ನವದೆಹಲಿ: ಪಾಕಿಸ್ತಾನ ಮತ್ತು ಕೆನಡಾ ಸೇರಿದಂತೆ ವಿದೇಶಗಳಲ್ಲಿ ನೆಲೆಸಿರುವ ಗ್ಯಾಂಗ್‌ಸ್ಟರ್‌ಗಳು , ಮಾದಕವಸ್ತು ಕಳ್ಳಸಾಗಣೆದಾರರು ಮತ್ತು ಭಯೋತ್ಪಾದಕ ಗುಂಪುಗಳ ನಡುವಿನ ನಂಟು ಪ್ರಕರಣಗಳಿಗೆ ಸಂಬಂಧಿಸಿದಂತೆ ಹರಿಯಾಣ, ಪಂಜಾಬ್, ರಾಜಸ್ಥಾನ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಮಧ್ಯಪ್ರದೇಶ ರಾಜ್ಯಗಳ 122ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ಮಾಡಿದ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಶೋಧ ಕಾರ್ಯವನ್ನು ತೀವ್ರಗೊಳಿಸಿದೆ.
ಈವರೆಗೆ ಲಭ್ಯವಿರುವ ಮಾಹಿತಿ ಪ್ರಕಾರ, ಸುಮಾರು 12 ಅಧಿಕಾರಿಗಳನ್ನು ಒಳಗೊಂಡ ಎನ್‌ಐಎ ಅಧಿಕಾರಿಗಳ ತಂಡವು ಈ ಎಲ್ಲಾ ಸ್ಥಳಗಳಿಗೆ ಮುಂಜಾನೆ 4 ಗಂಟೆ ಸುಮಾರಿಗೆ ದಾಳಿ ನಡೆಸಿದ್ದು, ಶೋಧ ನಡೆಸುತ್ತಿದೆ.
ಪಂಜಾಬ್ ಗಡಿ ಜಿಲ್ಲೆಯ ಮೂರು ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿದ್ದು, ದಾಖಲೆಗಳನ್ನು ಶೋಧಿಸಲಾಗುತ್ತಿದೆ. ಪಂಜಾಬಿನ ಮುಡ್ಕಿ, ತಲವಂಡಿ ಮತ್ತು ಫಿರೋಜ್‌ಪುರದಲ್ಲಿ ಮೂವರ ಮನೆಗಳ ಮೇಲೆ ಎನ್ಐಎ ತಂಡ ತೆರಳಿದೆ ಎಂದು ತಿಳಿದುಬಂದಿದೆ. ಇದಲ್ಲದೇ, ಬಟಿಂಡಾದಲ್ಲಿಯೂ ಪರಿಶೀಲನೆ ನಡೆಸಿದ್ದು, ಅಪರಾಧ ಪ್ರಕರಣ ಹೊಂದಿರುವವರ ಮನೆಗಳ ಎನ್ಐಎ ಕಣ್ಣಿಟ್ಟಿದೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ, ಹರಿಯಾಣದ ಹಲವೆಡೆ ದಾಳಿ ನಡೆಸಲಾಗಿದೆ.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ಎರಡು ದಿನಗಳ ಹಿಂದಷ್ಟೇ (ಮೇ 15) ಭಯೋತ್ಪಾದಕರಿಗೆ ಹಣಕಾಸು ಸಹಾಯ ಮಾಡಿದ ಪ್ರಕರಣಗಳ ತನಿಖೆಯ ಭಾಗವಾಗಿ ರಾಷ್ಟ್ರೀಯ ತನಿಖಾ ಸಂಸ್ಥೆಯು ದಕ್ಷಿಣ ಕಾಶ್ಮೀರದ ಪುಲ್ವಾಮಾ ಮತ್ತು ಶೋಪಿಯಾನ್‌ನ ಅನೇಕ ಸ್ಥಳಗಳಲ್ಲಿ ದಾಳಿ ನಡೆಸಿತ್ತು. ನಕಲಿ ಹೆಸರುಗಳ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಭಯೋತ್ಪಾದಕ ಗುಂಪುಗಳಿಗೆ ಹಣಕಾಸು ಒದಗಿಸಿದ ಕ್ರಿಮಿನಲ್ ಪಿತೂರಿಗೆ ಸಂಬಂಧಿಸಿದಂತೆ ಎನ್‌ಐಎ ದಾಳಿ ನಡೆಸಿತ್ತು.
ಫೆಬ್ರವರಿಯಲ್ಲಿ, ಹರಿಯಾಣ, ಪಂಜಾಬ್ ಮತ್ತು ಚಂಡೀಗಢದಲ್ಲಿ ದರೋಡೆಕೋರರೊಂದಿಗೆ ಸಂಪರ್ಕ ಹೊಂದಿರುವ ಶಂಕಿತರ ಮನೆಗಳ ಮೇಲೆ ಎನ್ಐಎ ದಾಳಿ ನಡೆಸಿತ್ತು.
“ಉತ್ತರ ಭಾರತದಲ್ಲಿ ಸಕ್ರಿಯವಾಗಿರುವ ಹಲವಾರು ಕ್ರಿಮಿನಲ್ ಗ್ಯಾಂಗ್‌ಗಳು ಈಗ ದುಬೈನಿಂದ ಕಾರ್ಯನಿರ್ವಹಿಸುತ್ತಿವೆ ಮತ್ತು 1990 ರ ದಶಕದಲ್ಲಿ ಭೂಗತ ಜಗತ್ತಿನ ರೀತಿಯಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಲು ಖಾಲಿಸ್ತಾನ್ ಪರ ಸಂಘಟನೆಗಳು ತಮ್ಮ ಜಾಲಗಳನ್ನು ಬಳಸುತ್ತಿವೆ. ವಿದೇಶಗಳಲ್ಲಿ ನೆಲೆಸಿ ಭಯೋತ್ಪಾದಕ ಕೃತ್ಯಗಳನ್ನು ನಡೆಸಲು ಭಾರತೀಯ ಜೈಲುಗಳು ಮತ್ತು ಇತರ ದೇಶಗಳಲ್ಲಿ ಇರುವ ಖಾಲಿಸ್ತಾನ್ ಪರ ಸಂಘಟನೆಗಳೊಂದಿಗೆ ಸಂಪರ್ಕದಲ್ಲಿದ್ದಾರೆ” ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ