ಪ್ರೇಮ ವಿವಾಹವಾದವರಲ್ಲೇ ಹೆಚ್ಚಿನ ವಿಚ್ಛೇದನಗಳಾಗುತ್ತಿವೆ : ಸುಪ್ರೀಂ ಕೋರ್ಟ್

ನವದೆಹಲಿ: ಪ್ರೇಮ ವಿವಾಹವಾದವರಲ್ಲೇ ಹೆಚ್ಚಿನ ವಿಚ್ಛೇದನಗಳು ಉಂಟಾಗುತ್ತಿವೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಟೀಕಿಸಿದೆ.
ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಸಂಜಯ ಕರೋಲ್ ಅವರ ಪೀಠವು ವೈವಾಹಿಕ ವಿವಾದದಿಂದ ಉದ್ಭವಿಸಿದ ವರ್ಗಾವಣೆ ಅರ್ಜಿಯ ವಿಚಾರಣೆ ನಡೆಸುತ್ತಿದ್ದಾಗ ಪ್ರಕರಣದ ವಕೀಲರು ವಿವಾಹವು ಪ್ರೇಮ ವಿವಾಹವಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ಇದಕ್ಕೆ ನ್ಯಾಯಮೂರ್ತಿ ಗವಾಯಿ ಅವರು ಪ್ರತಿಕ್ರಿಯಿಸಿ, ಹೆಚ್ಚಿನ ವಿಚ್ಛೇದನಗಳು ಪ್ರೇಮ ವಿವಾಹಗಳಿಂದ ಉದ್ಭವಿಸುತ್ತಿವೆ ಎಂದು ಹೇಳಿದರು ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ. ನ್ಯಾಯಾಲಯವು ಪ್ರಕರಣದಲ್ಲಿ ಮಧ್ಯಸ್ಥಿಕೆಗೆ ಪ್ರಸ್ತಾಪಿಸಿತು, ಇದನ್ನು ಪತಿ ವಿರೋಧಿಸಿದರು. ಆದರೆ, ಇತ್ತೀಚಿನ ತೀರ್ಪಿನ ದೃಷ್ಟಿಯಿಂದ ಅವರ ಒಪ್ಪಿಗೆಯಿಲ್ಲದೆ ವಿಚ್ಛೇದನ ನೀಡಬಹುದು ಎಂದು ಕೋರ್ಟ್ ಹೇಳಿದೆ. ನಂತರ ಪೀಠವು ಮಧ್ಯಸ್ಥಿಕೆಗೆ ಕರೆ ನೀಡಿತು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   100 ವರ್ಷಗಳಲ್ಲಿ ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮೊದಲ ಮಹಿಳಾ ಉಪಕುಲಪತಿ ನೇಮಕ

ನಿಮ್ಮ ಕಾಮೆಂಟ್ ಬರೆಯಿರಿ

advertisement