ಅಕ್ರಮ ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ 7 ಮಂದಿ ಸಾವು

ಕೋಲ್ಕತ್ತಾ : ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರ ಜಿಲ್ಲೆಯಲ್ಲಿ ಮಂಗಳವಾರ ಅನಧಿಕೃತ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೂರ್ವ ಮಿಡ್ನಾಪುರದ ಎಗ್ರಾದಲ್ಲಿರುವ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಸ್ಫೋಟದ ನಂತರ ಸ್ಥಳದಲ್ಲಿ ಬೂದು ಹೊಗೆ ಕಾಣಿಸಿಕೊಂಡಿದೆ.
ಸ್ಫೋಟದಿಂದ ಗಾಯಗೊಂಡವರಿಗೆ ಸಹಾಯ ಮಾಡಲು ಸ್ಥಳೀಯರು ಧಾವಿಸಿದರು. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ, ಕಳೆದ ತಿಂಗಳು ಕಾರ್ಖಾನೆಯ ಮೇಲೆ ದಾಳಿ ನಡೆಸಿ ಅದರ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಕಾರ್ಯಾಚರಣೆ ಹೊರತಾಗಿಯೂ, ಘಟಕದಲ್ಲಿ ಪಟಾಕಿ ತಯಾರಿಕೆಯನ್ನು ಮುಂದುವರೆಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಏಳು ಮಂದಿ ಪ್ರಾಣ ಕಳೆದುಕೊಂಡ ಸ್ಫೋಟದ ಪ್ರಕರಣವನ್ನು ಬಂಗಾಳ ಸಿಐಡಿ ವಹಿಸಿಕೊಂಡಿದೆ. ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರ 2.5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.
ಅನಧಿಕೃತ ಕಾರ್ಖಾನೆಯ ಮಾಲೀಕನನ್ನು ಈ ಹಿಂದೆಯೇ ಬಂಧಿಸಲಾಗಿತ್ತು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಜಾಮೀನು ಸಿಕ್ಕ ನಂತರ ಪುನಃ ಅಕ್ರಮವಾಗಿ ಕಾರ್ಖಾನೆಯನ್ನು ಪುನರಾರಂಭಿಸಿದ್ದ ಎಂದು ಹೇಳಿದ್ದಾರೆ.
ಎಗ್ರಾದಲ್ಲಿ ಸ್ಫೋಟ ಸಂಭವಿಸಿದೆ. ಈ ಪ್ರದೇಶ ಒಡಿಶಾ ಗಡಿಗೆ ಸಮೀಪದಲ್ಲಿದೆ. ಕಾರ್ಖಾನೆಯ ಮಾಲೀಕನನ್ನು ಈ ಹಿಂದೆ ಬಂಧಿಸಲಾಗಿತ್ತು. ಅವರ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿತ್ತು. ಆತನಿಗೆ ಜಾಮೀನು ಸಿಕ್ಕಿತು. ಅವನು ಮತ್ತೆ ಅಕ್ರಮವಾಗಿ ತನ್ನ ಪಟಾಕಿ ತಯಾರಿಕೆ ಪ್ರಾರಂಭಿಸಿದ್ದ. ಮಾಲೀಕ ಒಡಿಶಾಕ್ಕೆ ಪರಾರಿಯಾಗಿದ್ದಾನೆ ಎಂದು ಮಮತಾ ಬ್ಯಾನರ್ಜಿ ಹೇಳಿದರು.

ಪ್ರಮುಖ ಸುದ್ದಿ :-   ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿದ 35 ವರ್ಷಗಳಿಂದ ಪಕ್ಷದಲ್ಲಿದ್ದ ಪ್ರಿಯಾಂಕಾ ಗಾಂಧಿ ಆಪ್ತ ತಜೀಂದರ್ ಸಿಂಗ್ ಬಿಟ್ಟು...!

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement