದ್ಧ ಹಿಂದೂ ಸುರಕ್ಷಾ ಪರಿಷತ್ ಬಜರಂಗದಳ ಹಿಂದ್ ಸಂಸ್ಥಾಪಕ ಸಂಗ್ರೂರ್ ಮೂಲದ ಹಿತೇಶ ಭಾರದ್ವಾಜ್ ಅವರು ಸ್ಥಳೀಯ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಸಿವಿಲ್ ನ್ಯಾಯಾಧೀಶರ ನ್ಯಾಯಾಲಯ (ಹಿರಿಯ ವಿಭಾಗ)ದ ರಮಣದೀಪ್ ಕೌರ್ ಜುಲೈ 10 ರಂದು ಖರ್ಗೆ ಅವರಿಗೆ ಸಮನ್ಸ್ ನೀಡಿದ್ದಾರೆ.
ಕಾಂಗ್ರೆಸ್ ಬಜರಂಗದಳವನ್ನು ದೇಶವಿರೋಧಿ ಸಂಘಟನೆಗಳೊಂದಿಗೆ ಹೋಲಿಸಿದೆ ಮತ್ತು ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ನಂತರ ಬಜರಂಗದಳವನ್ನು ನಿಷೇಧಿಸುವುದಾಗಿ ಭರವಸೆ ನೀಡಿದೆ ಎಂದು ಹಿತೇಶ ಹೇಳಿದ್ದಾರೆ. ಪ್ರಣಾಳಿಕೆಯ ಪುಟ ಸಂಖ್ಯೆ 10 ರಲ್ಲಿ ಕಾಂಗ್ರೆಸ್ ಬಜರಂಗದಳವನ್ನು ದೇಶವಿರೋಧಿ ಸಂಘಟನೆಗಳೊಂದಿಗೆ ಹೋಲಿಸಿದೆ ಮತ್ತು ಚುನಾವಣೆಯಲ್ಲಿ ಗೆದ್ದರೆ ಅದನ್ನು ಕರ್ನಾಟಕದಲ್ಲಿ ನಿಷೇಧಿಸುವುದಾಗಿ ಭರವಸೆ ನೀಡಿರುವುದನ್ನು ಕಂಡು ನಾನು ಗುರುವಾರ ನ್ಯಾಯಾಲಯದ ಮೊರೆ ಹೋಗಿದ್ದೇನೆ” ಎಂದು ಭಾರದ್ವಾಜ್ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಕೆಲ ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಹೃದಯಾಘಾತದಿಂದ ಸಾವು

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement