ಅಧಿಕಾರ ಹಂಚಿಕೆ ಸೂತ್ರಕ್ಕೆ ಬಹುತೇಕ ಒಪ್ಪಿಕೊಂಡ ಡಿಕೆ ಶಿವಕುಮಾರ…ಆದ್ರೂ ಮುಂದುವರಿದ ಸಿಎಂ ಆಯ್ಕೆ ಕಗ್ಗಂಟು ಯಾಕೆಂದರೆ…

ಬೆಂಗಳೂರು: ಕರ್ನಾಟಕದ ಮುಂದಿನ ಮುಖ್ಯಮಂತ್ರಿಯ ಯಾರೆಂದು ನಿರ್ಧರಿಸಲು ಚರ್ಚೆಗಳು ಮತ್ತು ಸರಣಿ ಸಭೆಗಳು ಸಭೆಗಳು ಮುಂದುವರೆದೆ. ಈ ಮಧ್ಯೆ ಕಾಂಗ್ರೆಸ್‌ ಹೈಕಮಾಂಡ್‌ ಪ್ರಸ್ತಾಪಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹಾಗೂ ಹಿರಿಯ ನಾಯಕ ಸಿದ್ದರಾಮಯ್ಯ ಅವರ ಮಧ್ಯೆ ಅಧಿಕಾರ ಹಂಚಿಕೆ ಒಪ್ಪಂದಕ್ಕೆ ಶಿವಕುಮಾರ ಒಪ್ಪಿಕೊಂಡಿದ್ದರೂ ಐದು ವರ್ಷಗಳ ಅಧಿಕಾರಾವಧಿಯ ಮೊದಲ ಅವಧಿಯಲ್ಲೇ ತನಗೆ ಮುಖ್ಯಮಂತ್ರಿ ನೀಡಬೇಕು ಎಂಬ ಬೇಡಿಕೆ ಮುಂದಿಟ್ಟಿದ್ದಾರೆ ಎನ್ನಲಾಗಿದೆ.
ಕರ್ನಾಟಕವು ತನ್ನ ಮುಂದಿನ ಮುಖ್ಯಮಂತ್ರಿಯ ಯಾರೆಂಬುದನ್ನು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಒಂದೆರಡು ದಿನಗಳಲ್ಲಿ ಘೋಷಿಸುವ ನಿರೀಕ್ಷೆಯಿದೆ. ಆದರೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಮುಖ್ಯಸ್ಥ ಡಿಕೆ ಶಿವಕುಮಾರ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಬ್ಬರು ತಮ್ಮ ತಮ್ಮ ನಿಲುವಿಗೆ ಅಂಟಿಕೊಂಡಿದ್ದರಿಂದ ಕಾಂಗ್ರೆಸ್‌ ಹೈಕಮಾಂಡಿಗೆ ನಿರ್ಧಾರ ತೆಗೆದುಕೊಳ್ಳುವುದು ಕಷ್ಟವಾಗುತ್ತಿದೆ ಎಂದು ಹೇಳಲಾಗಿದೆ.
ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ರಾಹುಲ್ ಗಾಂಧಿ, ಕೇಂದ್ರ ವೀಕ್ಷಕರು, ಮುಖ್ಯಮಂತ್ರಿ ಹುದ್ದೆಗೆ ಇಬ್ಬರು ಪ್ರಮುಖ ಸ್ಪರ್ಧಿಗಳಾದ ಶಿವಕುಮಾರ ಮತ್ತು ಸಿದ್ದರಾಮಯ್ಯ ಸೇರಿದಂತೆ ಪಕ್ಷದ ನಾಯಕರೊಂದಿಗೆ ಹಲವಾರು ಸಭೆಗಳನ್ನು ನಡೆಸಿದರು.

ಬುಧವಾರ ಬೆಳಿಗ್ಗೆ ಸಿದ್ದರಾಮಯ್ಯ ಹಾಗೂ ಶಿವಕುಮಾರ ಜೊತೆ ರಾಹುಲ್‌ ಗಾಂಧಿ ಪ್ರತ್ಯೇಕ ಸಭೆಗಳನ್ನು ನಡೆಸಿದರು. ನಂತರ ಶಿವಕುಮಾರ ಅವರು ಬುಧವಾರ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಮತ್ತೊಮ್ಮೆ ಭೇಟಿಯಾದರು. ಶಿವಕುಮಾರ ಅವರು ಮಣಿಯಲು ಸಿದ್ಧರಿಲ್ಲ ಮತ್ತು ಮುಖ್ಯಮಂತ್ರಿ ಸ್ಥಾನದ ಹೊರತಾಗಿ ಉಪ ಮುಖ್ಯಮಂತ್ರಿ ಹಾಗೂ ಸಚಿವ ಸ್ಥಾನವನ್ನು ಸ್ಥಾನವನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ, ಮೊದಲ ಆಯ್ಕೆಯು ಶಿವಕುಮಾರ ಅವರೊಬ್ಬರಿಗೆ ಉಪಮುಖ್ಯಮಂತ್ರಿ ಸ್ಥಾನವನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ನೀಡುವುದಾಗಿ ಭರವಸೆ ನೀಡಲಾಯಿತು. ಜೊತೆಗೆ ಆಯ್ಕೆಯ ಆರು ಸಚಿವಾಲಯಗಳನ್ನು ಸಹ ಅವರಿಗೆ ನೀಡುವ ಭರವಸೆ ನೀಡಲಾಯಿತು ಎಂದು ಮೂಲಗಳು ತಿಳಿಸಿವೆ. ಆದರೆ ಅದನ್ನು ಅವರು ಒಪ್ಪಲಿಲ್ಲ ಎನ್ನಲಾಗಿದೆ.ಪಕ್ಷವು ಎರಡೂ ನಾಯಕರಿಗೆ ಅಧಿಕಾರ ಹಂಚಿಕೆ ಪ್ರಸ್ತಾಪವನ್ನು ಮುಂದಿಟ್ಟಿದೆ, ಒಬ್ಬರು ಮೊದಲ 2.5 ವರ್ಷಗಳ ಮುಖ್ಯಮಂತ್ರಿಯಾದರೆ ಮತ್ತು ಇನ್ನೊಬ್ಬರು ಮುಂದಿನ ಅವಧಿಗೆ ಮುಖ್ಯಮಂತ್ರಿಯಾಗಲಿದ್ದಾರೆ. ಈ ಪ್ರಸ್ತಾಪವನ್ನು ಇಬ್ಬರೂ ಒಪ್ಪಿಕೊಂಡರೂ ಮೊದಲಾರ್ಧದ ಅವಧಿಗೆ ತಮಗೆ ಬೇಕೆಂದು ಪಟ್ಟಿಹಿಡಿರುವುದು ಸಮಸ್ಯೆಗೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್‌ ಹೈಕಮಾಂಡ್‌ ಸರ್ಕಾರದ್ಲಿ ಇಬ್ಬರನ್ನೂ ಬಯಸುತ್ತಿದೆ. ಅದು ಸಾಮೂಹಿಕ ನಾಯಕತ್ವಕ್ಕೆ ಆದ್ಯತೆ ನೀಡಿದೆ. ಹೀಗಾಗಿ ಹೈಕಮಾಂಡ್‌ಏಕವ್ಯಕ್ತಿ ಪ್ರದರ್ಶನವನ್ನು ಬಯಸುವುದಿಲ್ಲ. ಆದರೆ ಯಾರೂ ಬಗ್ಗಲು ಸಿದ್ಧರಿಲ್ಲದ ಕಾರಣ ಮಾತುಕತೆ ಮುಂದುವರಿದಿದೆ.ಹೀಗಾಗಿ ಮುಖ್ಯಮಂತ್ರಿ ಆಯ್ಕೆಯ ಕುತೂಹಲ ಮುಂದುವರಿದಿದ್ದು, ಘೋಷಣೆಗೆ ಕಾಂಗ್ರೆಸ್ ಆತುರ ಮಾಡುತ್ತಿಲ್ಲ ಎನ್ನಲಾಗಿದೆ.. ಸಮಾಲೋಚನೆ ಪ್ರಕ್ರಿಯೆ ಇನ್ನೂ ನಡೆಯುತ್ತಿರುವುದರಿಂದ ಮುಂದಿನ 48 ಗಂಟೆಗಳವರೆಗೆ ಯಾವುದೇ ಘೋಷಣೆಗಳನ್ನು ಮಾಡುವ ಸಾಧ್ಯತೆ ಕಡಿಮೆ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ರೈಲು ನಿಲ್ದಾಣದಲ್ಲಿ ವ್ಯಕ್ತಿಯ ಸಾವಿನ ರಹಸ್ಯ ಭೇದಿಸಿದ ರೈಲು ಪ್ರಯಾಣಿಕನ ಮೊಬೈಲ್‌ ಸೆಲ್ಫಿ...!

ಇದಕ್ಕೆ ಪುಷ್ಟಿ ನೀಡುವಂತೆ ಕರ್ನಾಟಕದ ಕಾಂಗ್ರೆಸ್‌ ಉಸ್ತುವಾರಿ ರಣದೀಪ ಸುರ್ಜೆವಾಲಾ ಅವರು ಮುಖ್ಯಮಂತ್ರಿ ಕುರಿತು ಅಂತಿಮ ನಿರ್ದಾರವಾಗಿಲ್ಲ, ಚರ್ಚೆಗಳು ನಡೆಯುತ್ತಿವೆ. ಹಾಗೂ ಒಂದೆರಡು ದಿನಗಳಲ್ಲಿ ಮುಖ್ಯಮಂತ್ರಿ ಹೆಸರನ್ನು ಪ್ರಕಟಿಸಲಾಗುತ್ತದೆ. ಅದನ್ನು ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಅವರೇ ಘೋಷಣೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ಈ ಮಧ್ಯೆ, ಮುಖ್ಯಮಂತ್ರಿ ಹುದ್ದೆಗೆ ಸಂಬಂಧಿಸಿದಂತೆ “ಪಕ್ಷಕ್ಕೆ ಮುಜುಗರವನ್ನುಂಟುಮಾಡುವ ಯಾವುದೇ ಹೇಳಿಕೆಗಳನ್ನು ನೀಡಬೇಡಿ ಎಂದು ಸಂದೇಶ ರವಾನಿಸಲಾಗಿದೆ ಎನ್ನಲಾಗಿದೆ. ಹೈಕಮಾಂಡ್‌ ಒಮ್ಮತ ಮೂಡಿಸಲು ಪ್ರಯತ್ನಿಸುತ್ತಿದೆ. ಇಬ್ಬರೂ ನಾಯಕರು ತಮ್ಮ ಪಟ್ಟಿ ಸಡಿಲಿಸಲು ಸಿದ್ಧರಿಲ್ಲ, ಆದ್ದರಿಂದ ಸೂತ್ರಗಳನ್ನು ರೂಪಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಮೇ 10 ರಂದು ನಡೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 224 ಸ್ಥಾನಗಳಲ್ಲಿ 135 ಸ್ಥಾನಗಳನ್ನು ಗೆದ್ದು ಬಹುಮತ ಪಡೆದಿದೆ. ಬಿಜೆಪಿ 66 ಸ್ಥಾನಗಳೊಂದಿಗೆ ಎರಡನೇ ಸ್ಥಾನದಲ್ಲಿದೆ ಮತ್ತು ಜೆಡಿಎಸ್ ಕೇವಲ 19 ಸ್ಥಾನಗಳೊಂದಿಗೆ ಕುಸಿದಿದೆ. ಚುನಾವಣಾ ಫಲಿತಾಂಶ ಪ್ರಕಟವಾದಾಗಿನಿಂದ ರಾಜ್ಯದ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಕಾಂಗ್ರೆಸಿಗೆ ಸವಾಲಾಗಿ ಪರಿಣಮಿಸಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement