ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕಾಂಗ್ರೆಸ್ ಹಿರಿಯ ನಾಯಕ ರಮಾನಾಥ ರೈ

ಮಂಗಳೂರು : ಚುನಾವಣಾ ರಾಜಕೀಯದಿಂದ ನಿವೃತ್ತಗೊಳ್ಳುವುದಾಗಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ ರಮಾನಾಥ ರೈ ಪ್ರಕಟಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ರಾಜಕೀಯದಲ್ಲಿ ಸಕ್ರಿಯವಾಗಿರುತ್ತೇನೆ. ಆದರೆ ಇನ್ನು ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ಮಂಗಳೂರು ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಇಂದು, ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ಪ್ರಕಟಿಸಿದ್ದಾರೆ.
ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭೂತಪೂರ್ವ ಗೆಲುವಿಗೆ ಶ್ರಮಿಸಿದ ರಾಜ್ಯದ ಜನತೆಗೆ ಹಾಗೂ ನನ್ನ ಕ್ಷೇತ್ರದಲ್ಲಿ ಕಾಂಗ್ರೆಸ್ಸಿಗೆ ಮತ ಚಲಾಯಿಸಿದ ಮತದಾರರಿಗೆ ರಮಾನಾಥ ರೈ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದ್ದಾರೆ. ಬಂಟ್ವಾಳದಲ್ಲಿ ಕಳೆದ ಬಾರಿಗಿಂತ ಈ ಬಾರಿ ನನಗೆ ಹೆಚ್ಚು ಮತಗಳು ಬಿದ್ದಿವೆ. ಆದರೂ ಸೋಲಾಗಿದೆ. ಈ ಬಗ್ಗೆ ಅವಲೋಕನ ನಡೆಸುತ್ತೇವೆ ಎಂದು ಅವರು ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ಸಿಗೆ ಹಿನ್ನಡೆಯಾಗಿದ್ದರೂ ರಾಜ್ಯದಲ್ಲಿ ಪಕ್ಷ ಜಯ ಗಳಿಸಿರುವುದರಿಂದ ಪಕ್ಷದ ಬೆಂಬಲಿಗರು ಎದೆಗುಂದದೆ ಕಾರ್ಯನಿರ್ವಹಿಬೇಕು. ನಾನು ಇನ್ನು ಮುಂದೆಯೂ ಪಕ್ಷ ನೀಡುವ ಹೊಣೆಗಾರಿಕೆಯನ್ನು ನಿಷ್ಠೆಯಿಂದ ನಿಭಾಯಿಸುತ್ತೇನೆ. ಸೋತರೂ ಪಕ್ಷದ ಕಾರ್ಯಗಳಲ್ಲಿ ಮುಂಚೂಣಿಯಲ್ಲಿ ಇರುತ್ತೇನೆ. ಆದರೆ ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಹೇಳಿದ್ದಾರೆ.
ಮುಂಬರುವ ಜಿಲ್ಲಾ ಪಂಚಾಯತ ಹಾಗೂ ತಾಲೂಕು ಪಂಚಾಯತ ಚುನಾವಣೆ ಮತ್ತು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದು ರಮಾನಾಥ ರೈ ಕಾರ್ಯಕರ್ತರಿಗೆ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಚುನಾವಣೆ ವೇಳೆಯೇ ಬಿಜೆಪಿಗೆ ಗುಡ್‌ಬೈ ಹೇಳಿದ ಸಂಸದ ಕರಡಿ ಸಂಗಣ್ಣ : ಕಾಂಗ್ರೆಸ್‌ ಸೇರ್ಪಡೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement