ಉತ್ತರ ಪ್ರದೇಶ ನ್ಯಾಯಾಲಯದಲ್ಲಿ ಗುಂಡಿನ ಚಕಮಕಿ: ಇಬ್ಬರು ಕೊಲೆ ಆರೋಪಿಗಳ ಮೇಲೆ ಗುಂಡು ಹಾರಿಸಿದ ಇಬ್ಬರು

ಜೌನ್ಪುರ : : ಮಂಗಳವಾರ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆತಂದಿದ್ದ ಇಬ್ಬರು ಕೊಲೆ ಆರೋಪಿಗಳ ಮೇಲೆ ಇಬ್ಬರು ವ್ಯಕ್ತಿಗಳು ಮನಬಂದಂತೆ ಗುಂಡು ಹಾರಿಸಿದ ಘಟನೆ ಉತ್ತರ ಪ್ರದೇಶದ ಜೌನ್‌ಪುರ ನ್ಯಾಯಾಲಯದ ಆವರಣದಲ್ಲಿ ನಡೆದಿದೆ.
2022ರ  ಮೇ 6 ರಂದು ಧರ್ಮಪುರದಲ್ಲಿ ಕುಸ್ತಿಪಟು ಬಾದಲ್ ಯಾದವ್ ಅವರನ್ನು ಕೊಂದ ಇಬ್ಬರು ಆರೋಪಿಗಳಾದ ಸೂರ್ಯ ಪ್ರಕಾಶ್ ಮತ್ತು ಮಿಥಿಲೇಶ್ ಗಿರಿ ಅವರನ್ನು ದಿವಾಣಿ ನ್ಯಾಯಾಲಯಕ್ಕೆ ಕರೆತರಲಾಯಿತು, ಅಲ್ಲಿ ಇಬ್ಬರು ದುಷ್ಕರ್ಮಿಗಳು ಅವರ ಮೇಲೆ ಗುಂಡು ಹಾರಿಸಿದ್ದಾರೆ. ಘಟನೆ ನಡೆದ ಕೂಡಲೇ ಆವರಣದಲ್ಲಿದ್ದ ವಕೀಲರು ಶೂಟರ್‌ಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಕೊಲೆ ಆರೋಪಿಗಳಿಬ್ಬರನ್ನೂ ಜಿಲ್ಲಾಸ್ಪತ್ರೆಗೆ ಒಯ್ಯಲಾಯಿತು, ಅವರ ಸ್ಥಿತಿ ಚಿಂತಾಜನಕವಾಗಿದ್ದರಿಂದ ವರಸಾನಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಏತನ್ಮಧ್ಯೆ, ಪೊಲೀಸರು ಶೂಟರ್‌ಗಳನ್ನು ವಿಚಾರಣೆ ನಡೆಸುತ್ತಿದ್ದು, ಅವರ ಗುರುತುಗಳನ್ನು ಇನ್ನೂ ಬಹಿರಂಗಪಡಿಸಬೇಕಾಗಿದೆ.
ಕಳೆದ ತಿಂಗಳು ಪೊಲೀಸ್ ಕಸ್ಟಡಿಯಲ್ಲಿ ವೈದ್ಯಕೀಯ ತಪಾಸಣೆಗಾಗಿ ಕರೆದೊಯ್ಯುತ್ತಿದ್ದಾಗ ಗ್ಯಾಂಗ್‌ಸ್ಟರ್‌-ರಾಜಕಾರಣಿ ಅತಿಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ಅವರನ್ನು ಗುಂಡು ಹಾರಿಸಿಕೊಂದ ಘಟನೆ ಇತ್ತೀಚಿಗೆ ನಡೆದಿತ್ತು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement