ಕಾಂಗ್ರೆಸ್ಸಿನಿಂದ ಇಂದು ಸಂಜೆ ರಾಜ್ಯದ ನೂತನ ‘ಮುಖ್ಯಮಂತ್ರಿ’ ಹೆಸರು ಘೋಷಣೆ…?

ಬೆಂಗಳೂರು : ಇಂದು, ಬುಧವಾರ ಸಂಜೆ 6 ಗಂಟೆಗೆ ರಾಜ್ಯದ ನೂತನ ಮುಖ್ಯಮಂತ್ರಿ ಯಾರಾಗುತ್ತಾರೆಂದು ಕಾಂಗ್ರೆಸ್‌ ಹೈಕಮಾಂಡ್‌ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ನಿಚ್ಚಳವಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಸಂಜೆ 6 ಗಂಟೆಗೆ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು ಎಂಬುದನ್ನು ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗಿದೆ.
ನಾಳೆ ಕರ್ನಾಟಕದ ನೂತನ ಮುಖ್ಯಮಂತ್ರಿ ಪ್ರಮಾಣವನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಹೇಳಲಾಗಿದ್ದು, ಮುಖ್ಯಮಂತ್ರಿ ಹುದ್ದೆ ಸಿದ್ದರಾಮಯ್ಯ ಅವರಿಗೆ ಬಹುತೇಕ ಫಿಕ್ಸ್‌ ಆಗಿದೆ ಎಂದು ಅವರ ಬೆಂಬಲಿಗರು ಹೇಳಿದ್ದಾರೆ. ಸದ್ಯ ಆ ಹುದ್ದೆ ಮಂಚಇಂದು ಬೆಳಿಗ್ಗೆ ಸಿದ್ದರಾಮಯ್ಯ ಇಂದು ಬೆಳಿಗ್ಗೆ ರಾಹುಲ್‌ ಗಾಂಧಿ ಭೇಟಿಯಾದ ನಂತರ ಬೆಳಿಗ್ಗೆ11:30ರ ಸುಮಾರಿಗೆ ಡಿಕೆ ಶಿವಕುಮಾರ ಅವರು ರಾಹುಲ್‌ ಗಾಂಧಿ ಭೇಟಿ ಮಾಡಿದರು. ಒಂದು ತಾಸಿಗೂ ಹೆಚ್ಚು ಕಾಲ ಮಾತುಕತೆ ನಡೆದ ನಂತರ ಅಲ್ಲಿಂದ ತೆರಳಿದ ಡಿಕೆ ಶಿವಕುಮಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿಗೆ ತೆರಳಿದ್ದಾರೆ.
ರಾಹುಲ್‌ ಭೇಟಿಯ ಸಮಯದಲ್ಲಿ ತನ್ನ ಶ್ರಮಕ್ಕೆ ತಕ್ಕ ಫಲ ಸಿಗಬೇಕು ಎಂದು ಶಿವಕುಮಾರ ಅವರು ತಮ್ಮ ವಾದ ಮಂಡಿಸಿದ್ದಾರೆ ಎನ್ನಲಾಗಿದೆ. ಆದರೆ ಹೈಕಮಾಂಡ್‌ ಎರಡು ವರ್ಷ ಮುಖ್ಯಮಂತ್ರಿ ಹುದ್ದೆಯನ್ನು ಸಿದ್ದರಾಮಯ್ಯ ಅವರಿಗೆ ನೀಡುವುದು ಹಾಗೂ ಮುಂದಿನ ಮೂರು ವರ್ಷದ ಅವಧಿಗೆ ಡಿಕೆ ಶಿವಕುಮಾರ ಮುಖ್ಯಮಂತ್ರಿ ಆಗುವುದು ಎಂಬ ಸೂತ್ರ ಸಿದ್ಧಪಡಿಸಿದೆ ಎನ್ನಲಾಗಿದೆ, ಆದರೆ ಇದನ್ನು ಡಿಕೆ ಶಿವಕುಮಾರ ಅವರ ಒಪ್ಪುತ್ತಿಲ್ಲ ಹಾಗೂ ತಮಗೆ ಮೊದಲ ಅವಧಿಗೆ ಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂಬ ಪ್ರಸ್ತಾಪ ಮುಂದಿಟ್ಟಿದ್ದು, ತನ್ನ ಶ್ರಮಕ್ಕೆ ತಕ್ಕೆ ಬೆಲೆ ಕೊಡಿ ಎಂದು ಕೇಳಿದ್ದಾರೆ ಎನ್ನಲಾಗಿದೆ.
ಈ ನಡುವೆ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಮುಖ್ಯಮಂತ್ರಿ ಪದಗ್ರಹಣ ಸ್ವೀಕಾರ ಸಮಾರಂಭ ಸಕಲ ಸಿದ್ಧತೆ ನಡೆಸಲಾಗುತ್ತಿದೆ. ವೇದಿಕೆ ಸಿದ್ಧತೆ ಕಾರ್ಯಕ್ರಮ, ಪೆಂಡಲ್. ಕುರ್ಚಿಯನ್ನು ಹಾಕಲಾಗುತ್ತಿದೆ. ಸ್ಥಳಕ್ಕೆ ಹಿರಿಯ ಪೋಲಿಸ್‌ ಅಧಿಕಾರಿಗಳು ಕೂಡ ಆಗಮಿಸಿದ್ದಾರೆ. ಶಾಸಕರಿಗೆ ಬೆಂಗಳೂರಿಗೆ ಬರಲು ಸೂಚನೆ ನೀಡಿದ್ದಾರೆ ಎನ್ನಲಾಗುತ್ತಿದೆ.

ಪ್ರಮುಖ ಸುದ್ದಿ :-   ʼಕನ್ನಡತಿʼ ಧಾರಾವಾಹಿಯ ನಟ ಕಿರಣ ರಾಜ್‌ ಕಾರು ಅಪಘಾತ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement