ವೀಡಿಯೊ…: ಕಟೀಲು ದೇವಸ್ಥಾನದ ಮುಂಭಾಗದಲ್ಲಿ ಹೊತ್ತಿ ಉರಿದ ಖಾಸಗಿ ಬಸ್‌

ಮಂಗಳೂರು : ಖಾಸಗಿ ಬಸ್ಸಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ದೇವಸ್ಥಾನದ ಮುಂಭಾಗದಲ್ಲಿ ಇಂದು, ಬುಧವಾರ ಮಧ್ಯಾಹ್ನ ಸಂಭವಿಸಿದೆ.
ಬಸ್ಸಿನಲ್ಲಿದ್ದ ಪ್ರಯಾಣಿಕರು ಪ್ರಯಾಣಿಕರು ಹಾಗೂ ಬಸ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಇಂದು ಮಧ್ಯಾಹ್ನ 2:30 ರ ಸುಮಾರಿಗೆ ಗೋಲ್ಡನ್ ಟ್ರಾವೆಲ್ಸ್ ಎಂಬ ಹೆಸರಿನ ಬಸ್ಸಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ದೇವಸ್ಥಾನದ ಮುಂಭಾಗವೇ ಬೆಂಕಿ ಹೊತ್ತಿಕೊಂಡಿದ್ದು, ಈ ವೇಳೆ ಬಸ್ಸಿನಲ್ಲಿ ಇಬ್ಬರ ಮಹಿಳೆಯರು ಮತ್ತು ಬಸ್ ಚಾಲಕ ಇದ್ದರು ಎಂದು ಹೇಳಲಾಗಿದ್ದು, ತಕ್ಷಣವೇ ಮೂವರು ಬಸ್ಸಿನಿಂದ ಇಳಿದ ಕಾರಣ ಅಪಾಯದಿಂದ ಪಾರಾಗಿದ್ದಾರೆ.

ಮಂಗಳೂರು – ಕಟೀಲು ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಈ ಬಸ್ ಕಟೀಲು ದೇಗುಲದ ಬಳಿ ನೌಕರರನ್ನು ಇಳಿಸಿ ವಾಪಸ್ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.ಬಸ್ಸಿಗೆ ಬೆಂಕಿ ಹೊತ್ತಿಕೊಂಡಿದ್ದಕ್ಕೆ ನಿಖರ ಕಾರಣ ತಿಳುದುಬಂದಿಲ್ಲ.

ಆದರೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಈ ವೇಳೆ ಸ್ಥಳದಲ್ಲಿ ನೀರು ಸರಬರಾಜು ಮಾಡುವ ಟ್ಯಾಂಕರ್ ಇದ್ದ ಕಾರಣ ಕೂಡಲೇ ಬೆಂಕಿಯನ್ನು ನಂದಿಸಲಾಗಿದೆ. ಹೆಚ್ಚಿನ ಅನಾಹುತ ತಪ್ಪಿದರೂ ಬಸ್ಸಿನ ಕೆಲ ಭಾಗ ಸುಟ್ಟು ಹೋಗಿದೆ.

ಪ್ರಮುಖ ಸುದ್ದಿ :-   ನಾಗಮಂಗಲ ಗಲಭೆ : ಕರ್ನಾಟಕ ಬಿಜೆಪಿಯಿಂದ ‘ಸತ್ಯ ಶೋಧನ ತಂಡ’ ರಚನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement