ಸಿಎಂ ಹುದ್ದೆಗೆ ಶಿವಕುಮಾರ ಬಿಗಿಪಟ್ಟು : ಆಯ್ಕೆಯೇ ಈಗ ಕಾಂಗ್ರೆಸ್ಸಿಗೆ ಕಗ್ಗಂಟು…!

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿದ್ದರೂ ಕಾಂಗ್ರೆಸ್ಸಿಗೆ ಈಗ ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ನಾಡುವುದೇ ಭಾರೀ ಸವಾಲಾಗಿ ಪರಿಣಮಿಸಿದೆ. ಮುಖ್ಯಮಂತ್ರಿ ಹುದ್ದೆಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಬ್ಬರು ಪಟ್ಟು ಹಿಡಿದಿದ್ದರಿಂದ ಹೈಕಮಾಂಡ್ ಅಡಕತ್ತರಿಯಲ್ಲಿ ಸಿಲುಕಿದೆ. ರೆ.
ಮುಖ್ಯಮಂತ್ರಿ ಸ್ಥಾನ ತನಗೆ ನೀಡಲೇಬೇಕು ಎಂದು ಶಿವಕುಮಾರ ಪಟ್ಟು ಹಿಡಿದಿರುವುದು ಹಾಗೂ ಅದನ್ನು ಬಿಟ್ಟುಕೊಡಲು ಸಿದ್ದರಾಮಯ್ಯ ಸಿದ್ಧವಾಗದೇ ಇರುವುದು ಹೈಕಮಾಂಡ್‌ಗೆ ತಲೆನೋವು ತಂದಿದೆ.
ಇಬ್ಬರ ನಡುವೆ ಅಧಿಕಾರ ಹಂಚಿಕೆ ಸೂತ್ರವನ್ನು ಹೈಕಮಾಂಡ್‌ ಪ್ರಸ್ತಾಪಿಸಿದೆ ಎನ್ನಲಾಗಿದ್ದು, ಆದರೆ, ಅಧಿಕಾರ ಹಂಚಿಕೆ ಸೂತ್ರ ಒಪ್ಪಲು ಡಿ.ಕೆ ಶಿವಕುಮಾರ ಸಿದ್ಧರಿಲ್ಲ. ನನಗೆ ಕೊಟ್ಟರೆ ಮುಖ್ಯಮಂತ್ರಿ ಸ್ಥಾನ ಕೊಡಿ, ಇಲ್ಲದಿದ್ದರೆ ಯಾವುದೂ ಬೇಡ ಎಂದು ಹೇಳಿದ್ದಾರೆ ಎನ್ನಲಾಗಿದೆ.. ಛತ್ತೀಸ್‌ಗಢ ಹಾಗೂ ರಾಜಸ್ಥಾನದ ಉದಾಹರಣೆಗಳನ್ನು ಡಿಕೆ ಶಿವಕುಮಾರ ನೀಡಿದ್ದು, ಅಲ್ಲಿ ಉಪಮುಖ್ಯಮಂತ್ರಿ ಹುದ್ದೆಗಳನ್ನು ನೀಡಿಲ್ಲ. ಅದನ್ನೇ ಕರ್ನಾಟಕದಲ್ಲಿಯೂ ಮಾಡಿ ಎಂದು ಹೇಳುತ್ತಿದ್ದಾರೆ ಎನ್ನಲಾಗಿದೆ.
ಈ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಬೆಂಗಳೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿ, ಇಂದು ನನ್ನ ಜನ್ಮದಿನ, ಗುರುಗಳನ್ನು ಭೇಟಿ ಮಾಡಬೇಕು. ನನ್ನ ಖಾಸಗಿ ಕಾರ್ಯಕ್ರಮ ಮುಗಿಸಿ ದೆಹಲಿಗೆ ಹೋಗುತ್ತೇನೆ. ನಾನು ಯಾರ ಸಂಖ್ಯಾಬಲದ ಬಗ್ಗೆಯೂ ಮಾತನಾಡಲು ಹೋಗುವುದಿಲ್ಲ. ಕಾಂಗ್ರೆಸ್ ಪಕ್ಷ 135 ಸ್ಥಾನಗಳನ್ನು ಹೊಂದಿದೆ. ನನ್ನ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದಿದೆ ಎಂದು ಹೇಳಿದ್ದಾರೆ.
ನಿನ್ನೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಒಂದು ನಿರ್ಣಯ ಅಂಗೀಕರಿಸಿದ್ದೇವೆ. ಕೆಪಿಸಿಸಿ ಅಧ್ಯಕ್ಷನಾದ ನನಗೆ ಸೋನಿಯಾ ಗಾಂಧಿ ಭರವಸೆ ನೀಡಿದ್ದಾರೆ. ನಾನೊಬ್ಬ ಏಕಾಂಗಿ, ಏಕಾಂಗಿಯಾಗಿಯೋ ಹೋರಾಟ ಮಾಡಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪಕ್ಷ ಅಧಿಕಾರಕ್ಕೆ ತರುತ್ತೇನೆ ಎಂದು‌ ಮಾತುಕೊಟ್ಟಿದ್ದೆ‌. ಯಾರ ಕ್ಲೇಮ್ ಬಗ್ಗೆಯೂ ಮಾತಾಡಲ್ಲ, ನಾನು ವಿಶ್ವಾಸದಲ್ಲಿ ನಂಬಿಕೆಯಿಟ್ಟವನು. ಹಿಂದಿನ ಐದು ವರ್ಷಗಳಲ್ಲಿ ಏನಾಗಿದೆ ಎಂದು ಹೇಳುವುದಿಲ್ಲ. ಮುಂದಿನ ದಿನಗಳಲ್ಲಿ ಇದರ ಬಗ್ಗೆ ಹೇಳುತ್ತೇನೆ. 15 ಜನ ಶಾಸಕರು ಪಕ್ಷ ಬಿಟ್ಟು ಹೋದಾಗಲೂ ಹೆದರದೆ ಧೈರ್ಯದಿಂದ ಪಕ್ಷ ಸಂಘಟನೆ ಮಾಡಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯ ರಾಜಕಾರಣದ ಬಗ್ಗೆ ಸಂಪೂರ್ಣ ಮಾಹಿತಿ ಇದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರ ಬಗ್ಗೆ ವಿಶ್ವಾಸ ಇದೆ. ಈ ವಿಚಾರವನ್ನು ಅವರಿಗೆ ಬಿಡುತ್ತೇನೆ ಎಂದು ಡಿಕೆ ಶಿವಕುಮಾರ ಮಾರ್ಮಿಕವಾಗಿ ಹೇಳಿದ್ದಾರೆ. ಹೇಳಿದ್ದಾರೆ.
ಭಾನುವಾರ ಕಾಂಗ್ರೆಸ್‌ ಶಾಸಕಾಂಗ ಸಭೆ ನಡೆದು ಶಾಸಕರ ಅಭಿಪ್ರಾಯವನ್ನು ಎಐಸಿಸಿ ವೀಕ್ಷಕರು ಪಡೆದಿದ್ದಾರೆ. ಸೋಮವಾರ ಬೆಳಗ್ಗೆ ದಿಲ್ಲಿಗೆ ತೆರಳಿರುವ ವೀಕ್ಷಕರು ಶಾಸಕರ ಅಭಿಪ್ರಾಯವನ್ನು ಹೈಕಮಾಂಡ್‌ ಮುಂದೆ ಒಪ್ಪಿಸಲಿದ್ದಾರೆ. ಈಗಾಗಲೇ ವರಿಷ್ಠರನ್ನು ಭೇಟಿಯಾಗಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರಕೂಡ ಸಂಜೆ ಹೊರಡುತ್ತಾರೆ ಎನ್ನಲಾಗಿದೆ.
ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ವರಿಷ್ಠ ನಾಯಕರಾದ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಹುಲ್‌ ಗಾಂಧಿ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿ ಆಯ್ಕೆಯ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಅಂತಿಮವಾಗಿ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕದ ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಿದ್ದಾರೆ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಚುನಾವಣೆ ವೇಳೆಯೇ ಬಿಜೆಪಿಗೆ ಗುಡ್‌ಬೈ ಹೇಳಿದ ಸಂಸದ ಕರಡಿ ಸಂಗಣ್ಣ : ಕಾಂಗ್ರೆಸ್‌ ಸೇರ್ಪಡೆ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement