ಯುವ ಕಾಂಗ್ರೆಸ್ ಅಧ್ಯಕ್ಷ ಬಿ ವಿ ಶ್ರೀನಿವಾಸಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ಅಸ್ಸಾಂ ಕಾಂಗ್ರೆಸ್‌ ಯುವ ಘಟಕದ ಉಚ್ಚಾಟಿತ ನಾಯಕಿಯೊಬ್ಬರ ಗೌರವಕ್ಕೆ ಧಕ್ಕೆ ತಂದ ಆರೋಪದಲ್ಲಿ ಕರ್ನಾಟಕ ಮೂಲದ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ವಿ ಶ್ರೀನಿವಾಸ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಬುಧವಾರ ನಿರೀಕ್ಷಣಾ ಜಾಮೀನು ನೀಡಿದೆ.
ತನಗೆ ಮಾನಸಿಕ ಹಿಂಸೆ ನೀಡಿದ್ದಾರೆಂದು ಆರೋಪಿಸಿ ಅಸ್ಸಾಂ ಕಾಂಗ್ರೆಸ್‌ ಯುವ ಘಟಕದ ಅಧ್ಯಕ್ಷೆಯಾಗಿದ್ದ ಈಗ ಉಚ್ಚಾಟಿತ ನಾಯಕಿ ಅವರು ಶ್ರೀನಿವಾಸ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು. ಗುವಾಹತಿ ಹೈಕೋರ್ಟ್ ಶ್ರೀನಿವಾಸ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ನಂತರ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ ಹಾಗೂ ಸಂಜಯ ಕರೋಲ್ ಅವರ ಪೀಠವು ಜುಲೈ 10 ರೊಳಗೆ ತಮ್ಮ ಉತ್ತರವನ್ನು ಕೋರಿ ಅಸ್ಸಾಂ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಶ್ರೀನಿವಾಸ ಅವರಿಂದ ₹50,000 ಬಾಂಡ್ ಮತ್ತು ಒಂದು ಅಥವಾ ಎರಡು ಶ್ಯೂರಿಟಿಗಳನ್ನು ಪಡೆದು ನಿರೀಕ್ಷಣಾ ಜಾಮೀನು ನೀಡುವಂತೆ ನ್ಯಾಯಾಲಯ ಆದೇಶಿಸಿತು. ತನಿಖೆಗೆ ಸಹಕರಿಸುವಂತೆ ಶ್ರೀನಿವಾಸ ಅವರಿಗೆ ನಿರ್ದೇಶನ ನೀಡಿದ ನ್ಯಾಯಾಲಯ ಈ ಸಂಬಂಧ ಅಸ್ಸಾಂ ಸರ್ಕಾರಕ್ಕೂ ನೋಟಿಸ್‌ ನೀಡಿತು. ಎಫ್ಐಆರ್ ದಾಖಲಿಸಲು ಒಂದು ತಿಂಗಳ ವಿಳಂಬವನ್ನು ಪರಿಗಣಿಸಿ, ಅರ್ಜಿದಾರರು ಮಧ್ಯಂತರ ರಕ್ಷಣೆಗೆ ಅರ್ಹರಾಗಿದ್ದಾರೆ” ಎಂದು ಸುಪ್ರೀಂ ಕೋರ್ಟ್ ಪೀಠ ಹೇಳಿದೆ.
ದೂರು ದಾಖಲಿಸುವ ಮುನ್ನ ಮಹಿಳೆ ಟ್ವಿಟರ್‌ನಲ್ಲಿ ತಾರತಮ್ಯದ ಆರೋಪಗಳನ್ನು ಮಾಡಿದ್ದರು ಎಂದು ಶ್ರೀನಿವಾಸ ಅವರ ವಕೀಲ ಅಭಿಷೇಕ ಸಿಂಘ್ವಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದರು. ಅವರು ದೂರು ಸಲ್ಲಿಸುವ ಮೊದಲು ಮಾಧ್ಯಮಗಳಿಗೆ ಆರು ಸಂದರ್ಶನಗಳನ್ನು ನೀಡಿದ್ದರು ಮತ್ತು ಅವರ ಯಾವುದೇ ಹೇಳಿಕೆಯಲ್ಲಿ “ಲೈಂಗಿಕ ಕಿರುಕುಳ ಆರೋಪಗಳು” ಇಲ್ಲ ಎಂದು ಸಿಂಘ್ವಿ ಹೇಳಿದರು.
ಅಸ್ಸಾಂ ಸರ್ಕಾರದ ಪರ ವಕೀಲರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಅವರು, ಶ್ರೀನಿವಾಸ ಅವರು ಪೊಲೀಸರ ಸಮನ್ಸ್ ಮತ್ತು ರಾಷ್ಟ್ರೀಯ ಮಹಿಳಾ ಆಯೋಗ ನೀಡಿದ ನೋಟಿಸ್‌ಗೆ ಪ್ರತಿಕ್ರಿಯಿಸಲಿಲ್ಲ ಎಂದು ವಾದಿಸಿದರು.

ಪ್ರಮುಖ ಸುದ್ದಿ :-   ನಟಿ ಸಿದ್ಧಾರ್ಥ- ನಟಿ ಅದಿತಿ ರಾವ್ ಮದುವೆ ಆಗಿಲ್ಲ : ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ; ಸ್ಪಷ್ಟನೆ ನೀಡಿದ ಅದಿತಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement