ದಲಿತರನ್ನು ಉಪಮುಖ್ಯಮಂತ್ರಿ ಮಾಡದಿದ್ದರೆ…: ಕಾಂಗ್ರೆಸ್ ನಾಯಕ ಡಾ. ಪರಮೇಶ್ವರ ಹೇಳಿದ್ದೇನು..?

ಬೆಂಗಳೂರು: ದಲಿತರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನ ನೀಡದಿದ್ದಲ್ಲಿ ವ್ಯತಿರಿಕ್ತ ಪರಿಣಾಮ ಉಂಟಾಗಿ ಪಕ್ಷಕ್ಕೆ ತೊಂದರೆಯಾಗಲಿದೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಜಿ ಪರಮೇಶ್ವರ ಅವರು ಹೇಳಿದ್ದಾರೆ. ಎಚ್‌.ಡಿ. ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಡಾ. ಪರಮೇಶ್ವರ ಅವರು ಉಪಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥರಾಗಿ (ಎಂಟು ವರ್ಷಗಳು) … Continued

ಮೇ 28ರಂದು ನೂತನ ಸಂಸತ್ ಕಟ್ಟಡ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ನವದೆಹಲಿ: ನೂತನ ಸಂಸತ್ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮೇ 28 ರಂದು ಉದ್ಘಾಟಿಸಲಿದ್ದಾರೆ. ನಾಲ್ಕು ಅಂತಸ್ತಿನ ಕಟ್ಟಡದಲ್ಲಿ 1,200 ಸಂಸದರು ಇರಬಹುದಾಗಿದೆ. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಗುರುವಾರ ಪ್ರಧಾನಿಯವರನ್ನು ಭೇಟಿ ಮಾಡಿ ನೂತನ ಸಂಸತ್ ಭವನವನ್ನು ಉದ್ಘಾಟಿಸುವಂತೆ ಆಹ್ವಾನಿಸಿದರು. ಹೊಸ ಕಟ್ಟಡವು ಸ್ವಾವಲಂಬಿ ಭಾರತ ಅಥವಾ ಆತ್ಮನಿರ್ಭರ ಭಾರತದ ಚೈತನ್ಯವನ್ನು … Continued

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಸಿದ್ದರಾಮಯ್ಯ ಆಯ್ಕೆ

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಶಾಸಕಾಂಗ ನಾಯಕರಾಗಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಯಿತು. ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡುವ ಪ್ರಸ್ತಾವವನ್ನು ಸಭೆಯಲ್ಲಿ ಡಿಕೆ ಶಿವಕುಮಾರ ಮಂಡಿಸಿದರು. ಇದಕ್ಕೆ ಡಾ. ಜಿ ಪರಮೇಶ್ವರ, ಎಚ್ ಕೆ‌ ಪಾಟೀಲ್, ಆರ್ ವಿ ದೇಶಪಾಂಡೆ, ಎಂಬಿ ಪಾಟೀಲ,‌ ಲಕ್ಷ್ಮೀ‌ ಹೆಬ್ಬಾಳ್ಕರ, ತನ್ವೀರ್ ಸೇಠ್,‌ … Continued

ನಾನು ಡಿಸಿಎಂ ಆಕಾಂಕ್ಷಿ, ನನಗೆ ಕೊಡಬೇಕು : ಡಾ.ಜಿ ಪರಮೇಶ್ವರ ಒತ್ತಾಯ

ಬೆಂಗಳೂರು: ಉಪಮುಖ್ಯಮಂತ್ರಿ ಸ್ಥಾನ ಕೇಳುವುದು ಏನಿದೆ, ನನಗೆ ಕೊಡಬೇಕು ಎಂದು ಡಾ.ಜಿ ಪರಮೇಶ್ವರ ಹೇಳಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥರಾಗಿ (ಎಂಟು ವರ್ಷಗಳು) ಸುದೀರ್ಘ ಸೇವೆ ಸಲ್ಲಿಸಿರುವ ಪರಮೇಶ್ವರ ಅವರ ಪ್ರತಿಕ್ರಿಯೆ ಸಿದ್ದರಾಮಯ್ಯ ಮುಖ್ಯಮಂತ್ರಿ ಮತ್ತು ಡಿ.ಕೆ. ಶಿವಕುಮಾರ ಅವರ ಏಕೈಕ ಉಪಮುಖ್ಯಮಂತ್ರಿ ನೇಮಕ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ಘೋಷಿಸಿದ … Continued

ಮೇ 21, 22 ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಬೆಂಗಳೂರು (Bengaluru) ಹಾಗೂ ರಾಜ್ಯದ ಹಲವೆಡೆ ಮೇ 21 ಮತ್ತು 22 ರಂದು ಮಳೆ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಗುಡುಗು, ಸಿಡಿಲು ಮತ್ತು ಗಾಳಿಯೊಂದಿಗೆ ಮಳೆಯಾಗಲಿದೆ. ಮೇ 22 ರಂದು ಕರಾವಳಿ ಪ್ರದೇಶದಲ್ಲಿಯೂ ಗುಡುಗು ಮಿಂಚಿನಿಂದ ಕೂಡದ ಗಾಳಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ವಾರಾಂತ್ಯದಲ್ಲಿ … Continued

ಜಲ್ಲಿಕಟ್ಟು, ಕಂಬಳ ಕ್ರೀಡೆಗಳಿಗೆ ಸುಪ್ರೀಂ ಕೋರ್ಟ್‌ ಅನುಮತಿ; ತಿದ್ದುಪಡಿ ಕಾಯಿದೆ ಎತ್ತಿ ಹಿಡಿದ ನ್ಯಾಯಾಲಯ

ನವದೆಹಲಿ: ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯಿದೆಗೆ (ಪಿಸಿಎ) ತಮಿಳುನಾಡು ಸರ್ಕಾರ ಮಾಡಿರುವ ತಿದ್ದುಪಡಿಗಳ ಸಿಂಧುತ್ವವನ್ನು ಸುಪ್ರೀಂ ಕೋರ್ಟ್‌ ಸಾಂವಿಧಾನಿಕ ಪೀಠ ಗುರುವಾರ ಎತ್ತಿಹಿಡಿದಿದೆ. ಆ ಮೂಲಕ ರಾಜ್ಯದ ಸಾಂಪ್ರದಾಯಿಕ ಜಲ್ಲಿಕಟ್ಟು ಕ್ರೀಡೆಗೆ ಅನುಮತಿ ನೀಡಿದೆ. ಇದೇ ವೇಳೆ, ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಕಂಬಳ ಮತ್ತು ಎತ್ತಿನಗಾಡಿ ಓಟಕ್ಕೆ ಅನುಮತಿ ನೀಡುವ ಕಾನೂನುಗಳನ್ನು ಕೂಡ ನ್ಯಾಯಾಲಯ … Continued

ಪಶ್ಚಿಮ ಬಂಗಾಳದಲ್ಲಿ ‘ದಿ ಕೇರಳ ಸ್ಟೋರಿ’ ಪ್ರದರ್ಶನಕ್ಕೆ ನಿಷೇಧ ಆದೇಶಕ್ಕೆ ತಡೆ ನೀಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ‘ದಿ ಕೇರಳ ಸ್ಟೋರಿ’ ಪ್ರದರ್ಶನವನ್ನು ನಿಷೇಧಿಸಿ ಪಶ್ಚಿಮ ಬಂಗಾಳ ಸರ್ಕಾರ ಮೇ 8 ರಂದು ಹೊರಡಿಸಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಇಂದು ಗುರುವಾರ ತಡೆ ನೀಡಿದೆ. ಪಶ್ಚಿಮ ಬಂಗಾಳ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಿದ ಸುಪ್ರೀಂ ಕೋರ್ಟ್, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಪಶ್ಚಿಮ ಬಂಗಾಳ ಸರ್ಕಾರದ ಆದ್ಯ ಕರ್ತವ್ಯವಾಗಿದೆ ಎಂದು … Continued

ಮುಂಬೈ 26/11 ದಾಳಿ ಆರೋಪಿ ತಹವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕ ಕೋರ್ಟ್ ಅನುಮತಿ

ವಾಷಿಂಗ್ಟನ್: 2008ರ ಮುಂಬೈ ಭಯೋತ್ಪಾದನಾ ದಾಳಿಯಲ್ಲಿ ಭಾಗಿಯಾಗಿ ಜೈಲಿನಲ್ಲಿರುವ ಪಾಕಿಸ್ತಾನಿ ಮೂಲದ ಕೆನಡಾದ ಉದ್ಯಮಿ ತಹವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಬಹುದು ಎಂದು ಅಮೆರಿಕದ ಕ್ಯಾಲಿಫೋರ್ನಿಯಾ ನ್ಯಾಯಾಲಯ ತೀರ್ಪು ನೀಡಿದೆ. ಮೇ 16ರಂದು ಲಾಸ್ ಏಂಜಲೀಸ್‌ನ ಸೆಂಟ್ರಲ್ ಡಿಸ್ಟ್ರಿಕ್ಟ್‌ನಲ್ಲಿರುವ ಅಮೆರಿಕದ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಜಾಕ್ವೆಲಿನ್ ಚೂಲ್‌ಜಿಯನ್ ಅವರು 62 ವರ್ಷದ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಬಹುದೆಂದು ನ್ಯಾಯಾಲಯವು … Continued

ಸಿದ್ದರಾಮಯ್ಯ ಕರ್ನಾಟಕದ ನೂತನ ಸಿಎಂ, ಶಿವಕುಮಾರ ಏಕೈಕ ಡಿಸಿಎಂ : ಅಧಿಕೃತವಾಗಿ ಘೋಷಣೆ ಮಾಡಿದ ಕಾಂಗ್ರೆಸ್‌

ನವದೆಹಲಿ: ಸಿದ್ದರಾಮಯ್ಯ ಅವರನ್ನು ಕರ್ನಾಟಕದ ಮುಖ್ಯಮಂತ್ರಿ ಎಂದು ಕಾಂಗ್ರೆಸ್ ಗುರುವಾರ ಅಧಿಕೃತವಾಗಿ ಘೋಷಿಸಿದೆ. ಡಿ.ಕೆ. ಶಿವಕುಮಾರ ಅವರು ಏಕೈಕ ಉಪಮುಖ್ಯಮಂತ್ರಿ ಆಗಲಿದ್ದಾರೆ ಮತ್ತು ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರಿಯುತ್ತಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ ಪ್ರಕಟಿಸಿದ್ದಾರೆ. ಸಂಸತ್ ಚುನಾವಣೆ ಮುಗಿಯುವವರೆಗೂ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ಮೇ 20 ರಂದು ಮುಖ್ಯಮಂತ್ರು, ಉಪಮುಖ್ಯಮಂತ್ರಿ … Continued

ಧಾರವಾಡ: ಐಟಿಐ ಉತ್ತೀರ್ಣರಾದವರಿಗೆ ಕ್ಯಾಂಪಸ್ ಸಂದರ್ಶನ

ಧಾರವಾಡ: ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಮಂಜುನಾಥೇಶ್ವರ ಐ.ಟಿ.ಐ ಕಾಲೇಜಿನಲ್ಲಿ ಬೇಲೂರಿನ ಮಾಡೆಲ್ ಇನ್‌ಫ್ರಾ ಕಾರ್ಪೋರೇಶನ್ ಪ್ರೈ.ಲಿ ನವರು ಮೇ 23ರಂದು ಕ್ಯಾಂಪಸ್‌ ಸಂದರ್ಶನ ನಡೆಸಲಿದ್ದಾರೆ. ಐ.ಟಿ.ಐ ವೆಲ್ಡರ್, ಫಿಟ್ಟರ್, ಗ್ರೈಂಡರ್‌, ಮಶಿನಿಸ್ಟ್‌ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ ಏರ್ಪಡಿಸಿದ್ದಾರೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಅತ್ಯುತ್ತಮ ವೇತನದೊಂದಿಗೆ ಇ.ಎಸ್.ಐ, ಫಿ.ಎಫ್ ಹಾಗೂ ಊಟದ ಸೌಲಭ್ಯವನ್ನು ಸಹ ಕಂಪನಿಯವರು ನೀಡಲಿದ್ದು, … Continued